Connect with us

    LATEST NEWS

    ರೋಹನ್ ಕಾರ್ಪೊರೇಷನ್‌ನಲ್ಲಿ ಪರಿಸರ ದಿನಾಚರಣೆ

    Published

    on

    ಮಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪೆನಿಯಾದ ರೋಹನ್ ಕಾರ್ಪೊರೇಷನ್‌ ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ಮತ್ತು ಸುರಕ್ಷತೆ ವಿಭಾಗದ ವತಿಯಿಂದ ಪರಿಸರ ದಿನಾಚರಣೆಯನ್ನು ಆಯೋಜಿಸಲಾಯಿತು.

    ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಅವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ರೋಹನ್ ಕಾರ್ಪೊರೇಷನ್‌ನ ಹೊಸದಾಗಿ ರಚಿಸಲಾದ ಪರಿಸರದ ಪ್ರತಿಜ್ಞೆಯನ್ನು ವಾಚಿಸಲಾಯಿತು.

    LATEST NEWS

    ನಾನ್ ವೆಜ್ ಪ್ರಿಯರಿಗೆ ಬ್ಯಾಡ್ ನ್ಯೂಸ್….ಶೀಘ್ರದಲ್ಲೇ ಶವರ್ಮಾ ಬ್ಯಾನ್!?

    Published

    on

    ಮಂಗಳೂರು : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಟೆಸ್ಟ್​ನಲ್ಲಿ ಗೋಬಿ ಮಂಚೂರಿ, ಕಬಾಬ್​​, ಪಾನಿಪುರಿಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿತ್ತು. ಇದೀಗ ಶವರ್ಮಾಕ್ಕೂ ಕಂಟಕ ಎದುರಾಗಿದೆ. ಹೌದು, ಗೋಬಿ, ಕಬಾಬ್, ಪಾನಿಪುರಿ ಬಳಿಕ ಶವರ್ಮಾ ಬ್ಯಾನ್​ಗೆ ಆಹಾರ ಮತ್ತು ಗುಣಮಟ್ಟ ಇಲಾಖೆ (FASSAI) ಚಿಂತನೆ ನಡೆಸಿದೆ.


    ಆಹಾರ ಮತ್ತು ಗುಣಮಟ್ಟ ಇಲಾಖೆಯು ರಾಜ್ಯದ ವಿವಿಧೆಡೆಯಿಂದ 17 ಶವರ್ಮಾ ಮಾದರಿ ಪರೀಕ್ಷೆ ನಡೆಸಿದೆ 17ರ ಪೈಕಿ 8 ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್ ಪತ್ತೆಯಾಗಿದೆ. ಸರಿಯಾದ ರೀತಿಯಲ್ಲಿ ಆಹಾರ ತಯಾರಿಸದ ಕಾರಣ ಬಾಕ್ಟೀರಿಯಾಗಳು ಪತ್ತೆಯಾಗಿವೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

    ಎಲ್ಲಾ ಶವರ್ಮಾ ಮಾರಾಟಗಾರರಿಗೆ FSSAI ನೋಂದಣಿ ಕಡ್ಡಾಯಗೊಳಿಸಲಾಗಿದೆ. ನೋಂದಣಿ ಪತ್ರ ಪ್ರದರ್ಶನ ಮಾಡದಿದ್ರೆ, ಮಾರಾಟಕ್ಕೆ ಬ್ಯಾನ್ ಮಾಡುವ ಎಚ್ಚರಿಕೆ ನೀಡಲಾಗಿದೆ. ಶವರ್ಮಾ ತಯಾರಿಕೆ ವೇಳೆ ಶುಚಿತ್ವ ಕಾಪಾಡುವಂತೆ ಸೂಚನೆ ನೀಡಲಾಗಿದೆ. ಶುಚಿತ್ವ ನಿರ್ವಹಣೆ, ನೋಂದಣಿ ಮಾಡಿಸದಿದ್ರೆ, ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

    ಕಬಾಬ್‌ ತಯಾರಿಕೆಯಲ್ಲಿ ಬಳಸಲಾಗುವ ಕೃತಕ ಬಣ್ಣದಲ್ಲಿ ಅಪಾಯಕಾರಿ ಅಂಶ ಪತ್ತೆಯಾದ ಹಿನ್ನೆಲೆ ಬಣ್ಣ ಬಳಸಬಾರದು ಎಂದು ಕರ್ನಾಟಕ ಆರೋಗ್ಯ ಇಲಾಖೆ ಇತ್ತೀಚಿಗೆ ಆದೇಶ ಹೊರಡಿಸಿದೆ. ಇದರೊಂದಿಗೆ ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗೂ ಬಣ್ಣ ಬಳಸದಂತೆ ಸೂಚಿಸಿದೆ.

    ಇದನ್ನೂ ಓದಿ : ಶಂಕರನಾರಾಯಣ ಗೋ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    ಈಗ ಶವರ್ಮಾದಲ್ಲೂ ಆರೋಗ್ಯಕ್ಕೆ ಹಾನಿಯುಂಟುಮಾಡುವ ಅಂಶ ಇರುವುದು ಬಹಿರಂಗವಾಗಿದೆ. ಬೆಂಗಳೂರಿನ ಎಫ್‌ಎಸ್‌ಎಸ್‌ಎಐ ಪರೀಕ್ಷೆಯಲ್ಲಿ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಯೀಸ್ಟ್ ಅಂಶವಿರೋದು ಪತ್ತೆಯಾಗಿದೆ. ಈ ಹಿಂದೆಯೂ ಶವರ್ಮಾ ಸೇವಿಸಿ ಮೃತಪಟ್ಟ ಹಾಗೂ ಆರೋಗ್ಯ ಹಾಳು ಮಾಡಿಕೊಂಡು ಆಸ್ಪತ್ರೆ ಪಾಲಾಗಿರುವ ಘಟನೆಗಳು ನಡೆದಿವೆ.

    Continue Reading

    LATEST NEWS

    ಕೊಡಗಿನಲ್ಲಿ ಭಾರೀ ಮಳೆ ಹಿನ್ನೆಲೆ ಬೃಹತ್ ವಾಹನಗಳ ಸಂಚಾರ ನಿಷೇಧ

    Published

    on

    ಕೊಡಗು: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದೆ. ಕೆಲವೊಂದು ಕಡೆ ಮಳೆಯ ಆರ್ಭಟಕ್ಕೆ ಹಾನಿಗಳುಂಟಾಗಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು ವಾಹನ ಸಂಚಾರವನ್ನು ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಕುಸಿತವನ್ನು ತಡೆಯಲು ಭಾರದ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ. 18,000 ಕೆಜಿಗಿಂತ ಅಧಿಕ ಭಾರದ ವಾಹನಗಳು ಸಂಚರಿಸದಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

    ಆದೇಶ ಅನುಷ್ಠಾನಕ್ಕೆ ಜಿಲ್ಲೆಯ ಗಡಿಗಳಲ್ಲಿ 24 ಗಂಟೆಯೂ ನಿಗಾ ಇಡಲಾಗಿದೆ. ಸಾರಿಗೆ, ಪೊಲೀಸ್ ಸಿಬ್ಬಂದಿ ಹೆದ್ದಾರಿಯಲ್ಲಿ ಪೆಟ್ರೊಲಿಂಗ್ ನಡೆಸಲಿದ್ದಾರೆ. ಹಾಲು, ಇಂಧನ, ಅನಿಲ ಪೂರೈಸುವ ವಾಹನಗಳಿಗೆ ವಿನಾಯಿತಿ ನೀಡಲಾಗಿದೆ. ಮಳೆಗಾಲ‌ ಮುಗಿಯುವವರೆಗೂ ಜಿಲ್ಲೆಯಲ್ಲಿ ಬೃಹತ್ ವಾಹನಗಳ‌ ಸಂಚಾರ ನಿಷೇಧವಿರಲಿದ್ದು, ಸದ್ಯ ಜುಲೈ 01ರಿಂದ 30ರ ವರೆಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿದೆ.

    ತಾಯಿಯ ದುಡುಕುತನ..! ಮಕ್ಕಳಿಬ್ಬರ ಜೀವಾಂತ್ಯ..!

    ಸರಕು ಸಾಗಾಣೆ ವಾಹನಗಳು ಪ್ರತಿ ದಿನ ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿಯುತ್ತಿದೆ. ಇದರಿಂದ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿದೆ. ಮಳೆಯಿಂದಾಗಿ ರಸ್ತೆ ಕುಸಿತ ಭೀತಿ ಕೂಡ ಎದುರಾಗಿದೆ. ಈ ಎಲ್ಲಾ ಕಾರಣದಿಂದಾಗಿ ಭಾರೀ ತೂಕದ ವಾಹನಗಳಿಗೆ ನಿಷೇಧ ಹೇರಲಾಗಿದೆ.

    Continue Reading

    LATEST NEWS

    ಶಂಕರನಾರಾಯಣ ಗೋ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    Published

    on

    ಕುಂದಾಪುರ : ಶಂಕರನಾರಾಯಣ ಸರ್ಕಲ್‌ ಬಳಿಯಿಂದ ಜೂನ್‌ 25 ರ ತಡ ರಾತ್ರಿ ಮಲಗಿದ್ದ ದನವನ್ನು ಐಷಾರಾಮಿ ಕಾರಿನಲ್ಲಿ ಕಳವು ಮಾಡಿಕೊಂಡು ಹೋಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮಂಗಳೂರು ಆಸೈಗೋಳಿ ನಿವಾಸಿಗಳಾದ ನಿಝಾಮುದ್ದೀನ್ ಎ. ಎಚ್. ಮತ್ತು ಮಹಮ್ಮದ್ ಅನ್ಸಾರ್ ಬಂಧಿತ ಆರೋಪಿಗಳು.


    ಆರೋಪಿಗಳು ಕೃತ್ಯಕ್ಕೆ ಬಳಸಿದ ಮಾರುತಿ ಬಲೇನೋ ಕಾರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

    ರಾತ್ರಿ ವೇಳೆ ಐಷಾರಾಮಿ ಕಾರಿನಲ್ಲಿ ಬಂದ ಕಳ್ಳರು ಶಂಕರನಾರಾಯಣ ಸರ್ಕಲ್‌ ಬಳಿ ಮಲಗಿದ್ದ ದನವನ್ನು ಹಿಡಿದು ಎತ್ತಿ ಕಾರಿನಲ್ಲಿ ಹಾಕಿ ಕದ್ದೊಯಿದ್ದರು. ಸರ್ಕಲ್‌ನಲ್ಲಿ ಶಂಕರನಾರಾಯಣ ಗ್ರಾಮ ಪಂಚಾಯತ್‌ ಅಳವಡಿಸಿದ ಸಿಸಿ ಕೆಮರಾದಲ್ಲಿ ಘಟನೆ ಬಗ್ಗೆ ದಾಖಲಾಗಿತ್ತು.
    ಸಿಸಿ ಕೆಮರಾ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಉಳ್ಳಾಲ ತಾಲೂಕಿನ ಅಸೈಗೋಳಿಯಲ್ಲಿ ಬಂಧಿಸಿದ್ದಾರೆ. ಶಂಕರನಾರಾಯಣ ಪೊಲೀಸ್‌ ಸಬ್ ಇನ್ಸ್ ಪೆಕ್ಟರ್‌ಗಳಾದ ನಾಸೀರ್‌ ಹುಸೇನ್‌ ಮತ್ತು ಶಂಭುಲಿಂಗಯ್ಯ ಹಾಗೂ ಸಿಬಂದಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

    ಇದನ್ನೂ ಓದಿ : ತಾಯಿಯ ದುಡುಕುತನ..! ಮಕ್ಕಳಿಬ್ಬರ ಜೀವಾಂತ್ಯ..!

    ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಂಕರನಾರಾಯಣ ಮತ್ತು ಅಮಾಸೆಬೈಲು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿರಂತರವಾಗಿ ದನ ಕಳ್ಳತನ ನಡೆಯುತ್ತಿದ್ದು, ಇದೀಗ ಇಬ್ಬರು ದನ ಕಳ್ಳರನ್ನು ಬಂಧಿಸಿದ ಪೊಲೀಸರ ಸಾಧನೆಯನ್ನು ಹಿಂದೂಪರ ಸಂಘಟನೆಗಳು ಶ್ಲಾಘಿಸಿವೆ.

    Continue Reading

    LATEST NEWS

    Trending