Saturday, August 20, 2022

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ: ಪ್ರಧಾನಿ ರಣೆಲ್ ವಿಕ್ರಮಸಿಂಘೆ ಘೋಷಣೆ

ಕೊಲಂಬೊ: ಶ್ರೀಲಂಕಾದ ಪ್ರಧಾನಿ ರಣೆಲ್ ವಿಕ್ರಮಸಿಂಘೆ ಅವರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಇಂದು ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.


ಮಾಜಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ದೇಶದಿಂದ ಪಲಾಯನ ಮಾಡಿದ ಕೆಲವೇ ಗಂಟೆಗಳ ನಂತರ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಹೆಚ್ಚುತ್ತಿರುವ ಪ್ರತಿಭಟನೆಗಳನ್ನು ನಿಯಂತ್ರಿಸಲು ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಾದ್ಯಂತ ಅನಿರ್ದಿಷ್ಟ ಕರ್ಫ್ಯೂ ವಿಧಿಸಲಾಗಿದೆ ಎಂದು ರನಿಲ್ ವಿಕ್ರಮಸಿಂಘೆ ಅವರ ಕಚೇರಿ ತಿಳಿಸಿದೆ.
ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು, ಗೋಟಬಯ ರಾಜಪಕ್ಸೆ ಮಾಲ್ಡೀವ್ಸ್‌ಗೆ ಪಲಾಯನ ಮಾಡಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದರಿಂದ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

LEAVE A REPLY

Please enter your comment!
Please enter your name here

Hot Topics

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ...

ಜಿಲ್ಲೆಯಾದ್ಯಂತ ಅನಧಿಕೃತ ಫ್ಲೆಕ್ಸ್, ಅಕ್ರಮ ಮರಳುಗಾರಿಕೆ ತಡೆಗೆ ಡಿಸಿ ಖಡಕ್ ಆರ್ಡರ್

ಮಂಗಳೂರು: ಅಕ್ರಮ ಮರಳು ಸಾಗಾಣಿಕೆ ತಡೆಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪೊಲೀಸರೊಂದಿಗೆ ತಂಡವಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸೂಚಿಸಿದರು.ಅವರು ಆ.19ರ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ...

ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್‌ಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್‌ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ...