Connect with us

bangalore

ಮ್ಯಾನೇಜರ್ ಒತ್ತಡ ತಾಳಲಾರದೆ ಕಂಪೆನಿ ಲ್ಯಾಪ್‌ಟಾಪ್ ಕದ್ದ ಉದ್ಯೋಗಿ

Published

on

ಬೆಂಗಳೂರು: ಮ್ಯಾನೇಜರ್ ಒತ್ತಡವನ್ನು ತಾಳಲಾರದೇ ಉದ್ಯೋಗಿಯೊಬ್ಬ ಲ್ಯಾಪ್‌ಟಾಪ್​ಗಳನ್ನು ಕಳ್ಳತನ ಮಾಡಿದ್ದು ಇದೀಗ ಆರೋಪಿಯನ್ನು ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಅಜಂ ಬಂಧಿತ ಆರೋಪಿ.


ಕೋರಮಂಗಲದ ವೇಕ್ ಫಿಟ್ ಇನೋವೇಷನ್ ಹೆಸರಿನ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಆರೋಪಿ ಕಂಪನಿಯಲ್ಲಿ ಮ್ಯಾನೇಜರ್ ಕಡೆಯಿಂದ ಕೆಲಸದ ಒತ್ತಡ ಜಾಸ್ತಿ ಎಂಬ ಕಾರಣಕ್ಕೆ ಬೇಸತ್ತು ಹೋಗಿದ್ದ.

ಮ್ಯಾನೇಜರಿಗೆ ಬುದ್ಧಿ ಕಲಿಸಲು ಮೇ 25ರಂದು ತನಗೆ ಪರಿಚಿತ ಇಬ್ಬರು ಅಪ್ರಾಪ್ತ ಬಾಲಕರ ಮೂಲಕ ಕಂಪನಿಯ 8 ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದ.

ಕೋರಮಂಗಲ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

ಸದ್ಯ ಆರೋಪಿಯನ್ನು ಬಂಧಿಸಿರುವ ಕೋರಮಂಗಲ ಠಾಣಾ ಪೊಲೀಸರು 2 ಲಕ್ಷ ಮೌಲ್ಯದ 8 ಲ್ಯಾಪ್‌ಟಾಪ್ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

 

bangalore

ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!

Published

on

ಬೆಂಗಳೂರು: ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ (ಮಾ.28) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

revannaನಾಮಪತ್ರದಲ್ಲಿ ಪ್ರಜ್ವಲ್ ಅವರು ತಮ್ಮ ಆಸ್ತಿ ಮೌಲ್ಯಗಳನ್ನು ಘೋಷಿಸಿದ್ದಾರೆ. ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ಎಂದು ಘೋಷಿಸಿದ್ದಾರೆ.

2019ರ ಚುನಾವಣೆಯಲ್ಲಿ ಘೋಷಿಸಿದ ಆಸ್ತಿ ಮೌಲ್ಯಕ್ಕೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. 2019 ರ ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿದವಿಟ್‌ನಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಈ ಬಾರಿ ಪ್ರಜ್ವಲ್ ರೇವಣ್ಣ ಅವರು ಅಫಿಡವಿಟ್‌ನಲ್ಲಿ ತಮ್ಮ ಒಟ್ಟು ಆಸ್ತಿ ಮೌಲ್ಯ 40.94 ಕೋಟಿ ರೂಪಾಯಿ ಎಂದು ಘೋಷಿಸಿದ್ದಾರೆ. ಈ ಪೈಕಿ 5.44 ಕೋಟಿ ರೂಪಾಯಿ ಮೌಲ್ಯದ ಚರಾಸ್ತಿ, 35.40 ಕೋಟಿ ರೂಪಾಯಿ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೆ, 9.29 ಲಕ್ಷ ನಗದು ಹೊಂದಿರುವುದಾಗಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಿವಿಧ ಬ್ಯಾಂಕ್​ಗಳ ಉಳಿತಾಯ ಖಾತೆಯಲ್ಲಿ 56 ಲಕ್ಷ ನಗದು ಇದ್ದು, 5 ವರ್ಷದಲ್ಲಿ ಕೃಷಿಯಿಂದ 2.75 ಕೋಟಿ ಆದಾಯ ಗಳಿಸಿದ್ದಾರೆ ಎಂದು ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ಕೃಷಿಯೇತರ ಮೂಲದಿಂದ 1.33 ಕೋಟಿ ಆದಾಯ ಗಳಿಸಿದ್ದು, 31 ಹಸುಗಳು, 4 ಎತ್ತುಗಳು, 1 ಟ್ರ್ಯಾಕ್ಟರ್ ಹೊಂದಿದ್ದಾರೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ;ಅವರ ಆಸ್ತಿ ವಿವರ ಇಲ್ಲಿದೆ!

ಪ್ರಜ್ವಲ್ ರೇವಣ್ಣ ಮಾಡಿದ ಸಾಲ
ಬೆಂಗಳೂರು ನಗರ, ಮೈಸೂರು ಸೇರಿದಂತೆ ವಿವಿಧೆಡೆ ವಾಣಿಜ್ಯ ಕಟ್ಟಡ, ಹೊಳೆನರಸೀಪುರ, ನೆಲಮಂಗಲದಲ್ಲಿ ಆಸ್ತಿ ಹೊಂದಿದ್ದಾರೆ. ಅತ್ತೆ ಅನುಸೂಯಾರಿಂದ 22 ಲಕ್ಷ, ಅತ್ತೆ ಶೈಲಜಾರಿಂದ 10 ಲಕ್ಷ ಸಾಲ ಪಡೆದಿದ್ದು, ತಂದೆ ರೇವಣ್ಣರಿಂದ 86 ಲಕ್ಷ, ಸೋದರ ಸೂರಜ್​ರಿಂದ 1 ಕೋಟಿ ಸಾಲ ಮಾಡಿದ್ದಾರೆ. ಹೀಗೆ ಒಟ್ಟು 4.48 ಕೋಟಿ ಸಾಲ ಹೊಂದಿದ್ದಾರೆ.

ತೆರಿಗೆ ಬಾಕಿ ಉಳಿಸಿಕೊಂಡ ಪ್ರಜ್ವಲ್ ರೇವಣ್ಣ
ಸರ್ಕಾರಕ್ಕೆ 3.4 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ನಡೆಸುತ್ತಿರುವ ಬಗ್ಗೆಯೂ ಉಲ್ಲೇಖ ಮಾಡಿದ್ದಾರೆ. 67 ಲಕ್ಷ ಮೌಲ್ಯದ 1 ಕೆ.ಜಿ. 100 ಗ್ರಾಂ ಚಿನ್ನ ಹೊಂದಿದ್ದಾರೆ. 17.48 ಲಕ್ಷ ಮೌಲ್ಯದ 23 ಕೆ.ಜಿ. ಬೆಳ್ಳಿ, 1.90 ಲಕ್ಷ ಮೌಲ್ಯದ ವಜ್ರಾಭರಣ ಹೊಂದಿದ್ದಾರೆ ಎಂದು ನಾಮಪತ್ರ ಸಲ್ಲಿಕೆ ವೇಳೆ ಘೋಷಿಸಿದ್ದಾರೆ.

Continue Reading

bangalore

ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾ*ಸ್ಟ್ ಆಗಿ ಯುವಕನ ದುರ್ಮರ*ಣ

Published

on

ಬೆಂಗಳೂರು : ಏರ್‌ ಪ್ರೆಶರ್‌ ಪೈಪ್‌ನಿಂದ ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯೊಳಗೆ ಕರುಳು ಬ್ಲಾ*ಸ್ಟ್‌ ಆಗಿ ಯುವಕ ಮೃ*ತಪಟ್ಟಿದ್ದಾನೆ. ಹುಡುಗಾಟದಲ್ಲಿ ಆಡಿದ ಆಟ ಘನಘೋರ ಅಂತ್ಯ ಕಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಯೋಗೀಶ್(28) ಮೃ*ತ ಯುವಕ.

ಹುಡುಗಾಟಕ್ಕೆ ಹೋಯ್ತು ಪ್ರಾಣ…!

ಮಾರ್ಚ್ 25ರಂದು ಬೈಕ್‌ ರಿಪೇರಿಗಾಗಿ ಸಂಪಿಗೆಹಳ್ಳಿಯ ಸಿಎನ್‌ಸಿ (CNS) ಬೈಕ್ ಸರ್ವೀಸ್ ಸೆಂಟರ್‌ಗೆ ಯೋಗೀಶ್‌ ಎಂಬ ಯುವಕ ತೆರಳಿದ್ದ. ಅದೇ ಸರ್ವೀಸ್‌ ಸೆಂಟರ್‌ನಲ್ಲಿ ಯೋಗೀಶ್‌ ಸ್ನೇಹಿತ ಮುರುಳಿ ಎಂಬಾತ ಕೆಲಸ ಮಾಡುತ್ತಿದ್ದ. ಸ್ನೇಹಿತರಿಬ್ಬರೂ ಒಬ್ಬರಿಗೊಬ್ಬರು ತರ್ಲೆ, ತಂಟೆ ಮಾಡಿಕೊಂಡು ಆಟವಾಡುತ್ತಿದ್ದರು. ಸರ್ವೀಸ್‌ ಸೆಂಟರ್‌ನಲ್ಲಿದ್ದ ಏರ್ ಪ್ಲೇಶರ್ ಪೈಪ್‌ನಿಂದ ಇಬ್ಬರು ಆಟ ಆಡುತ್ತಿದ್ದರು.

ಮೊದಲಿಗೆ ಮುರುಳಿ, ಯೋಗೀಶ್‌ನ ಮುಖ ಹಾಗೂ ಹೊಟ್ಟೆಗೆ ಗಾಳಿ ಬಿಟ್ಟಿದ್ದ. ಇದಾದ ಬಳಿಕ ಯೋಗಿಶ್ ಗುದದ್ವಾರಕ್ಕೆ ಏರ್‌ ಪ್ಲೇಶರ್‌ನಿಂದ ಗಾಳಿ ಬಿಟ್ಟಿದ್ದಾನೆ. ಗುದದ್ವಾರಕ್ಕೆ ಗಾಳಿ ಬಿಟ್ಟಿದ್ದರಿಂದ ಯೋಗೇಶ್‌ ಹೊಟ್ಟೆ ಊದಿಕೊಂಡು ಕರುಳು ಬ್ಲಾ*ಸ್ಟ್ ಆಗಿದೆ. ತಕ್ಷಣ ಯೋಗೀಶ್ ನರಳಾಟ ಕಂಡು ಮುರುಳಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯೋಗಿಶ್ ಮೃ*ತಪಟ್ಟಿದ್ದಾನೆ.

ಸದ್ಯ ಯೋಗೀಶ್‌ ಪೋಷಕರು ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 304 ಅಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ಮುರಳಿಯನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾಹಿತಿ ನೀಡಿದ್ದಾರೆ.

Continue Reading

bangalore

WATCH VIDEO : ಬಸ್ ಫ್ರೀ ಇದ್ರೂ ಟಿಕೆಟ್ ವಿಚಾರದಲ್ಲಿ ತಗಾದೆ….ಬಸ್ ಕಂಡಕ್ಟರ್‌ನಿಂದ ಮಹಿಳೆಗೆ ಹ*ಲ್ಲೆ…ದೃಶ್ಯದ ವೀಡಿಯೋ ವೈರಲ್!

Published

on

ಬೆಂಗಳೂರು:  ಬಿಎಂಟಿಸಿ ಬಸ್ಸ್ ನಲ್ಲಿ ಕಂಡಕ್ಟರ್‌ ಹಾಗೂ ಪ್ರಯಾಣಿಕೆಯೊಡನೆ ಹಿಗ್ಗಾಮುಗ್ಗಾ ಹ*ಲ್ಲೆ ನಡೆದ ಘಟನೆ ಮಂಗಳವಾರ(ಮಾ.26) ಬೆಂಗಳೂರಿನಲ್ಲಿ ನಡೆದಿದೆ.

ಟಿಕೆಟ್ ವಿಚಾರವಾಗಿ ತಂಝೀನಾ ಇಸ್ಮಾಯೀಲ್ ಎಂಬ ಮಹಿಳೆ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದಿದ್ದು, ಮಹಿಳೆ ಕಂಡಕ್ಟರ್ ಗೆ ಕಪಾಳಮೋಕ್ಷ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಕಂಡಕ್ಟರ್ ಹೊನ್ನಪ್ಪ ಎಂಬವರು ಮಹಿಳೆ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿದ್ದಾರೆ.

ಮಹಿಳಾ ಪ್ರಯಾಣಿಕರ ಜತೆಗೆ ನಡೆಯುತ್ತಿದ್ದ ವಾಗ್ವಾದವನ್ನು ಬಸ್‌ನಲ್ಲಿದ್ದ ಇನ್ನೋರ್ವ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಇದೀಗ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

 

Continue Reading

LATEST NEWS

Trending