Connect with us

    BELTHANGADY

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ

    Published

    on

    ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪತ್ನಿ ಗೀತಾ ಖಂಡ್ರೆ ಮಗ ಬಿದ‌ರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್‌ ಎಸ್.ಪಿ.ಪಿ ವಿಜಯ್ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆ ಬೇಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಲಭಾರ ಸೇವೆ ಮಾಡಿಸಿದರು. ಬಳಿಕ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

    ಸಚಿವರ ಭೇಟಿ ವೇಳೆ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು DCF ಶ್ರೀಕಾಂತ್‌ ಖಣದಾಳಿ ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

    BELTHANGADY

    ಅರಣ್ಯ ವಾಸಿಗಳ ಸಮಸ್ಯೆ ಬಗೆಹರಿಸಲು ಅರಣ್ಯ ಸಚಿವರಿಗೆ ಮನವಿ..!

    Published

    on

    ಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು.

    ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು . ಜಂಟಿ ಸರ್ವೇ ನಡೆಸಿ , ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಇತರರಿಗೆ ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನಿರಾಕರಣೆ ಮಾಡಬೇಕು.  ಕಸ್ತೂರಿ ರಂಗನ್ ವರದಿ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಆನೆ ಕಾರಿಡಾರ್ , ಅರಣ್ಯ ಸೂಕ್ಷ್ಮ ವಲಯ , ಹುಲಿ ಸಂರಕ್ಷಿತ ವಲಯ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಅರಣ್ಯವಾಸಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬಾರದು . ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳಲ್ಲಿ ಅರಣ್ಯವಾಸಿಗಳಿಗೆ ಪ್ರಾಶಸ್ತ್ಯ ನೀಡುವ ವಿಚಾರ  ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ಬಗೆಹರಿಸಲು ಸಹಾಯ ಮಾಡುವಂತೆ ಸಚಿವರು ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇತರ ರಾಜ್ಯ ಮಟ್ಟದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು.  ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ನೆರಿಯ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.

    Continue Reading

    BELTHANGADY

    ಬೆಳ್ತಂಗಡಿ: ಹದಗೆಟ್ಟ ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರಿಂದ ಗಿಡ ನೆಟ್ಟು ಪ್ರತಿಭಟನೆ

    Published

    on

    ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದೆ. ಹೀಗಾಗಿ ರಸ್ತೆ ದುರಸ್ತಿಗೆ ಒತ್ತಾಯಿಸಿ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಸ್ಥಳೀಯ ನಿವಾಸಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

    ರಸ್ತೆಯ ಅವ್ಯವಸ್ಥೆಯಿಂದಾಗಿ ವಾಹನಗಳು ಸಂಚರಿಸಲು ಪರದಾಡುವ ಸ್ಥಿತಿ ಉಂಟಾಗಿದೆ. ಪ್ರತಿ ನಿತ್ಯ ಈ ರಸ್ತೆಯಲ್ಲಿ ಶಾಲಾ ಕಾಲೇಜು ಮಕ್ಕಳು, ಸಾರ್ವಜನಿಕರು, ಪ್ರವಾಸಿಗರು ಸೇರಿದಂತೆ ನೂರಾರು ಜನರು ಸಂಚರಿಸುತ್ತಾರೆ. ಈ ರಸ್ತೆ ದುರಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದರೂ ರಸ್ತೆ ದುರಸ್ತಿಗೆ ಯಾರೂ ಮುಂದಾಗಿಲ್ಲ ಎಂದು ತಿಳಿದುಬಂದಿದೆ.

    ಹದಗೆಟ್ಟ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಆಗ್ರಹಿಸಿ ಸ್ಥಳೀಯ ನಾಗರಿಕರು ಬಾಳೆಗಿಡ, ಇತರ ಸಸಿಗಳನ್ನು ರಸ್ತೆ ಮಧ್ಯೆ ನೆಟ್ಟು ಪ್ರತಿಭಟನೆ ನಡೆಸಿದರು.

    Continue Reading

    BELTHANGADY

    ಬೆಳ್ತಂಗಡಿ: ಬೈಕಿಗೆ ಕಾರು ಢಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೇ ಯುವಕ ಸಾ*ವು

    Published

    on

    ಬೆಳ್ತಂಗಡಿ: ಎನ್.ಆರ್.ಪುರದಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃ*ತಪಟ್ಟ ಘಟನೆ ಡಿ.19ರಂದು ಸಂಭವಿಸಿದೆ.

    ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಸಜೇಶ್ (26) ಮೃ*ತ ಯುವಕ.

    ಸಜೇಶ್ ಎನ್. ಆರ್. ಪುರ ಬಳಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸಕ್ಕೆ ತೆರಳಿದ್ದು ಗುರುವಾರ ಮಧ್ಯಾಹ್ನ ಕೆಲಸದಿಂದ ಊಟಕ್ಕೆಂದು ತೆರಳುತಿದ್ದ. ಈ ವೇಳೆ ಎದುರಿನಿಂದ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸಜೇಶ್ ಗಂಭೀರ ಗಾಯಗೊಂಡಿದ್ದಾರೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃ*ತಪಟ್ಟಿದ್ದಾರೆ ಎನ್ನಲಾಗಿದೆ.

    Continue Reading

    LATEST NEWS

    Trending