Wednesday, December 1, 2021

ಬಂಟ್ವಾಳ: H.T ಲೈನ್‌ ಶಾರ್ಟ್‌ ಸರ್ಕ್ಯೂಟ್‌- ಹಲವು ಮನೆಗಳ ವಿದ್ಯುತ್‌ ಉಪಕರಣ ಭಸ್ಮ

ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ.


ಎಚ್.ಟಿ.ಲೈನ್, ಎಲ್.ಟಿ.ಲೈನ್ ಮೇಲೆ ಬಿದ್ದು ಏಕಾಏಕಿ ಹೆಚ್ಚಿನ ಪ್ರಮಾಣದ ವಿದ್ಯುತ್ ಪ್ರವಹಿಸಿರುವುದು ಘಟನೆಗೆ ಕಾರಣ ಎನ್ನಲಾಗಿದೆ. ಈ ಹಿಂದೆಯೂ ಇದೇ ಸಮಸ್ಯೆ ಇದ್ದು, ಸಂಬಂಧಪಟ್ಟ ಜೆಇ ಅವರ ಗಮನಕ್ಕೆ ತರಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನು ಘಟನೆಯಿಂದ ಸ್ಥಳೀಯ ನಿವಾಸಿಗಳಾದ ವಿನ್ಸೆಂಟ್ ಬ್ಯಾಪ್ಟಿಸ್ಟ್, ಗಿಲ್ಬರ್ಟ್ ಪಿಂಟೋ, ವಿಲಿಯಂ ಪಿಂಟೋ ಅವರ ಪಂಪುಸೆಟ್ ಗಳು ಸುಟ್ಟು ಹೋಗಿವೆ.


ಜೈಸನ್ ಪಿಂಟೋ ಅವರ ಮನೆ ಸೇರಿದಂತೆ ಹಲವು ಮನೆಗಳ ವಿದ್ಯುತ್ ವಯರಿಂಗ್, ಸಲಕರಣೆಗಳು ಸಂಪೂರ್ಣ ಸುಟ್ಟಿವೆ. ವಯರಿಂಗ್ ದುರಸ್ತಿ ಮಾಡಿ ಕೊಡುವುದಾಗಿ ಮೆಸ್ಕಾಂನವರು ಭರವಸೆ ನೀಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...