KADABA
ಕಡಬದಲ್ಲಿ ದಾಂಗುಡಿಯಿಟ್ಟ ಒಂಟಿ ಸಲಗ-ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಕಡಬ: ಇತ್ತೀಚಿನ ದಿನಗಳಲ್ಲಿ ಸಲಗಗಳು ಕಾಡು ಬಿಟ್ಟು ನಾಡಿಗೆ ದಾಂಗುಡಿ ಇಡುತ್ತಿವೆ. ಕೆಲವೇ ದಿನಗಳ ಹಿಂದೆ ಸುಬ್ರಹ್ಮಣ್ಯ ಪರಿಸರದಲ್ಲಿ ಕಾಣಿಸಿಕೊಂಡಿದ್ದ ಶ್ವಾನದಿಂದ ಸ್ಥಳೀಯರು ಆತಂಕಗೊಂಡಿದ್ದರೆ , ಇದೀಗ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಬಳಿ ಒಂಟಿ ಕಾಡಾನೆ ಬಂದು ಜನರಲ್ಲಿ ಭೀತಿ ಮೂಡಿಸಿದೆ.
ಇಲ್ಲಿನ ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ ಹೆದ್ದಾರಿ ಅಗಲೀಕರಣ ಕಾರಣಕ್ಕೆ ಅಗೆಯಲ್ಪಟ್ಟ ಮಣ್ಣಿನಲ್ಲಿ ಹೂತು ಹೋಗಿ ಸಂಕಷ್ಟಕ್ಕೀಡಾಯಿತು. ಬಳಿಕ ಮೇಲೆದ್ದು ಸಾಗಿದ ಈ ಆನೆಯು ಅಯ್ಯಪ್ಪ ದೇವಾಲಯದ ಬಳಿಯಿಂದ ಪೇರಮಜಲು ರಸ್ತೆಯಲ್ಲಿ ಜನವಸತಿ ಪ್ರದೇಶದಿಂದ ಸಾಗಿ ಕಾಡು ಸೇರಿಕೊಂಡಿದೆ.
ಆನೆ ಸಾಗುವ ಪಥದಲ್ಲಿ ಜನರೇನಾದರೂ ಆನೆಯ ಆಕ್ರಮಣಕ್ಕೆ ತುತ್ತಾಗುವ ಭೀತಿಯಿಂದ ಗ್ರಾಮಸ್ಥರು ಬೊಬ್ಬೆ ಹೊಡೆದು ಆನೆಯ ಹಿಂದೆಯೇ ಓಡೋಡಿಕೊಂಡು ನಿವಾಸಿಗರನ್ನು ಎಚ್ಚರಿಸುತ್ತಿದ್ದರು.
ರಾತ್ರಿ ವೇಳೆ ಈ ಪ್ರದೇಶದಲ್ಲಿ ಗೋಚರಿಸುವ ಕಾಡಾನೆಗಳು ಹಾಡಹಗಲೇ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನತೆ ಭಯಭೀತರಾದರು.
ಆದರೆ ಕಾಣಿಸಿಕೊಂಡ ಆನೆಯು ಜನರಿಗಾಗಲಿ ಕೃಷಿ ಬೆಳೆಗಾಗಲಿ ಯಾವುದೇ ಹಾನಿ ಮಾಡದೇ ಜನರ ಬೊಬ್ಬೆಯ ನಡುವೆ ಕಾಡು ಸೇರಿಕೊಂಡಿದೆ.
DAKSHINA KANNADA
“ಮಂಗಳೂರು ಅಂದ್ರೆ ಅಭಿಮಾನ”-ಒಂದೇ ವೇದಿಕೆಯಲ್ಲಿ ಅಭಿ-ರೂಪಿ,
ಮಂಗಳೂರು ಹಿಂದೂ ಯುವ ಸೇನೆ ವತಿಯಿಂದ ನೆಹರು ಮೈದಾನದಲ್ಲಿ ನಡೆದ 31 ನೇ ವರ್ಷದ ಮಂಗಳೂರು ಗಣೇಶೋತ್ಸವ ನಿನ್ನೆ ಸಂಪನ್ನಗೊಂಡಿದೆ. ಉತ್ಸವಕ್ಕೆ ಬಂದಿದ್ದ ಕನ್ನಡ ಚಿತ್ರರಂಗದ ನಾಯಕ ನಟ ಅಭಿಷೇಕ್ ಅಂಬರೀಷ್ ಗಣೇಶನನ್ನು ಕಣ್ತುಂಬಿಕೊಂಡರು
ಮಂಗಳೂರು : ಮಂಗಳೂರು ಹಿಂದೂ ಯುವ ಸೇನೆ ವತಿಯಿಂದ ನೆಹರು ಮೈದಾನದಲ್ಲಿ ನಡೆದ 31 ನೇ ವರ್ಷದ ಮಂಗಳೂರು ಗಣೇಶೋತ್ಸವ ನಿನ್ನೆ ಸಂಪನ್ನಗೊಂಡಿದೆ. ಉತ್ಸವಕ್ಕೆ ಬಂದಿದ್ದ ಕನ್ನಡ ಚಿತ್ರರಂಗದ ನಾಯಕ ನಟ ಅಭಿಷೇಕ್ ಅಂಬರೀಷ್ ಗಣೇಶನನ್ನು ಕಣ್ತುಂಬಿಕೊಂಡರು.
ಈ ಸಂದರ್ಭ ಮಾತನಾಡಿದ ಅವರು “”ದಕ್ಷಿಣ ಕನ್ನಡ ಜಿಲ್ಲೆ ಅಂದ್ರೆ ನಮಗೆ ಭಾರೀ ಅಭಿಮಾನ. ಇಲ್ಲಿನ ಕಲಾವಿದರು ಕನ್ನಡ ಸಿನೆಮಾ ರಂಗದ ಪಿಲ್ಲರ್ಸ್. ಮಂಡ್ಯದಲ್ಲಿ ರೈತರಿಗೆ ದೊಡ್ಡ ಸಮಸ್ಯೆ ಇದೆ.
ಆ ಸಮಸ್ಯೆ ಪರಿಹಾರಕ್ಕಾಗಿ ನೀವು ಗಣಪನಲ್ಲಿ ಪ್ರಾರ್ಥಿಸಿ. ಹಾಗೇ ನಮ್ಮ ಬ್ಯಾಡ್ ಮ್ಯಾನರ್ಸ್ ಸಿನೆಮಾಕ್ಕೆ ಆಶೀರ್ವಾದ ಮಾಡಿ ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ತುಳು ಚಿತ್ರನಟ ರೂಪೇಶ್ ಶೆಟ್ಟಿ ಮಾತನಾಡಿ “ನಾನು ಇಲ್ಲೆ ಪಕ್ಕದ ಪಾಂಡೇಶ್ವರದಲ್ಲೆ ಇದ್ದುಕೊಂಡು ಬಾಲ್ಯದಲ್ಲೆ ಹಿಂದೂ ಯುವ ಸೇನೆ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮವನ್ನು ನೋಡಿಕೊಂಡು ಬೆಳೆದವ. ಮಂಗಳೂರು ಗಣೇಶೋತ್ಸವವೇ ನಮಗೆ ಬಹುದೊಡ್ಡ ಗಣೇಶೋತ್ಸವ ಎಂದರು.
DAKSHINA KANNADA
ಕಡಬ ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಂ ಘೋಷಣೆ ಪ್ರಕರಣ- ಓರ್ವ ಬಂಧನ, ಇನ್ನೋರ್ವ ಎಸ್ಕೇಪ್..!
Kadaba: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಆವರಣಕ್ಕೆ ಇಬ್ಬರು ಯುವಕರು ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ (25) ಬಂಧಿತ ಆರೋಪಿ.
ಇನ್ನೋರ್ವ ಆರೋಪಿ ಕೈಕಂಬ ನಡ್ತೋಟ ನಿವಾಸಿ ಸಚಿನ್ ಪರಾರಿಯಾಗಿದ್ದು, ಆತನ ಪತ್ತೆಗೆ ಕಡಬ ಪೊಲೀಸರು ಬಲೆ ಬೀಸಿದ್ದಾರೆ.
ಸೋಮವಾರ ರಾತ್ರಿ 11 ಗಂಟೆ ವೇಳೆಗೆ ಬೈಕಿನಲ್ಲಿ ಬಂದ ಈ ಇಬ್ಬರು ಯುವಕರು ಮಸೀದಿಯ ಹೊರ ಭಾಗದಲ್ಲಿ ಬೈಕ್ ನಿಲ್ಲಿಸಿ ಕೆಳಗಿಳಿದು ಬಳಿಕ ಮಸೀದಿ ಕೌಂಪೌಂಡ್ ಒಳನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ್ದರು.
ಸಿಸಿಟಿವಿ ಕ್ಯಾಮರಾದಲ್ಲಿ ಇಬ್ಬರು ಕಿಡಿಗೇಡಿಗಳು ಕಂಪೌಂಡ್ ಒಳನುಗ್ಗಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ.
ಮಸೀದಿಯ ಧರ್ಮಗುರುಗಳನ್ನು ನೋಡಿದ ತತ್‌ಕ್ಷಣ ಆರೋಪಿಗಳು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದ 24 ಗಂಟೆಗಳೊಳಗೆ ಓರ್ವ ಆರೋಪಿಯನ್ನು ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ಕಡಬ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
Kadaba: ಬೈಕ್, ಕಾರು ಢಿಕ್ಕಿ- ತಾ.ಪಂ.ಮಾಜಿ ಸದಸ್ಯ ಆಸ್ಪತ್ರೆಗೆ ದಾಖಲು..!
ಬೈಕ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆ.28ರಂದು ನಡೆದಿದೆ.
ಕಡಬ: ಬೈಕ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆ.28ರಂದು ನಡೆದಿದೆ.
ಬೈಕ್ ಸವಾರ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಎಂಬವರು ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೆಲ್ಯಾಡಿಯಿಂದ ಮಂಗಳೂರಿಗೆ ತೆರಳುತ್ತಿರುವ ಆಲ್ಟೊ ಕಾರು ಹಾಗೂ ಪೆಟ್ರೋಲ್ ಬಂಕ್ ನಿಂದ ಪೆಟ್ರೋಲ್ ಅನ್ನು ತುಂಬಿಸಿಕೊಂಡು ಬರುತ್ತಿದ್ದ ಲಕ್ಷ್ಮೀ ನಾರಾಯಣರ ಅವರ ಬೈಕಿನ ಮಧ್ಯೆ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ