Friday, August 19, 2022

ಮಂಗಳೂರು: ಉದ್ಯೋಗ ಸಿಗದೆ ನೊಂದು ನಾಪತ್ತೆಯಾದ ಇಂಜಿನಿಯರ್‌ ಪದವೀಧರ

ಮಂಗಳೂರು: ಸರಿಯಾದ ಉದ್ಯೋಗ ಸಿಗದೇ ಇದ್ದುದರಿಂದ ಮಾನಸಿಕವಾಗಿ ನೊಂದು ಮನೆಯಿಂದ ನಾಪತ್ತೆಯಾದ ಬಗ್ಗೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಆಯುಷ್ ಉಮೇಶ್ (22) ನಾಪತ್ತೆಯಾದ ಯುವಕ
ಆಯುಷ್ ಉಮೇಶ್ ಖಾಸಗಿ ಇಂಜಿನಿಯರ್ ಕಾಲೇಜ್‌ನಲ್ಲಿ ಬಿಇ (ಮೆಕಾನಿಕಲ್ ಇಂಜಿನಿಯರಿಂಗ್) ಪದವಿ ಮಾಡಿದ್ದು. ಈತನಿಗೆ ಸರಿಯಾದ ಉದ್ಯೋಗ ಸಿಗದೇ ಇದ್ದುದರಿಂದ ಮಾನಸಿಕವಾಗಿ ನೊಂದಿದ್ದನು. ಮೇ 2 ರಂದು ಬೆಳಿಗ್ಗೆ ಈಗ ಬರುವುದಾಗಿ ಹೇಳಿ ಮನೆಯಲ್ಲಿದ್ದ ಸ್ಕೂಟರ್‌ನಲ್ಲಿ ಹೊರಹೋಗಿದ್ದಾರೆ. ನಂತರ ಮನೆಗೆ ಬಾರದೆ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಹುಡುಗನ ಚಹರೆ
ಪ್ರಾಯ-22 ವರ್ಷ
ಎತ್ತರ:5 ಅಡಿ 7 ಇಂಚು
ಚಹರೆ: ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ, ಕನ್ನಡಕ ಧರಿಸಿರುತ್ತಾನೆ. ಮುಖದಲ್ಲಿ ಲೈಟ್ ಗಡ್ಡ, ಮೀಸೆ ಇರುತ್ತದೆ. 2 ಇಂಚು ಉದ್ದದ ಕಪ್ಪು ತಲೆ ಕೂದಲು. ಕಪ್ಪು ಬಣ್ಣದ ಟಿ ಶರ್ಟ್, ಕಪ್ಪು ಬಣ್ಣದ ಶಾರ್ಟ್ಸ್ ಧರಿಸಿರುತ್ತಾನೆ. ಕನ್ನಡ, ಇಂಗ್ಲಿಷ್, ಹಿಂದಿ, ತುಳು ಭಾಷೆ ಬಲ್ಲವನಾಗಿರುತ್ತಾನೆ.

LEAVE A REPLY

Please enter your comment!
Please enter your name here

Hot Topics

ಬಿಸಿಯೂಟ ಅಡುಗೆ ತಯಾರಕರು ಕನಿಷ್ಠ ವೇತನ ಕಾಯ್ದೆಯಡಿ ವೇತನ ಪಡೆಯಲು ಅರ್ಹರಲ್ಲ: ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...

ಇಂದು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಭರದ ಸಿದ್ದತೆ-ನಾಳೆ ವಿಟ್ಲ ಪಿಂಡಿ

ಉಡುಪಿ: ಕೃಷ್ಣಮಠದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಆ.20 ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಪರ್ಯಾಯ ಕೃಷ್ಣಾಪುರ ಮಠದ ನೇತೃತ್ವದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಭಕ್ತರಿಗೆ ಪ್ರಸಾದವಾಗಿ ಹಂಚಲು ಚಕ್ಕುಲಿ ಹಾಗೂ ಬಗೆಬಗೆಯ ಉಂಡೆಗಳ...