Connect with us

LATEST NEWS

ಉಡುಪಿ ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ – ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ

Published

on

ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿಗೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ಆಗಸ್ಟ್‌ ಅಂತ್ಯದವರೆಗೂ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ತಿಳಿಸಿದ್ದಾರೆ.

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿಗೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ಆಗಸ್ಟ್‌ ಅಂತ್ಯದವರೆಗೂ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ತಿಳಿಸಿದ್ದಾರೆ.

ಕೊಲ್ಲೂರು ಸಮೀಪದ ಅರಶಿನ ಗುಂಡಿ ಜಲಪಾತದಲ್ಲಿ ನಡೆದ ದುರ್ಘ‌ಟನೆಯ ಬಳಿಕ ಬೀಚ್‌ ಸಹಿತ ಜಲಪಾತ ಹಾಗೂ ಮಳೆಗಾಲದಲ್ಲಿ ಅಪಾಯಕಾರಿಯಾಗಿ ಪರಿಣಮಿಸುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು.

ಇದೀಗ ಜಿಲ್ಲಾದ್ಯಂತ ಮಳೆ ಕಡಿಮೆಯಾಗಿದ್ದರೂ ನಿರ್ಬಂಧವನ್ನು ವಾಪಸ್‌ ಪಡೆದಿಲ್ಲ.

ಈ ತಿಂಗಳ ಅಂತ್ಯದವರೆಗೂ ನಿರ್ಬಂಧ ಇರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮಳೆಗಾಲದಲ್ಲಿ ಯಾವಾಗ ಬೇಕಾದರೂ ಮಳೆಯ ಪ್ರಮಾಣ ಹೆಚ್ಚಾಗಬಹುದು.

ನಿರ್ಬಂಧ ವಾಪಸ್‌ ಪಡೆದರೆ ಬಳಿಕ ಪರಿಸ್ಥಿತಿ ನಿಯಂತ್ರಿಸುವುದು ತತ್‌ಕ್ಷಣದಲ್ಲಿ ಕಷ್ಟವೂ ಆಗಬಹುದು.

ಹಾಗಾಗಿ ಈ ತಿಂಗಳಾಂತ್ಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ನಿರ್ಬಂಧ ತೆರವುಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ತಿಳಿಸಿದ್ದಾರೆ.

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

DAKSHINA KANNADA

ಇಂದು ಕರ್ನಾಟಕ ಬಂದ್‌: ಕರಾವಳಿಗರಿಂದ ನೈತಿಕ ಬೆಂಬಲ-ಬಸ್‌, ಹೊಟೇಲ್‌, ಶಾಲೆಗಳು ಎಂದಿನಂತೆ

Published

on

ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.

ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.

ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.

ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.

ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

Continue Reading

LATEST NEWS

ಭೀಕರ ಬ್ಲಾಸ್ಟ್: ಮೊಬೈಲ್ ಬಳಿಯಲ್ಲಿ ಡಿಯೋಡರೆಂಟ್ ಬಾಟಲಿಗಳನ್ನು ಇಡ್ಡುತ್ತೀರಾ ಹಾಗಾದ್ರೆ ಹುಷಾರ್..!!

Published

on

ಮಹಾರಾಷ್ಟ್ರ: ಮೂವರು ಮೊಬೈಲ್ ಫೋನ್ ಸ್ಫೋಟದಿಂದ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್‌ನ ಸಿಡ್ಕೋ ಉತ್ತಮ್ ನಗರ ಪ್ರದೇಶದಲ್ಲಿ ಮಂಗಳವಾರದಂದು ನಡೆದಿದೆ.

ಮನೆಯೊಳಗೆ ಚಾರ್ಜ್ ಮಾಡಲು ಇಟ್ಟಿದ್ದ ಮೊಬೈಲ್ ಸ್ಫೋಟಗೊಂಡ ಕಾರಣ ಈ ಘಟನೆ ನಡೆದಿದೆ.

ಫೋನ್ ಪಕ್ಕದಲ್ಲಿ ಡಿಯೋಡರೆಂಟ್ ಕ್ಯಾನ್ ಸ್ಫೋಟದ ತೀವ್ರತೆ ಮತ್ತಷ್ಟು ಹೆಚ್ಚಿಸಿದೆ.

ಸ್ಫೋಟದ ತೀವ್ರತೆಯು ಎಷ್ಟು ದೊಡ್ಡದಾಗಿದೆ ಎಂದರೆ ಅದು ಸುತ್ತಮುತ್ತಲಿನ ಪ್ರತಿಯೊಂದು ಕಿಟಕಿಗಳನ್ನು ಒಡೆದು ಹಾಕಿತು.

ಸ್ಫೋಟದ ತೀವ್ರತೆಯಿಂದಾಗಿ ಹೊರಗೆ ನಿಲ್ಲಿಸಿದ್ದ ಕಾರಿನ ಗಾಜುಗಳು ಕೂಡ ಒಡೆದಿವೆ.

ಅಕ್ಕಪಕ್ಕದ ಮನೆಗಳ ಕಿಟಕಿ ಗಾಜುಗಳೂ ಒಡೆದಿರುವ ಬಗ್ಗೆ ವರದಿಯಾಗಿದೆ.

ಸ್ಫೋಟದ ವೇಳೆ ಮನೆಯಲ್ಲಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಹಾಗೂ ಪೊಲೀಸರ ತನಿಖೆ ಮುಂದುವರೆದಿದೆ.

 

Continue Reading

LATEST NEWS

Trending