DAKSHINA KANNADA
ಮಂಗಳೂರು : ಪಚ್ಚನಾಡಿ ಡಂಪಿಂಗ್ ಯಾರ್ಡ್ ಪರಿಸರದಲ್ಲಿ ಪರಿಶೀಲನೆ
Published
3 weeks agoon
ಮಂಗಳೂರು : ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಭಾನುವಾರ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ಮಂಗಳೂರು ಮಹಾನಗರಪಾಲಿಕೆ ತ್ಯಾಜ್ಯ ವಿಲೇವಾರಿ ಘಟಕ ಪಚ್ಚನಾಡಿಗೆ ಭೇಟಿ ನೀಡಿದ ಅವರು ಘಟಕದ ಒಳಪ್ರದೇಶಗಳಿಗೆ ಭೇಟಿ ನೀಡಿ ಸಮಗ್ರ ತಪಾಸಣೆ ನಡೆಸಿದರು. ತ್ಯಾಜ್ಯ ನಿರ್ವಹಣೆ, ಪ್ರತ್ಯೇಕಿಸುವಿಕೆಯ ಘಟಕಗಳಿಗೂ ಖುದ್ದು ಹೋಗಿ ವೀಕ್ಷಿಸಿದರು. ತ್ಯಾಜ್ಯ ವಿಲೇವಾರಿಯ ಪ್ರತೀ ಹಂತದ ಮಾಹಿತಿ ಕೇಳಿದ ಅವರು ಘಟಕದ ಕಾರ್ಮಿಕ ರಲ್ಲಿಯೂ ಅಹವಾಲು ಆಲಿಸಿದರು. ತ್ಯಾಜ್ಯವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ಘಟಕಕ್ಕೂ ಹೋಗಿ ವೀಕ್ಷಿಸಿದರು.
ಬಳಿಕ ಮಹಾನಗರಪಾಲಿಕೆ ಆಯುಕ್ತರಿಗೆ ಪಚ್ಚನಾಡಿ ತ್ಯಾಜ್ಯ ಘಟಕದ ನಿರ್ವಹಣೆ ಕುರಿತು ಹಲವು ನಿರ್ದೇಶನಗಳನ್ನು ನೀಡಿದರು. ತ್ಯಾಜ್ಯ ಘಟಕ ಸುತ್ತ ಮುತ್ತಲಿನ ಜನವಸತಿ ಪ್ರದೇಶಗಳ ಬಾವಿ ನೀರನ್ನು ಪರೀಕ್ಷಿಸಬೇಕು. ಇಲ್ಲಿನ ಆಸುಪಾಸಿನ ಪ್ರದೇಶದಲ್ಲಿ ಬೆಳೆಯುತ್ತಿರುವ ತರಕಾರಿ, ಹೈನುಗಾರಿಕಾ ಹಾಲನ್ನು ಪರೀಕ್ಷಿಸಬೇಕು. ಘಟಕದ ತ್ಯಾಜ್ಯ ನೀರು ಯಾವುದೇ ಕಾರಣಕ್ಕೂ ಅಕ್ಕಪಕ್ಕದ ಪ್ರದೇಶಗಳಿಗೆ ಹರಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪಲೋಕಾಯುಕ್ತರು ನಿರ್ದೇಶಿಸಿದರು.
ಉಪಲೋಕಾಯುಕ್ತರು ಬಳಿಕ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಿಗೆ ಭೇಟಿ ನೀಡಿದರು. ಹಾಸ್ಟೆಲ್ ಅಡುಗೆ ಕೋಣೆ, ದಾಸ್ತಾನು ಕೊಠಡಿಗಳಿಗೆ ಭೇಟಿ ನೀಡಿದ ಅವರು ಆಹಾರ ಸಾಮಾಗ್ರಿಗಳನ್ನು ತಪಾಸಣೆ ನಡೆಸಿದರು. ಬಳಿಕ ವಿದ್ಯಾರ್ಥಿಗಳ ಅಹವಾಲನ್ನು ಆಲಿಸಿ, ಸಂವಾದ ನಡೆಸಿದರು. ಉಪಲೋಕಾಯುಕ್ತರ ಭೇಟಿಯ ಸಂದಭ೯ದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಉಪವಿಭಾಗಾಧಿಕಾರಿ ಹಷ೯ವಧ೯ನ, ಮಹಾನಗರಪಾಲಿಕೆ ಆಯುಕ್ತ ಆನಂದ್, ತಹಶೀಲ್ದಾರ್ ಪ್ರಶಾಂತ್ ಮತ್ತಿತರರು ಇದ್ದರು.
BELTHANGADY
ಅರಣ್ಯ ವಾಸಿಗಳ ಸಮಸ್ಯೆ ಬಗೆಹರಿಸಲು ಅರಣ್ಯ ಸಚಿವರಿಗೆ ಮನವಿ..!
Published
11 hours agoon
23/12/2024By
NEWS DESKಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು.
ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು . ಜಂಟಿ ಸರ್ವೇ ನಡೆಸಿ , ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಇತರರಿಗೆ ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನಿರಾಕರಣೆ ಮಾಡಬೇಕು. ಕಸ್ತೂರಿ ರಂಗನ್ ವರದಿ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಆನೆ ಕಾರಿಡಾರ್ , ಅರಣ್ಯ ಸೂಕ್ಷ್ಮ ವಲಯ , ಹುಲಿ ಸಂರಕ್ಷಿತ ವಲಯ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಅರಣ್ಯವಾಸಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬಾರದು . ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳಲ್ಲಿ ಅರಣ್ಯವಾಸಿಗಳಿಗೆ ಪ್ರಾಶಸ್ತ್ಯ ನೀಡುವ ವಿಚಾರ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ಬಗೆಹರಿಸಲು ಸಹಾಯ ಮಾಡುವಂತೆ ಸಚಿವರು ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇತರ ರಾಜ್ಯ ಮಟ್ಟದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು. ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ನೆರಿಯ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.
DAKSHINA KANNADA
ಚೆನ್ನೈನಲ್ಲಿ ರೋವರ್ಸ್ ರಾಷ್ಟ್ರೀಯ ಅಥ್ಲೇಟಿಕ್ಸ್ ಕೂಟ ; ಸಾಧನೆ ಮೆರೆದ ಮಾಸ್ಟರ್ ಅನ್ಶ್ ಕಿರಣ್
Published
18 hours agoon
23/12/2024ಮಂಗಳೂರು : ಡಿ.22 ನೇ ತಾರೀಖಿನಂದು ಚೆನ್ನೈನಲ್ಲಿ ನಡೆದ ರೋವರ್ಸ್ ರಾಷ್ಟ್ರೀಯ ಅಥ್ಲೇಟಿಕ್ಸ್ ಕೂಟದಲ್ಲಿ 9 ವರ್ಷದ ಕೆಳಗಿನ ವಯೋಮಿತಿಯ 50 ಮೀ. ಹರ್ಡಲ್ಸ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 100 ಮೀ. ಓಟದಲ್ಲಿ ಕಂಚಿನ ಪದಕವನ್ನು ಮಾಸ್ಟರ್ ಅನ್ಶ್ ಕಿರಣ್ ಪಕ್ಕಳ ಪೆರ್ಮಂಕಿಗುತ್ತು ಪಡೆದಿದ್ದಾರೆ.
ಮುಂದೆ ದುಬೈನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಅಥ್ಲೇಟಿಕ್ಸ್ ಕೂಟಕ್ಕೆ ಭಾರತದಿಂದ ಸ್ಪರ್ಧಿಸಲು ಅನ್ಶ್ ಆಯ್ಕೆಯಾಗಿದ್ದಾರೆ. ಅವರು ಮಂಗಳೂರು ಅಶೋಕನಗರದ ಎಸ್.ಡಿ.ಎಮ್ ಸ್ಕೂಲ್‌ನಲ್ಲಿ 4ನೇ ತರಗತಿ ಕಲಿಯುತ್ತಿದ್ದು, ಪೆರ್ಮಂಕಿಗುತ್ತು ಕಿರಣ್ ಪಕ್ಕಳ ಹಾಗೂ ಮೂಲ್ಕಿ ಪಂಚಿನಡ್ಕ ದಾಕ್ಷಾಯಿಣಿ ಕೆ. ಅವರ ಸುಪುತ್ರನಾಗಿದ್ದು , ಮಂಗಳೂರಿನ ಮಂಗಳಾ ಅಥ್ಲೇಟಿಕ್ಸ್‌ನಲ್ಲಿ ದಿನೇಶ್ ಕುಂದರ್ ಅವರಲ್ಲಿ ತರಬೇತಿ ಪಡೆದಿದ್ದಾರೆ.
DAKSHINA KANNADA
ಕರಾವಳಿ ಉತ್ಸವ: ಕದ್ರಿ ಪಾರ್ಕಿನಲ್ಲಿ ರೋಮಾಂಚಕಾರಿಯಾದ ಚಿಟ್ಟೆ ಪ್ರದರ್ಶನ
Published
20 hours agoon
23/12/2024ಮಂಗಳೂರು : ಕೆಲವು ವರ್ಷಗಳ ಬಳಿಕ ಈ ಬಾರಿ ಮತ್ತೆ ಆರಂಭಗೊಂಡಿರುವ ಕರಾವಳಿ ಉತ್ಸವ ಎರಡೇ ದಿನಗಳಲ್ಲಿ ಬಹಳಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಇದಕ್ಕೆ ಜಿಲ್ಲಾಡಳಿತ ಉತ್ತಮ ವ್ಯವಸ್ಥೆಯನ್ನು ಕೂಡಾ ಮಾಡಿದ್ದು, ಈ ಬಾರಿ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಸಂಘಟಿಸಿರುವುದಕ್ಕೆ ಎಲ್ಲರಿಂದಲೂ ಶ್ಲಾಘನೆ ವ್ಯಕ್ತವಾಗಿದೆ.
ಡಿಸೆಂಬರ್ 21ರಿಂದ ಆರಂಭಗೊಂಡಿರುವ ಕರಾವಳಿ ಉತ್ಸವದ ಆಕರ್ಷಕ ಮೆರವಣಿಗೆ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡಿವೆ. ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಡಿ.೨೧ರಿಂದ ಜನವರಿ ೧೯ರವರೆಗೆ ನಡೆಯಲಿದೆ. ಪ್ರತೀ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಝಲಕ್ ಇರಲಿದೆ. ಕರಾವಳಿ ಕರ್ನಾಟಕದ ಕಲೆ, ಕರಕುಶಲ ಮತ್ತು ಖಾದ್ಯಗಳ ಪ್ರದರ್ಶನ, ಸಾಂಸ್ಕೃತಿಕ ವೈವಿಧ್ಯಗಳ ಜೊತೆಗೆ ಮನೋರಂಜನೆಯ ಭರಪೂರವಿದೆ. ಇದಲ್ಲದೇ ಡಿ.29ರವರೆಗೆ ಮೇರಿಹಿಲ್ ಹೆಲಿಪ್ಯಾಡಿನಲ್ಲಿ ಹೆಲಿಕಾಫ್ಟರ್ ರೈಡ್ ಆರಂಭಿಸಲಾಗಿದ್ದು, ಇದಕ್ಕೂ ಬಹಳಷ್ಟು ಜನ ಆಗಮಿಸುತ್ತಿದ್ದಾರೆ. ಡಿ.22ರಿಂದ ಜ.19ರವರೆ ಕದ್ರಿ ಪಾರ್ಕಿನಲ್ಲಿ ರೋಬೋಟಿಕ್ ಚಿಟ್ಟೆ ಪ್ರದರ್ಶನವಿದ್ದು, ಈ ಪ್ರದರ್ಶನವನ್ನು ವೀಕ್ಷಣೇ ಮಾಡಲು ಬಹಳಷ್ಟು ಜನ ಆಗಮಿಸುತ್ತಿದ್ದಾರೆ.
ಶನಿವಾರ ಮತ್ತು ಭಾನುವಾರ ಭಾರೀ ಸಂಖ್ಯೆಯಲ್ಲಿ ಜನಜಂಗುಳಿ ಕಂಡು ಬಂದಿದ್ದು, ಈ ಪ್ರದರ್ಶನ ಸಂಜೆ 4 ರಿಂದ ರಾತ್ರಿ 9 ರವರೆಗೆ ಮಾತ್ರ ಇರಲಿದೆ. ಅಲ್ಲದೆ ಇಂದು ವಸ್ತುಪ್ರದರ್ಶನ ವೇದಿಕೆಯಲ್ಲಿ ನೃತ್ಯರೂಪಕವಿರಲಿದೆ. ನೃತ್ಯೋಪಾಸನ ಕಲಾ ಅಕಾಡೆಮಿ ಪುತ್ತೂರು ಇವರಿಂದ ಕಾರ್ಯಕ್ರಮವಿದೆ. ನಾಳೆ ಸಂಜೆ ದೇವದಾಸ್ ಕಾಪಿಕಾಡ್ ನಿದೇಆರ್ಶನದ ತುಳುಹಾಸ್ಯ ನಾಟಕ ಎರ್ಲಾ ಗ್ಯಾರಂಟಿ ಅತ್ತ್ ಎನ್ನುವ ನಾಟಕ ವಸ್ತು ಪ್ರದರ್ಶನ ವೇದಿಕೆಯಲ್ಲಿ ಪ್ರದರ್ಶಿಸಲ್ಪಡಲಿದೆ.
LATEST NEWS
ಎಲಿಮಿನೇಷನ್ ಹೈಡ್ರಾಮಾ: ಬಿಗ್ ಬಾಸ್ನಿಂದ ಹೊರಬಂದ ತ್ರಿವಿಕ್ರಮ್!
ಕುಂದಾಪುರ: ಗಾಳಿ ತುಂಬಿಸುತ್ತಿದ್ದ ವೇಳೆ ಟೈರ್ ಸ್ಫೋಟ: ಯುವಕನಿಗೆ ಗಂಭೀರ ಗಾಯ
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು
ಎನ್ಕೌಂಟರ್ನಲ್ಲಿ ಮೂವರು ಖಲಿಸ್ತಾನಿ ಭ*ಯೋತ್ಪಾದಕರ ಹ*ತ್ಯೆ
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಅಪಾಯದಿಂದ ಪಾರು
ಖಾಸಗಿ ವಿಮಾನ ಪತನ; 10 ಜನ ಸಾವು, ಹಲವರಿಗೆ ಗಾಯ !
Trending
- LATEST NEWS6 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್
- BIG BOSS4 days ago
ಚೈತ್ರಾ ಕುಂದಾಪುರಗೆ ಮತ್ತೆ ಜೈಲು.. ಮುಂದಿನ ವಾರಕ್ಕೆ ಕ್ಯಾಪ್ಟನ್ ಯಾರೆಂದು ರಿವೀಲ್..!
- DAKSHINA KANNADA6 days ago
ಸಾವಿರ ಕಂಬದ ಬಸದಿಗೆ ಜಪಾನ್ನಿಂದ ಬಂದ ಅತಿಥಿಗಳು
- BIG BOSS4 days ago
ಬಿಗ್ಬಾಸ್ನಲ್ಲಿ ಶಾಕಿಂಗ್ ಟ್ವಿಸ್ಟ್; ಮನೆಯಿಂದ ಆಚೆ ಹೋಗಲು ಸ್ಟ್ರಾಂಗ್ ಸ್ಪರ್ಧಿಗಳು ನಾಮಿನೇಟ್