Connect with us

LATEST NEWS

ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಸೂಚನೆ ನೀಡಿಲ್ಲ: ಇಂಧನ ಸಚಿವರ ಸ್ಪಷ್ಟನೆ

Published

on

ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ‌‌ ಪೆಟ್ರೋಲಿಯಂ‌ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ‌ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.


ವಿದ್ಯುತ್ ದರ ಪರಿಷ್ಕರಣೆಗೆ ರಾಜ್ಯ ಸರಕಾರ ಮುಂದಾಗಿದೆ ಎಂಬ ಬಗ್ಗೆ ಕೆಲವೆಡೆ ತಪ್ಪು ಸಂದೇಶ ರವಾನೆಯಾಗಿದೆ. ಆದರೆ ರಾಜ್ಯ ಸರಕಾರದ ಮುಂದೆ ಅಂಥ ಯಾವುದೇ ಪ್ರಸ್ತಾಪವಿಲ್ಲ.‌

ವಿದ್ಯುತ್ ದರವನ್ನು ವರ್ಷದಲ್ಲಿ ಒಮ್ಮೆ ಮಾತ್ರ ಪರಿಷ್ಕರಿಸುವುದು ವಾಡಿಕೆಯಾಗಿದೆ. ಹೀಗಾಗಿ ದರ ಹೆಚ್ಚಳದ ವದಂತಿ ಬಗ್ಗೆ ಸಾರ್ವಜನಿಕರು ಆತಂಕಗೊಳ್ಳಬೇಕಾದ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ 13 ಉಷ್ಣ ವಿದ್ಯುತ್ ಸ್ಥಾವರಗಳಿವೆ. ಇವುಗಳ ಕಾರ್ಯ ನಿರ್ವಹಣೆಗೆ ಅಗತ್ಯವಾದ ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಅಗತ್ಯವಿರುತ್ತದೆ.‌ ಇವುಗಳ ಮಾರುಕಟ್ಟೆ ದರದ ಏರಿಳಿತ ಆಧರಿಸಿ ಎಲ್ಲ ವಿದ್ಯುತ್ ಸರಬರಾಜು‌‌ ಕಂಪನಿ ವ್ಯಾಪ್ತಿಯಲ್ಲಿ‌ ಪ್ರತಿ ಮೂರು ತಿಂಗಳಿಗೊಮ್ಮೆ ಹೊಂದಾಣಿಕೆ ವೆಚ್ಚ ಪರಿಷ್ಕರಣೆ ನಡೆಸುವುದು ನಿರಂತರ ಪ್ರಕ್ರಿಯೆ ಆಗಿರುತ್ತದೆ.

ಈ ಸಂಬಂಧ ಎಸ್ಕಾಂಗಳು ಸಲ್ಲಿಸಿದ ಹೊಂದಾಣಿಕೆ ವೆಚ್ಚ ( fuel cost adjustment charges ) ಪ್ರಸ್ತಾಪ ಹಿನ್ನೆಲೆಯಲ್ಲಿ‌ ಕೆಇಆರ್ ಸಿ ಈ ದರ ಪರಿಷ್ಕರಿಸಿದೆ.

ಹೊಂದಾಣಿಕೆ ವೆಚ್ಚ ಪರಿಷ್ಕರಣೆ ಕೆಇಆರ್ ಸಿ ವಿವೇಚನಾಧಿಕಾರವಾಗಿದ್ದು‌‌ ಕಲ್ಲಿದ್ದಲು ದರ ಆಧರಿಸಿ ಈ ಹೊಂದಾಣಿಕೆ ವೆಚ್ಚ ಹೆಚ್ಚೂ ಆಗಬಹುದು, ಕಡಿಮೆಯೂ ಆಗಬಹುದು.

ಹೀಗಾಗಿ ಈ ಪ್ರಕ್ರಿಯೆಯನ್ನು ವಾರ್ಷಿಕ ದರ ಪರಿಷ್ಕರಣೆ ಜತೆ ಥಳುಕು ಹಾಕುವ ಅಗತ್ಯವಿಲ್ಲ ಎಂದು ಸುನೀಲ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

LATEST NEWS

ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಕಾಣದೆ ಕಂಗಾಲಾದ ಮಹಿಳೆ; ಅಧಿಕಾರಿಗಳೊಂದಿಗೆ ಜಗಳ!

Published

on

ಮಂಗಳೂರು/ನವದೆಹಲಿ : ದೇಶದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಬಿರುಸಾಗಿ ನಡೆಯುತ್ತಿದೆ. ಈ ನಡುವೆ ಮೊದಲ ಹಂತದ ಚುನಾವಣೆ ಸಂದರ್ಭ ನಡೆದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದಲ್ಲಿ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ರಾಜಸ್ಥಾನದಲ್ಲಿ ನಡೆದಿತ್ತು.

ಈ ವೇಳೆ ಮತದಾರರೊಬ್ಬರು ಅಧಿಕಾರಿಗಳೊಂದಿಗೆ ಜಗಳವಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಪ್ರದರ್ಶಿಸಿಲ್ಲ ಏಕೆ ಎಂದು ಮಹಿಳೆ ಮತಗಟ್ಟೆ ಅಧಿಕಾರಿಗಳೊಂದಿಗೆ ಜಗಳ ಮಾಡಿಕೊಂಡಿದ್ದಾರೆ. ಈ ಸುದ್ದಿ ಸದ್ಯ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ ಅವರೂ ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಘಟನೆ?

ಏಪ್ರಿಲ್‌ 19 ರಂದು ರಾಜಸ್ಥಾನದಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆದಿದೆ. ಪಿಪ್ರಾಲಿಯ ಬೂತ್‌ಗೆ ಮಹಿಳೆಯರ ಗುಂಪೊಂದು ಮತ ಚಲಾಯಿಸಲು ಬಂದಿದೆ. ಎಲ್ಲರೂ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು. ಅಷ್ಟರಲ್ಲಿ ಒಬ್ಬ ಮಹಿಳೆ ಮತ ಚಲಾಯಿಸುವಾಗ, ಇವಿಎಂ ಮಶೀನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಕಾಣಿಸಿಲ್ಲ ಎಂದು ಆಕೆ ಕಂಗಾಲಾಗಿದ್ದಾಳೆ.

ಮಹಿಳೆ ಪೋಲಿಂಗ್ ಅಧಿಕಾರಿಗಳನ್ನು ಕರೆದು ನನ್ನ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಎಲ್ಲಿದೆ ಎಂದು ಕಿಡಿಕಾರಿದ್ದಾರೆ ಎಂದು ತಿಳಿದು ಬಂದಿದೆ. ಆಗ ಅಲ್ಲಿದ್ದ ಅಧಿಕಾರಿಗಳು ವಸ್ತು ಸ್ಥಿತಿಯನ್ನು ವಿವರಿಸಿದರು.

ಫೋಟೋ ಹಾಗೂ ಚುನಾವಣೆ ಚಿಹ್ನೆ ಪ್ರಧಾನಿ ಮೋದಿ ಅವರದ್ದಲ್ಲ. ಅವರ ಪಕ್ಷವನ್ನು ಪ್ರತಿನಿಧಿಸುವ ಅಭ್ಯರ್ಥಿಯದ್ದಾಗಿದೆ ಎಂದು ತಿಳಿಸಿದರು. ಅಲ್ಲದೆ, ಇದು ಮೋದಿ ಅವರ ಚುನಾವಣೆಯಲ್ಲ. ಅವರ ಪಕ್ಷದ ಚುನಾವಣೆ. ಅವರ ಪಕ್ಷದ ಪರವಾಗಿ ಈ ಕ್ಷೇತ್ರದಲ್ಲೂ ಒಬ್ಬ ಅಭ್ಯರ್ಥಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ತಿಳಿಸಿದರು. ಇದಾದ ಬಳಿಕ ಅವರು ಮತ ಚಲಾಯಿಸಿದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ಭಾವುಕರಾದ ಪ್ರಧಾನಿ ಮೋದಿ :

ಈ ಸುದ್ದಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ತಲುಪಿದೆ.  ಈ ಬಗ್ಗೆ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ತಾಯಂದಿರು ಮತ್ತು ಸಹೋದರಿಯರ ಈ ವಾತ್ಸಲ್ಯವನ್ನು ನೋಡಿದ ನಂತರ ನನ್ನ ಕಣ್ಣಲ್ಲಿ ನೀರು ಬಂದಿದೆ. ಈ ಋಣವನ್ನು ತೀರಿಸುವ ಸಂಕಲ್ಪ ನನಗೂ ಇದೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಲಕ್ಷ್ಮಿಕಾಂತ್‌ ಅವರೇ, ಇದು ನಮ್ಮ ಕಾರ್ಯಕರ್ತರ ಜವಾಬ್ದಾರಿಯಾಗಿದೆ. ನಾವೆಲ್ಲಾ ಈ ಸಣ್ಣ ಸಣ್ಣ ಕೆಲಸಗಳತ್ತವೂ ಗಮನ ಹರಿಸಬೇಕಿದೆ. ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.

ಈ ಘಟನೆಯ ಪತ್ರಿಕೆಯ ಕಟಿಂಗ್ ಅನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪಕ್ಷದ ಕಾರ್ಯಕರ್ತ ಲಕ್ಷ್ಮೀಕಾಂತ್ ಭಾರದ್ವಾಜ್ ಅವರು ಫೋಟೋದೊಂದಿಗೆ ಈ ವಿಚಾರ ಹಂಚಿಕೊಂಡಿದ್ದರು. ಅದನ್ನು ರಿಟ್ವೀಟ್ ಮಾಡಿದ್ದಾರೆ ಪ್ರಧಾನಿ ಮೋದಿ.

ಭಾರತದಲ್ಲಿ ಒಟ್ಟು ಏಳು ಹಂತಗಳಲ್ಲಿ ಚುನಾವಣೆಗಳು ನಡೆಯುತ್ತಿವೆ. ಶುಕ್ರವಾರ (ಏ.26)ರಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಫಲಿತಾಂಶಗಳು ಜೂನ್ 4 ರಂದು ಹೋರ ಬೀಳಲಿದೆ.

Continue Reading

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending