DAKSHINA KANNADA
ಚುನಾವಣಾ ಬಾಂಡ್ ಅಕ್ರಮ : ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್‌ಗೆ ರಿಲೀಫ್
Published
2 months agoon
By
NEWS DESK4ಮಂಗಳೂರು : ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್‌ಗೆ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಅರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದ ದೂರಿನ ನಂತರ ವಿಶೇಷ ನ್ಯಾಯಾಲಯವೊಂದರ ನಿರ್ದೇಶನದಂತೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 384( ಸುಲಿಗೆಗೆ ಶಿಕ್ಷೆ) 120 ಬಿ (ಕ್ರಿಮಿನಲ್ ಪಿತೂರಿ) 34 (ಸಾಮಾನ್ಯ ಉದ್ದೇಶದೊಂದಿಗೆ ಹಲವಾರು ವ್ಯಕ್ತಿಗಳು ಮಾಡಿದ ಕಾರ್ಯಗಳು) ಅಡಿಯಲ್ಲಿ ಸೀತಾರಾಮನ್, ಇಡಿ ಅಧಿಕಾರಿಗಳು ಮತ್ತು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರೂ ಎಫ್ ಐಆರ್ ನಲ್ಲಿ ಕೇಳಿ ಬಂದಿತ್ತು.
ಇದನ್ನೂ ಓದಿ : ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್‌ನ ಖ್ಯಾತ ನಟಿಯ ತಂಗಿ ಅರೆಸ್ಟ್
ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಪ್ರತಿಷ್ಟಿತ ಕಂಪೆನಿಗಳಿಂದ ಸುಮಾರು 8 ಸಾವಿರ ಕೋಟಿ ರೂ.ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ಸಂಸ್ಥಾಪಕ ಆದರ್ಶ್ ಆರ್.ಅಯ್ಯರ್ ಎಂಬವರು ದೂರು ದಾಖಲಿಸಿದ್ದರು.
DAKSHINA KANNADA
ಉಳ್ಳಾಲ : ಕೋಟೆಕಾರು ಬ್ಯಾಂಕ್ ರಾಬರಿ ಪ್ರಕರಣ; ಖದೀಮರು ಸಿಕ್ಕಿ ಬಿದ್ದಿದ್ದು ಎಲ್ಲಿ?
Published
49 minutes agoon
21/01/2025By
NEWS DESK4ಉಳ್ಳಾಲ : ಕೋಟೆಕಾರು ವ್ಯವಸಾಯ ಸಹಕಾರಿ ಸಂಘ ಕೆ.ಸಿ.ರೋಡ್ ತಲಪಾಡಿ ಶಾಖೆ ಕಚೇರಿಯಲ್ಲಿ ಶುಕ್ರವಾರ(ಜ.17) ನಡೆದ ಕೋಟ್ಯಂತರ ರೂ. ಮೌಲ್ಯದ ನಗ ನಗದು ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಅಮ್ಮನಕೋವಿಲ್‌ನ ಮುರುಗಂಡಿ ತೇವರ್ (36), ಮುಂಬೈ ಗೋಪಿನಾಥ್ ಚೌಕ ನಿವಾಸಿ ಯೋಸುವಾ ರಾಜೇಂದ್ರನ್ (35) , ಮುಂಬೈ ಚೆಂಬೂರ್‌ನ ತಿಲಕ್‌ನಗರದ ಕಣ್ಣನ್ ಮಣಿ (36) ಬಂಧಿತ ಆರೋಪಿಗಳು ಎಂದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಸಹಕಾರಿ ಸಂಘದಿಂದ ದರೋಡೆ ಮಾಡಿ ಕೇರಳ ಮೂಲಕ ತಮಿಳುನಾಡಿಗೆ ಆರೋಪಿಗಳು ಪರಾರಿಯಾಗಿದ್ದರು. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ ದರೋಡೆಗೆ ಬಳಸಿದ ಕಾರು, ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ :ಆರ್‌ಜಿಕರ್ ವೈದ್ಯೆ ಅ*ತ್ಯಾಚಾರ, ಕೊ*ಲೆ ಪ್ರಕರಣ : ಆರೋಪಿ ಸಂಜಯ್ ರಾಯ್‌ಗೆ ಶಿಕ್ಷೆ ಪ್ರಕಟ
ಸ್ಥಳೀಯರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದೆ. ಸ್ಥಳೀಯರ ಬೆಂಬಲ ಇಲ್ಲದೆ ಈ ಕೃತ್ಯ ಮಾಡಲು ಸಾಧ್ಯ ಇಲ್ಲ. ತನಿಖೆ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
DAKSHINA KANNADA
ಮಂಗಳೂರು : ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ : ಪ್ರಯಾಗ್ ರಾಜ್ ಕುಂಭಮೇಳ ಪ್ರಯಾಣ
Published
17 hours agoon
20/01/2025By
NEWS DESK4ಮಂಗಳೂರು : 144 ವರ್ಷಗಳ ಬಳಿಕ ನಡೆಯುವ ಮಹಾ ಕುಂಭಮೇಳದಲ್ಲಿ ಅಖಿಲ ಭಾರತೀಯ ಸಂತಸಮಿತಿ ಕರ್ನಾಟಕ ಘಟಕದಿಂದ ಕಾರ್ಯಕರ್ತರು 2025 ಜನವರಿ 25 ರಿಂದ 30 ರವರೆಗೆ ಭಾಗವಹಿಸುವುದಾಗಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕದ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.
ವಿಶ್ವದ ಅತೀ ದೊಡ್ಡ ಉತ್ಸವವೇ ಮಹಾ ಕುಂಭಮೇಳ, ನಾನಾ ಯತಿ ಶ್ರೇಷ್ಠರು ಭಾಗವಹಿಸುವ ಕುಂಭಮೇಳದಲ್ಲಿ ವ್ಯತ್ಯಾಸ್ತ ಹೈದವ ಸಂಘಟನೆಗಳಿಂದ ಚರ್ಚೆ ಬೈಠಕ್ ನಡೆಯುವುದು. ಜನವರಿ 21,22 ದಿನಾಂಕದಲ್ಲಿ ಅಖಿಲ ಭಾರತೀಯ ಸಂತ ಸಮಿತಿಯ ಬೈಠಕ್ ನಡೆಯಲಿದೆ. ಅಖಿಲ ಭಾರತ ಸಂತ ಸಮಿತಿ ಹಾಗೂ ಗಂಗಾ ಮಹಾಸಭೆಯ ಸಂಯುಕ್ತತೆಯಲ್ಲಿ ವಾಸ್ತವ್ಯ ಉಪಹಾರದ ವ್ಯವಸ್ಥೆಯು ಸಂಘಟನೆಯಿಂದ ಮಾಡಲಾಗಿದೆ.
ಇದನ್ನೂ ಓದಿ : ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?
ರಾಜ್ಯಾಧ್ಯಕ್ಷರಾದ ಮಂಗಳೂರು ಓಂ ಶ್ರೀ ಮಠದ ಸ್ವಾಮಿ ಹಾಗೂ ಮಾತಾಶ್ರೀ ಓಂ ಶ್ರೀ ಶಿವ ಜ್ಞಾನಮಹಿ ಸರಸ್ವತಿ ಸಮೇತ ಮಹಾಮಂಡಲೇಶ್ವರ ಸ್ವಾಮಿ ಓಂ ಶ್ರೀ ವಿದ್ಯಾನಂದ ಸರಸ್ವತಿ, ಸಮಿತಿ ಮುಖ್ಯ ಕಾರ್ಯದರ್ಶಿ ಕೊಡಗು ಅರಸೀಗುಪ್ಪೆ ಶ್ರೀ ಮಂಜುನಾಥ ಕ್ಷೇತ್ರದ ಸ್ವಾಮಿ ಶ್ರೀ ರಾಜೇಶ್ ನಾಥ್ ಗುರೂಜಿ, ಸಂಘಟನಾ ಕಾರ್ಯದರ್ಶಿ ಕೊಡಗು ಬೆಂಗಳೂರು ವಿರಕ್ತಮಠದ ಶ್ರೀ ನಿಶ್ಚಲ ನಿರಂಜನ ದೇಶೀ ಕೇಂದ್ರ ಸ್ವಾಮೀಜಿ, ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿ ಅರಸೀಕೆರೆ ರುದ್ರಾಕ್ಷ ಫೌಂಡೇಶನ್ ಶ್ರೀ ಜಯಪ್ರಕಾಶ್ ಗುರೂಜಿ, ಕಾರ್ಯದರ್ಶಿಗಳಾದ ಕಡೂರು ಅಯ್ಯಪ್ಪ ಸ್ವಾಮಿ ಕ್ಷೇತ್ರದ ಶ್ರೀ ಭದ್ರಾರಾಜ್ ಸ್ವಾಮೀಜಿ, ಫೌಂಡರ್ ಶ್ರೀ ಮಹಾ ತಪಸ್ವಿ ಸೇವಾ ಪ್ರತಿಷ್ಠಾನ ಹರಿಹರ ಪರಂಪೂಜ್ಯ ಅವಧೂತ ಕವಿ ಗುರುರಾಜ ಗುರೂಜಿ ಹಾಗೂ ಸಮಿತಿಯ ಸಂಯೋಜಕ ಸಮಿತಿ ಅಧ್ಯಕ್ಷ ಅಡ್ವಕೇಟ್ ವೀರೇಶ್ ಅಜ್ಜಣ್ಣನವರ್ ಹರಿಹರ ಜೊತೆಯಲ್ಲಿ ಸ್ವಾಮೀಜಿಯವರ ಶಿಷ್ಯರು ಭಾಗವಹಿಸಲಿದ್ದಾರೆ.
DAKSHINA KANNADA
ಮಂಗಳೂರಿನ ಜನತೆಗೆ ಕಲುಷಿತ ನೀರು; ಎಸ್‌ಟಿಪಿಯಲ್ಲಿ ಜನರೇಟರ್ ಇಲ್ಲ, ಮನೆಯಲ್ಲಿರುವ 13 ಸಿಬ್ಬಂದಿಗೆ ಸಂಬಳ : ಐವಾನ್ ಡಿಸೋಜಾ
Published
19 hours agoon
20/01/2025By
NEWS DESK4ಮಂಗಳೂರು : ಮಹಾನಗರಕ್ಕೆ ಪೂರೈಕೆಯಾಗುತ್ತಿರುವ ನೀರು ಕಲುಷಿತವಾಗಿದೆ. ಎಸ್ ಟಿಪಿಗಳು ನೀರಿನ ಮೂಲವನ್ನು ಸೇರುತ್ತಿದ್ದು, ಕೊಳಚೆ ನೀರನ್ನೇ ಜನರಿಗೆ ಪೂರೈಕೆ ಮಾಡಲಾಗುತ್ತಿದೆ. ಈ ಬಗ್ಗೆ ಮೇಯರ್ ಅವರಿಗೆ ಈಗಾಗಲೇ ಎರಡು ಬಾರಿ ಮನವಿ ಮಾಡಿ ಸದನದ ಬಾವಿಗಿಳಿದರೂ ಪ್ರಯೋಜನವಾಗಿಲ್ಲ. ಸತ್ಯಶೋಧನಾ ಸಮಿತಿ ರಚಿಸುವುದಕ್ಕೂ ಪಾಲಿಕೆಯ ಆಡಳಿತ ಮುಂದಾಗಿಲ್ಲ. ಹೀಗಾಗಿ ನಾವೇ ಸಮಿತಿ ರಚಿಸಿ ತನಿಖೆ ಮಾಡಿದ್ದೇವೆ. ಎಲ್ಲಿ ಎಸ್‌ಟಿಪಿ ಕೊಳಚೆ ನೀರು ಸೇರುತ್ತಿದೆಯೋ ಅಲ್ಲಿ ಹೋಗಿ ಪ್ರತ್ಯಕ್ಷ ವರದಿ ತಯಾರಿಸಿ ಅದನ್ನು ಮೊನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಭೇಟಿಯ ಸಂದರ್ಭದಲ್ಲಿ ನೀಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಈ ಬಗ್ಗೆ ತನಿಖೆ ಮಾಡುವಂತೆ ಪಾಲಿಕೆಯ ನೂತನ ಕಮಿಷನರ್ ಅವರಿಗೆ ಸತ್ಯಶೋಧನಾ ವರದಿ ನೀಡಿದ್ದೇವೆ. ನಾವು ದೂರು ಕೊಟ್ಟು ಸುಮ್ಮನೆ ಇರುವುದಿಲ್ಲ. ಅದು ನಿಜವೇ ಸುಳ್ಳೇ ಎಂಬ ಬಗ್ಗೆ ತನಿಖೆ ಮಾಡುತ್ತೇವೆ. ಪಚ್ಚನಾಡಿ, ಬಜಾಲ್, ಮಧ್ಯದಲ್ಲಿರುವ ಎಸ್ ಟಿಪಿಯನ್ನು ನಿರ್ವಹಣೆ ಮಾಡಲು ಎಂಆರ್ ಪಿಎಲ್ ಕಂಪೆನಿಗೆ ಒಪ್ಪಿಸಬೇಕಿದೆ. ಇದರಿಂದ ನಿರ್ವಹಣೆ ವೆಚ್ಚ ಕಡಿಮೆಯಾಗುವುದಲ್ಲದೆ ಮಂಗಳೂರಿನ ಜನರಿಗೆ ಶುದ್ಧ ಕುಡಿಯುವ ನೀರು ಸಿಗುತ್ತದೆ. ಮಧ್ಯದಲ್ಲಿರುವ ಎಸ್ ಟಿಪಿಯಲ್ಲಿ ನೀರು ಶುದ್ಧೀಕರಣಗೊಳ್ಳುತ್ತಿಲ್ಲ. ಇದರಿಂದಾಗಿ ಅಲ್ಲಿಗೆ ಸಮೀಪದ ಖಂಡಿಗೆ ಎಂಬಲ್ಲಿ ತೋಡು, ಕೆರೆಯ ನೀರು ಕಲುಷಿತಗೊಂಡಿದೆ. ಪರಿಣಾಮ ವರ್ಷಕ್ಕೊಮ್ಮೆ ನಡೆಯುವ ಖಂಡಿಗೆ ಮೀನು ಹಿಡಿಯುವ ಜಾತ್ರೆಗೆ ಕಂಟಕ ಎದುರಾಗಿದೆ.
ಕೆರೆಗೆ ಇಳಿದರೆ ಮಾರಕ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಸೃಷ್ಟಿಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ನಿಮ್ಮ ಆಡಳಿತದಲ್ಲಿ ಹೀಗಿರಲಿಲ್ವಾ ಅಂತಾ ಕೇಳ್ತಾರೆ. ಹೌದು ನಮ್ಮ ಕಾಲದಲ್ಲಿ ಕೆರೆಯ ನೀರಲ್ಲಿ ಬಟ್ಟೆ ತೊಳೆಯುತ್ತಿದ್ದರು. ಮೀನು ಹಿಡೀತಿದ್ದರು. ಈಗ ನೀರಿನ ಮೂಲಗಳಿಗೆ ಇಳಿಯುವ ಹಾಗೇ ಇಲ್ಲ. ಇದಕ್ಕೆ ಯಾರು ಹೊಣೆ? ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ : ಮಹಾಕುಂಭಮೇಳ 2025: ಸೆಲ್ಫಿ ಜಾಸ್ತಿಯಾಯಿತು… ಮೋನಾಲಿಸನನ್ನು ಮನೆಗೆ ಕಳುಹಿಸಿದ ತಂದೆ
ಎಸ್ ಟಿಪಿ ಚಾಲನೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬೀಗ ಜಡಿದು ಪ್ರತಿಭಟನೆ ಮಾಡುತ್ತೇವೆ. ಅಲ್ಲಿ 13 ಜನರಿಗೆ ನಿರ್ವಹಣೆಗೆ ಸಂಬಳ ನೀಡಲಾಗುತ್ತದೆ. ಆದರೆ ಯಾರೂ ಅಲ್ಲಿಲ್ಲ. ಕರೆಂಟ್ ಹೋದರೆ ಜನರೇಟರ್ ಇಲ್ಲ. ಒಂದು ಎಸ್ ಟಿಪಿಗೆ ವರ್ಷಕ್ಕೆ ಒಂದೂವರೆ ಕೋಟಿಯಂತೆ ಮೂರು ಎಸ್ ಟಿಪಿಗೆ ನಾಲ್ಕೂವರೆ ಕೋಟಿ ಹಣ ಪಡೆಯುತ್ತಾರೆ. ಇದೆಂತ ಸಾಧನೆ? ಇನ್ನಾದರೂ ಈ ಬಗ್ಗೆ ಕ್ರಮ ಜರುಗಿಸದೆ ಇದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಅನಿಲ್ ಕುಮಾರ್, ನವೀನ್ ಡಿಸೋಜಾ, ಅಶ್ರಫ್, ಲ್ಯಾನ್ಸ್ ಲಾಟ್ ಪಿಂಟೋ, ನವೀನ್ ಚಂದ್ರ ಆಳ್ವ, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.