Home ಪ್ರಮುಖ ಸುದ್ದಿ ಕೊರೊನ ಎಫೆಕ್ಟ್: ಯಕ್ಷಗಾನ ಕಲಾವಿದರಿಗೆ ಪಟ್ಲ ಫೌಂಡೇಶನ್ ವತಿಯಿಂದ ತುರ್ತು ಸ್ಪಂದನೆ

ಕೊರೊನ ಎಫೆಕ್ಟ್: ಯಕ್ಷಗಾನ ಕಲಾವಿದರಿಗೆ ಪಟ್ಲ ಫೌಂಡೇಶನ್ ವತಿಯಿಂದ ತುರ್ತು ಸ್ಪಂದನೆ

ಕೊರೊನ ಎಫೆಕ್ಟ್: ಯಕ್ಷಗಾನ ಕಲಾವಿದರಿಗೆ ಪಟ್ಲ ಫೌಂಡೇಶನ್ ವತಿಯಿಂದ ತುರ್ತು ಸ್ಪಂದನೆ

ಮಂಗಳೂರು: ಕೊರೊನ ವೈರಸ್ ನಿಂದಾಗಿ ಪ್ರಪಂಚವೇ ಸಂಕಷ್ಟಕ್ಕೀಡಾಗಿದೆ. ಯಕ್ಷಗಾನ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಲಾವಿದರ ಪರಿಸ್ಥಿತಿಯಂತೂ ಶೋಚನೀಯ.

ದಿನದ ಒಂದು ಆಟವನ್ನೇ ನಂಬಿ ವೃತ್ತಿ  ಇಲ್ಲದಿರುವುದರಿಂದ ಪ್ರತಿಯೊಬ್ಬರ ಪರಿಸ್ಥಿತಿಯು ಹದಗೆಟ್ಟಿದೆ.

ಪ್ರಸ್ತುತ ಸನ್ನಿವೇಶದ ಗಂಭೀರತೆಯನ್ನು ಗಣನೆಗೆ ತೆಗೆದುಕೊಂಡ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇಂದು (ಮಾರ್ಚ್ 25) ತುರ್ತು ಸಭೆ ಸೇರಿ ಸರಕಾರದ ಆದೇಶಗಳನ್ನು ಪಾಲಿಸಿಕೊಂಡು ಯಕ್ಷಗಾನ ಕಲಾವಿದರ ಕುಟುಂಬದವರಿಗೆ ಅಗತ್ಯ ಹಾಗೂ ಆವಶ್ಯಕವಾಗಿ ಸಹಕರಿಸುವ ನಿರ್ಧಾರವನ್ನು ಕೈಗೊಂಡಿತು.

ಇಂದಿನ ಈ ಪರಿಸ್ಥಿತಿಯಲ್ಲಿ ಯಾವನೇ ಕಲಾವಿದ ಹಾಗೂ ಅವರ ಮನೆಯವರು ಹಸಿವಿನಿಂದ ಇರಬಾರದೆಂಬ ಉದ್ದೇಶದಿಂದ,

ತೆಂಕುತಿಟ್ಟು ಹಾಗೂ ಬಡಗುತಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿರುವ ಅಗತ್ಯವಿರುವ ಕಲಾವಿದರಿಗೆ ಆಹಾರ ಸಾಮಗ್ರಿಗಳನ್ನು (25 ಕೆ.ಜಿ ಅಕ್ಕಿ ಹಾಗೂ ರೇಶನ್ ಐಟಂಗಳನ್ನು)  ತಲುಪಿಸುವಂತಹ ಕಾರ್ಯವನ್ನು ಟ್ರಸ್ಟ್ ಕೈಗೆತ್ತಿಕೊಳ್ಳುವುದೆಂದು ಸಭೆಯಲ್ಲಿ  ನಿರ್ಧರಿಸಲಾಯಿತು .

ಇದರ ಪ್ರಯೋಜನ ಪಡೆಯಲಿಚ್ಚಿಸುವ ಕಲಾವಿದರು ತಮ್ಮ ಹೆಸರು/ವಿಳಾಸ, ಮೊಬೈಲ್ ಸಂಖ್ಯೆ, ಮೇಳದ ಹೆಸರು ವಿವರಗಳೊಂದಿಗೆ ತಿಳಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ನಂ ಗೆ ಸಂಪರ್ಕಿಸಬಹುದಾಗಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ.

ಪಟ್ಲ ಸತೀಶ್ ಶೆಟ್ಟಿ – +919900371441

ಪುರುಷೋತ್ತಮ ಭಂಡಾರಿ – ಪ್ರಧಾನ ಕಾರ್ಯದರ್ಶಿ – +919845172865

CA ಸುದೇಶ್ ಕುಮಾರ್ ರೈ – ಕೋಶಾಧಿಕಾರಿ- +918197737575

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...