LATEST NEWS
ಹಿಮದೊಳಗಿದ್ದ 48,500 ವರ್ಷ ಹಳೆಯ ‘ಝೋಂಬಿ ವೈರಸ್’ ಪತ್ತೆ: ಅಪಾಯದ ಎಚ್ಚರಿಕೆ ಕೊಟ್ಟ ವಿಜ್ಞಾನಿಗಳು..!
ಸಾವಿರಾರು ವರ್ಷಗಳಿಂದ ಹಿಮಾಚ್ಛಾದಿತ ಮಣ್ಣಿನ ತಳದಲ್ಲಿ ಹೂತುಹೋಗಿದ್ದ ಪುರಾತನ ಮಾದರಿಗಳನ್ನು ಯುರೋಪ್‌ನ ಸಂಶೋಧಕರು ತಪಾಸಣೆಗೆ ಒಳಪಡಿಸಿದ್ದಾರೆ. ಅವರು 13 ಹೊಸ ರೋಗಕಾರಕ ವೈರಸ್‌ಗಳನ್ನು ಪುನಶ್ಚೇತನ ಹಾಗೂ ವರ್ಗೀಕರಿಸಿದ್ದಾರೆ. ಅವುಗಳಿಗೆ ‘ಝೋಂಬಿ ವೈರಸ್’ ಎಂದು ಹೆಸರು ನೀಡಿದ್ದಾರೆ.
ಮಾಸ್ಕೋ: ಕೊರೊನಾ ವೈರಸ್ ಉಂಟುಮಾಡಿದ ಹಾನಿಯಿಂದ ಜಗತ್ತು ಇನ್ನೂ ಚೇತರಿಸಿಕೊಂಡಿಲ್ಲ. ಅದರಲ್ಲಿಯೂ ಕೋವಿಡ್ 19 ಮೂಲವಾಗಿರುವ ಚೀನಾ, ವೈರಸ್ ಹಾವಳಿಗೆ ಮತ್ತೆ ತತ್ತರಿಸುತ್ತಿದೆ.
ಅದರ ನಡುವೆಯೇ ಮನುಕುಲಕ್ಕೆ ಮತ್ತೊಂದು ಆತಂಕ ಎದುರಾಗಿದೆ.
ಹಿಮದ ಅಡಿ ಹೂತುಹೋಗಿರುವ ಪುರಾತನ ವೈರಸ್‌ಗಳು ಹವಾಮಾನ ವೈಪರೀತ್ಯದ ಪರಿಣಾಮ ಜಗತ್ತಿಗೆ ಹೊಸ ಬೆದರಿಕೆ ಉಂಟುಮಾಡುವ ಅಪಾಯವಿದೆ.
48,500ಕ್ಕೂ ಅಧಿಕ ವರ್ಷಗಳ ಹಿಂದೆ ಸರೋವರದ ಅಡಿಯಲ್ಲಿ ಘನೀಕೃತಗೊಂಡಿದ್ದ ವೈರಸ್ ಸೇರಿದಂತೆ ಸುಮಾರು ಎರಡು ಡಜನ್ ವೈರಸ್‌ಗಳನ್ನು ಸಂಶೋಧಕರು ಪುನಶ್ಚೇತನಗೊಳಿಸಿದ್ದಾರೆ.
ರಷ್ಯಾದ ಸೈಬೀರಿಯಾ ಪ್ರದೇಶದಲ್ಲಿ ಸಾವಿರಾರು ವರ್ಷಗಳಿಂದ ಹಿಮಾಚ್ಛಾದಿತ ಮಣ್ಣಿನ ತಳದಲ್ಲಿ ಹೂತುಹೋಗಿದ್ದ ಪುರಾತನ ಮಾದರಿಗಳನ್ನು ಯುರೋಪ್‌ನ ಸಂಶೋಧಕರು ತಪಾಸಣೆಗೆ ಒಳಪಡಿಸಿದ್ದಾರೆ.
ಅವರು 13 ಹೊಸ ರೋಗಕಾರಕ ವೈರಸ್‌ಗಳನ್ನು ಪುನಶ್ಚೇತನ ಹಾಗೂ ವರ್ಗೀಕರಿಸಿದ್ದಾರೆ. ಅವುಗಳಿಗೆ ‘ಝೋಂಬಿ ವೈರಸ್’ ಎಂದು ಹೆಸರು ನೀಡಿದ್ದಾರೆ.
ಶೀತಲೀಕರಣಗೊಂಡ ನೆಲದಡಿಯಲ್ಲಿ ಅನೇಕ ಶತಮಾನಗಳ ಕಾಲ ಹುಗಿದು ಹೋಗಿದ್ದರೂ, ಝೋಂಬಿ ವೈರಸ್‌ಗಳು ಈಗಲೂ ಸೋಂಕು ಹರಡುವಷ್ಟು ಪ್ರಬಲವಾಗಿ ಉಳಿದಿವೆ ಎಂಬ ಆಘಾತಕಾರಿ ಸಂಗತಿಯನ್ನು ಅವರು ಬಹಿರಂಗಪಡಿಸಿದ್ದಾರೆ.
ವಾತಾವರಣದ ತಾಪಮಾನದ ಕಾರಣದಿಂದ ಕರಗುತ್ತಿರುವ ಹಿಮದ ಹೊದಿಕೆಯು, ಮೀಥೇನ್‌ನಂತಹ ಈ ಹಿಂದೆ ಹಿಮದಡಿ ಸಿಲುಕಿದ ಹಸಿರುಮನೆ ಅನಿಲಗಳನ್ನು ಬಿಡುಗಡೆ ಮಾಡುವ ಮೂಲಕ ಹವಾಮಾನ ಬದಲಾವಣೆಯನ್ನು ಮತ್ತಷ್ಟು ಭೀಕರಗೊಳಿಸಲಿವೆ ಎಂದು ವಿಜ್ಞಾನಿಗಳು ಅನೇಕ ಸಮಯದಿಂದ ಎಚ್ಚರಿಸುತ್ತಾ ಬಂದಿದ್ದಾರೆ.
ಆದರೆ ಸುಪ್ತ ರೋಗಕಾರಕಗಳ (ಪ್ಯಾಥೋಜೆನ್‌ಗಳು) ಪರಿಣಾಮದ ಬಗ್ಗೆ ಇನ್ನೂ ಹೆಚ್ಚಿನ ತಿಳಿವಳಿಕೆ ಇಲ್ಲ.
ರಷ್ಯಾ, ಜರ್ಮನಿ ಮತ್ತು ಫ್ರಾನ್ಸ್ ದೇಶಗಳ ಸಂಶೋಧಕರ ತಂಡ ಈ ವೈರಸ್‌ಗಳ ಕುರಿತು ಅಧ್ಯಯನ ನಡೆಸಿದೆ.
ತಾವು ಅಧ್ಯಯನಕ್ಕೆ ಒಳಪಡಿಸಿದ ವೈರಸ್‌ಗಳ ಪುನಶ್ಚೇತನದ ಪರಿಣಾಮವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಬಹುದಾಗಿದೆ.
ಏಕೆಂದರೆ ತಾವು ಸಂಶೋಧನೆಗೆ ಒಳಪಡಿಸಿದ ಮಾದರಿಗಳು ಅಮೀಬಾ ಸೂಕ್ಷ್ಮಜೀವಿಗಳ ಮೇಲೆ ಸೋಂಕು ಉಂಟುಮಾಡುವಷ್ಟು ಸಮರ್ಥವಾಗಿವೆ ಎಂದು ಅವರು ಪ್ರತಿಪಾದಿಸಿದ್ದಾರೆ.
ವೈರಸ್ ಒಂದರ ಪರಿಣಾಮಕಾರಿ ಪುನಶ್ಚೇತನವು ಪ್ರಾಣಿಗಳು ಅಥವಾ ಮನುಷ್ಯರಿಗೆ ಸೋಂಕು ಹರಡಿದರೆ ಹೆಚ್ಚಿನ ಸಮಸ್ಯೆ ಉಂಟಾಗಬಹುದು.
ಅಪಾಯ ಇರುವುದು ಸತ್ಯ ಎಂಬುದನ್ನು ತಮ್ಮ ಅಧ್ಯಯನದ ಮೂಲಕ ಲೆಕ್ಕಹಾಕಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.
“ಪುರಾತನ ಹಿಮಹಾಸುಗಳು ತಾವು ಕರಗಿ ಹೋದಂತೆ ಈ ಅಪರಿಚಿತ ವೈರಸ್‌ಗಳನ್ನು ವಾತಾವರಣಕ್ಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ” ಎಂದು ಬಯೋ ಆರ್‌ಎಕ್ಸ್‌ಐವಿಯಲ್ಲಿ ಪ್ರಕಟವಾದ ಲೇಖನದಲ್ಲಿ ವಿಜ್ಞಾನಿಗಳ ತಂಡ ಹೇಳಿದೆ.
ಹೊರಾಂಗಣ ಸನ್ನಿವೇಶಗಳಿಗೆ ಒಮ್ಮೆ ತೆರೆದುಕೊಂಡ ಬಳಿಕ ಈ ವೈರಸ್‌ಗಳು ಎಷ್ಟು ಕಾಲ ಸೋಂಕುಕಾರಕವಾಗಿರುತ್ತವೆ ಮತ್ತು ಅವುಗಳನ್ನು ಹೇಗೆ ಎದುರಿಸಲು ಸಾಧ್ಯವಾಗುತ್ತದೆ ಹಾಗೂ ಸೂಕ್ತ ಜೀವಿಗೆ ಸೋಂಕು ಹರಡುತ್ತವೆ ಎನ್ನುವುದನ್ನು ಅಂದಾಜಿಸಲು ಅಸಾಧ್ಯ” ಎಂದು ತಿಳಿಸಿದೆ.
“ಆದರೆ ಜಾಗತಿಕ ತಾಪಮಾನದ ಹಿನ್ನೆಲೆಯಲ್ಲಿ ಹಿಮ ಹಾಸಿನ ಕರಗುವಿಕೆ ಹೆಚ್ಚುತ್ತಲೇ ಇದೆ.
ಅಧಿಕ ಜನರು ಕೈಗಾರಿಕಾ ಉದ್ದೇಶಗಳ ಕಾರಣ ಆರ್ಕ್‌ಟಿಕ್ ಪ್ರದೇಶಗಳಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ.
ಇದರಿಂದ ಹಿಮ ಪ್ರದೇಶ ಕಣ್ಮರೆಯಾಗುತ್ತಿದ್ದು,ಭವಿಷ್ಯದಲ್ಲಿ ವೈರಸ್‌ಗಳ ಅಪಾಯ ದೊಡ್ಡ ಮಟ್ಟದಲ್ಲಿ ಉಂಟಾಗಬಹುದು” ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
bangalore
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!
ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್ 20ರ ಬದಲಿಗೆ ಅಕ್ಟೋಬರ್ 27ರಂದು ರಿಲೀಸ್ ಆಗಲಿದೆ.
ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.
ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.
ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.
ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.
ಹೌದು ..ಅಕ್ಟೋಬರ್ 20ರ ಬದಲಿಗೆ ಅಕ್ಟೋಬರ್ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ರಿಲೀಸ್ ಆಗಲಿದೆ.
ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.
ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.
ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ