Friday, July 1, 2022

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.


ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ ಸುಮಾರು 9.30 ತನಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಕಂಬ ಬಿದ್ದಿದ್ದು, ಕಂಬದೊಂದಿಗೆ ದೀವಿ ಹಲಸು ಮರದ ದೊಡ್ಡ ಗಾತ್ರದ ಕೊಂಬೆ ಕೂಡ ಬಿದ್ದಿತ್ತು.

ಬೆಳಗಿನ ಜಾವದಲ್ಲಿ ಬರುವ ಎಲ್ಲಾ ವಾಹನಗಳು ಅಗಲ ಕಿರಿದಾದ ಪಳಿಕೆ ರಸ್ತೆಯನ್ನು ಬಳಸಿ ಬೊಬ್ಬೆಕೇರಿ ಸಂಪರ್ಕ ರಸ್ತೆಯ ಮೂಲಕ ಸಂಚರಿಸಿದವು.

ಎರಡೂ ಬದಿಗಳಲ್ಲಿ ವಾಹನಗಳು ಸಂಚರಿಸಿದ ಕಾರಣ ತಾಸುಗಟ್ಟಲೆ ಕಾಲ ಸಂಚಾರ ಸ್ಥಗಿತಗೊಂಡಿತ್ತು.

ವಿಟ್ಲ ಪೊಲೀಸರು, ಸಾರ್ವಜನಿಕರ ಸಹಕಾರದೊಂದಿಗೆ ಸುಗಮ ಸಂಚಾರಕ್ಕೆ ಸಹಕರಿಸಿದರು. ಮೆಸ್ಕಾಂ ಸಿಬ್ಬಂದಿಗಳು ಸಕಾಲಿಕವಾಗಿ ಕಂಬ ತೆರವುಗೊಳಿಸಿದರು.

LEAVE A REPLY

Please enter your comment!
Please enter your name here

Hot Topics

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಉಡುಪಿ: ಬಾವಿಗೆ ಹಾರಿ ಯುವತಿ ಜೀವಾಂತ್ಯ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ.ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...