Connect with us

    LATEST NEWS

    ರಾಜ್ಯಾದ್ಯಂತ ಜೋರಾಗಿದೆ ಚುನಾವಣಾ ಬೆಟ್ಟಿಂಗ್ ದಂಧೆ-ನಗ-ನಗದು,ಜಮೀನು ಜಾನುವಾರುಗಳು ಪಣಕ್ಕೆ..!

    Published

    on

    ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿ ಇದ್ದು ಇದರ ನಡುವೆ ಯಾರು ಯಾರು ಚುನಾವಣೆಯಲ್ಲಿ ಗೆಲ್ತಾರೆ ಎಂಬುದರ ಬಗ್ಗೆ ಬೆಟ್ಟಿಂಗ್​ ಎಲ್ಲೆಡೆ ಜೋರಾಗಿ ನಡೆಯುತ್ತಿದೆ.  

    ಮೈಸೂರು/ಮಂಡ್ಯ :  ರಾಜ್ಯ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶಕ್ಕೆ ಇನ್ನು ಒಂದೇ ದಿನ ಬಾಕಿ ಇದ್ದು ಇದರ ನಡುವೆ ಯಾರು ಯಾರು ಚುನಾವಣೆಯಲ್ಲಿ ಗೆಲ್ತಾರೆ ಎಂಬುದರ ಬಗ್ಗೆ ಬೆಟ್ಟಿಂಗ್​ ಎಲ್ಲೆಡೆ ಜೋರಾಗಿ ನಡೆಯುತ್ತಿದೆ.

    ರಾಜ್ಯಾದ್ಯಾಂತ ಕೋಟ್ಯಾಂತರ ರೂಪಾಯಿಗಳ ಬೆಟ್ಟಿಂಗ್ ನಡೆದಿರುವ ಶಂಕೆ ವ್ಯಕ್ತವಾಗಿದೆ.

    500, 1000, 5000 ಮತ್ತು 10000 ಸಾವಿರದಿಂದ ಹಿಡಿದು ಲಕ್ಷಾಂತರ ರೂಪಾಯಿ ಬೆಟ್ಟಿಂಗ್ ನಡೆಯುತ್ತಿದೆ.

    ಅಡಿಕೆ ತೋಟ, ಭತ್ತದ ಗದ್ದೆ, ಸೈಟ್ ಅನ್ನು ಜನರು ಬಾಜಿ ಕಟ್ಟುತ್ತಿದ್ದಾರೆ. ಕಾಂಗ್ರೆಸ್​, ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ಮೇಲೆ ಹೆಚ್ಚಿನ ಬೆಟ್ಟಿಂಗ್ ನಡೆಯುತ್ತಿದೆ.

    ಹೊನ್ನಾಳಿ ಕಾಂಗ್ರೆಸ್ ಅಭ್ಯರ್ಥಿ ಡಿ.ಜಿ.ಶಾಂತನಗೌಡ ಗೆಲ್ಲುತ್ತಾರೆ ಅಂತ 2 ಎಕರೆ ಜಮೀನನ್ನು ಹೊನ್ನಾಳಿ ತಾಲೂಕಿನ ಚಿಕ್ಕಗೋಣಿಗೆರೆ ಗ್ರಾಮದ ಹೆಬ್ಬಾರ ನಾಗಣ್ಣ ಎಂಬುವರು ಬಾಜಿಗಿಟ್ಟಿದ್ದಾರೆ.

    ಡಂಗುರ ಸಾರಿಸಿ ಚಿಕ್ಕಗೋಣಿಗೆರೆ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ಬರುವಂತೆ ಗ್ರಾಮದ ಬೀದಿ ಬೀದಿಯಲ್ಲಿ ಡಂಗುರ ಸಾರಿಸಿ ಪಂಥಾಹ್ವಾನ ನೀಡಿದ್ದಾರೆ.

    ಜಿದ್ದಾಜಿದ್ದಿನ ಕ್ಷೇತ್ರಗಳಾದ ಚನ್ನಗಿರಿ-ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬೆಟ್ಟಿಂಗ್ ಜೋರಾಗಿದೆ. ದಕ್ಷಿಣದಲ್ಲಿ ಶಾಮನೂರು ಶಿವಶಂಕರಪ್ಪ, ಅಜಯ ಕುಮಾರ್ ಗೆಲ್ತಾರೆ ಅಂತ ಬೆಂಬಲಿಗರು ಬೆಟ್ಟಿಂಗ್ ಕಟ್ಟಿದ್ದಾರೆ.

    ಚನ್ನಗಿರಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಡಾಳು ಮಲ್ಲಿಕಾರ್ಜುನ ಪರ ಬೆಟ್ಟಿಂಗ್‌ ಜೋರು ನಡೆಯುತ್ತಿದೆ.

    ಇತ್ತ ಸಕ್ಕರೆ ನಾಡು ಮಂಡ್ಯದಲ್ಲೂ ಬೆಟ್ಟಿಂಗ್ ಜೋರಾಗಿದೆ.

    ಜನರು ಛಾಪಾ ಕಾಗದದಲ್ಲಿ 5 ಲಕ್ಷದ ಬೆಟ್ಟಿಂಗ್ ಅಗ್ರಿಮೆಂಟ್ ಮಾಡಿಕೊಂಡಿರುವ ಸುದ್ದಿ ಹೆಚ್.ಡಿ. ಕೋಟೆ ಕ್ಷೇತ್ರದಲ್ಲಿ ಹರಿದಾಡುತ್ತಿದೆ.

    ಪ್ರಕಾಶ್‌ ಹಾಗೂ ಶಿವರಾಜ್‌ ಎನ್ನುವವರು ಜೆಡಿಎಸ್‌ ಅಭ್ಯರ್ಥಿ ಪರವಾಗಿ, ಜಯರಾಮ್‌ ನಾಯ್ಕ ಎನ್ನುವವವರು ಕಾಂಗ್ರೆಸ್‌ ಅಭ್ಯರ್ಥಿ ಪರ 5 ಲಕ್ಷ ರೂಪಾಯಿ ಕಟ್ಟಿ ಅಗ್ರಿಮೆಂಟ್‌ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

    ಮತ್ತೊಂದೆಡೆ ಪಿರಿಯಾಪಟ್ಟಣ ತಾಲೂಕು ಹಾರನಹಳ್ಳಿ ಗ್ರಾಮದ ಯೋಗೇಶ್ ಗೌಡ ಎಂಬ ಕಾಂಗ್ರೆಸ್‌ ಮುಖಂಡ ಕೂಡಾ ಬೆಟ್ಟಿಂಗ್‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ‌

    ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ವಾದ ಮೇಲೆ ಈತ ಬರೊಬ್ಬರಿ 1 ಎಕರೆ 37 ಗುಂಟೆ ಜಮೀನನ್ನು ಪಣಕ್ಕೆ ಇಟ್ಟಿದ್ದಾರೆ.

    ಈ ಹಿಂದಿನ ಚುನಾವಣೆಯಲ್ಲಿ ನಗದು, ಬೈಕ್, ಬಂಗಾರದ ಬೆಟ್ಟಿಂಗ್ ಸಾಮಾನ್ಯವಾಗಿದ್ದರೆ, ಈ ಬಾರಿ ಗ್ರಾಮಸ್ಥರು ಆಡು, ಕುರಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದಾರೆ ಎನ್ನಲಾಗಿದೆ.

    ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಈ ಬೆಟ್ಟಿಂಗ್‌ ದಂಧೆಗೆ ಬ್ರೇಕ್‌ ಹಾಕಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending