Connect with us

    LATEST NEWS

    ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕ ಇಂದು ಪ್ರಕಟ

    Published

    on

    ದೆಹಲಿ: ಇಂದು ಮಂಗಳವಾರ ಮಧ್ಯಾಹ್ನ 3.30 ಕ್ಕೆ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.

    ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಕೂಡಿದ ಆಡಳಿತಾರೂಢ ಮಹಾಯುತಿ ಒಕ್ಕೂಟವು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಲಿದೆ.

    ಜಾರ್ಖಂಡ್‌ನಲ್ಲಿ, ಇಂಡಿಯಾ ಬ್ಲಾಕ್‌ನ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್‌ಯು), ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧ ಸ್ಪರ್ಧಿಸಲಿದೆ.

    ಬಿಜೆಪಿ ತನ್ನ ಕೇಂದ್ರ ಚುನಾವಣಾ ಸಮಿತಿಯಿಂದ ಅನುಮತಿ ಪಡೆದ ನಂತರ ಮುಂದಿನ ಎರಡು ದಿನಗಳಲ್ಲಿ 60 ಕ್ಕೂ ಹೆಚ್ಚು ಹೆಸರುಗಳೊಂದಿಗೆ ಮಹಾರಾಷ್ಟ್ರ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನವದೆಹಲಿಯಲ್ಲಿ ಪಕ್ಷದ ಮಹಾರಾಷ್ಟ್ರ ಘಟಕದ ಪ್ರಮುಖ ನಾಯಕರು ಮತ್ತು ಎರಡು ರಾಜ್ಯ ಚುನಾವಣಾ ಉಸ್ತುವಾರಿಗಳಾದ ಭೂಪೇಂದರ್ ಯಾದವ್ ಮತ್ತು ಅಶ್ವಿನಿ ವೈಷ್ಣವ್ ಅವರೊಂದಿಗೆ ಮ್ಯಾರಥಾನ್ ಸಭೆ ನಡೆಸಿದ್ದಾರೆ.

    ಪಕ್ಷದ ಮಹಾರಾಷ್ಟ್ರ ಘಟಕವು ಸಿಇಸಿಗೆ ಆಯ್ಕೆ ಮಾಡಲು ಹಾಲಿ ಶಾಸಕರು ಸೇರಿದಂತೆ ಸುಮಾರು 100 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

    ಏತನ್ಮಧ್ಯೆ, ಕಾಂಗ್ರೆಸ್ ಪಕ್ಷವು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸಭೆಯನ್ನು ಕರೆದಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತು ಚುನಾವಣಾ ಖಾತರಿಗಳಲ್ಲಿ ಮಿತ್ರಪಕ್ಷಗಳೊಂದಿಗೆ ಸೀಟು ಹಂಚಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದೆ.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending