Thursday, April 22, 2021

ಆಹಾರವನ್ನರಸಿ ಬಂದ ಗಜರಾಜನ ಬಲಿ ಪಡೆಯಿತೇ ವಿದ್ಯುತ್ ಪರಿವರ್ತಕ..!

ಆಹಾರವನ್ನರಸಿ ಬಂದ ಗಜರಾಜನ ಬಲಿ ಪಡೆಯಿತೇ ವಿದ್ಯುತ್ ಪರಿವರ್ತಕ..!

ರಾಮನಗರ: ಆಹಾರ ಅರಸಿಕೊಂಡು ಬಂದಿದ್ದ ಆನೆಯೊಂದು ವಿದ್ಯುತ್ ಪರಿವರ್ತಕಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ಗುರುವಾರ ರಾತ್ರಿ ಆಹಾರ ಹುಡುಕಿಕೊಂಡು ಬಂದ ಆನೆ ರಾಮನಗರದ ತುಂಬೇನಹಳ್ಳಿ ಗ್ರಾಮದಲ್ಲಿರುವ ಟಿಸಿಗೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಸ್ಪರ್ಶದಿಂದಾಗಿ ಆನೆ ಸ್ಥಳದಲ್ಲೇ ಮೃತಪಟ್ಟಿದೆ.

ಕಳೆದೊಂದು ತಿಂಗಳಿನಿಂದ ಗ್ರಾಮದ ಸುತ್ತಮುತ್ತ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಕಾಡು ಪ್ರಾಣಿಗಳ ಉಪಟಳ ಹೆಚ್ಚುತ್ತಿದ್ದು ಬೆಳೆಗಳೆಲ್ಲಾ ನಾಶವಾಗುತ್ತಿವೆ.

ಈ ಬಗ್ಗೆ ದೂರು ಕೊಟ್ಟರೂ ಯಾವುದೇ ಸ್ಪಂದನವಿಲ್ಲ  ಎಂದು ಜನ ಆರೋಪಿಸಿದ್ದಾರೆ. ಆನೆ ಸತ್ತು ಬಿದ್ದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...