ಬಂಟ್ವಾಳ: ಕರಾವಳಿಯಲ್ಲಿ ಪಣೋಲಿಬೈಲು ಕ್ಷೇತ್ರದ ಬಗ್ಗೆ ಗೊತ್ತಿಲ್ಲದ ಜನರು ಇಲ್ಲಾ ಅಂತಾನೇ ಹೇಳಬಹುದು. ತನ್ನ ಭಕ್ತರಿಗೆ ಕಾರ್ಣಿಕದ ಮೂಲಕ ಪರಿಹಾರ ನೀಡುತ್ತಿರುವ ಈ ಕ್ಷೇತ್ರ ಜಾತಿ ಧರ್ಮದ ಬೇದವಿಲ್ಲದೆ ಜನರು ನಂಬುವ ಕ್ಷೇತ್ರ. ಇಲ್ಲಿ ಅರಿಕೆ ಮಾಡಿಕೊಂಡ ಲಕ್ಷಾಂತರ ಜನ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ. ಆದೆಷ್ಟರ ಮಟ್ಟಿಗೆ ಅಂದ್ರೆ ಇಲ್ಲಿ ಸಮಸ್ಯೆ ಪರಿಹಾರವಾಗಿದ್ರೂ ಹರಕೆ ತೀರಿಸಲು ವರ್ಷಾನುಗಟ್ಟಲೆ ಕಾಯಬೇಕಾಗಿದೆ.
ಬಂಟ್ವಾಳ ತಾಲೂಕಿನ ಮೇಲ್ಕಾರ್ ಸಮೀಪದಲ್ಲಿ ಇರೋ ಈ ಪಣೋಲಿ ಬೈಲು ಕ್ಷೇತ್ರ ಕಲ್ಲುರ್ಟಿ ಹಾಗೂ ಕಲ್ಕುಡ ದೈವಗಳು ನೆಲೆಯಾದ ಕ್ಷೇತ್ರ. ಈ ಕ್ಷೇತ್ರಕ್ಕೆ ಬಂದು ಭಕ್ತರು ಅದೇನೆ ಕಷ್ಟ ಅರುಹಿಕೊಂಡ್ರೂ ಅದನ್ನು ಪರಿಹರಿಸುವ ಮೂಲಕ ಈ ದೈವಗಳು ಕಲಿಯುಗದಲ್ಲೂ ಕಾರ್ಣಿಕ ತೋರಿಸುತ್ತಿದೆ. ಹೀಗಾಗಿಯೇ ಇಲ್ಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬಂದು ಅಗೇಲು ಸೇವೆಗಳನ್ನು ನೀಡಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಳ್ಳುತ್ತಾರೆ. ಅನೇಕರು ತಮ್ಮ ಸಮಸ್ಯೆ ಬಗೆ ಹರಿಸಿದ್ರೆ ಈ ಕ್ಷೇತ್ರದಲ್ಲೇ ಕೋಲ ಸೇವೆ ನೀಡುವುದಾಗಿ ಅರಿಕೆ ಮಾಡಿಕೊಳ್ಳುತ್ತಾರೆ. ಹೀಗೇ ಕೈಮುಗಿದು ಬೇಡಿ ಪರಿಹಾರ ಕಂಡುಕೊಂಡವರು ಇಲ್ಲಿ ಹರಕೆ ಕೋಲ ನೀಡಲು ಇನ್ನೂ ಕಾದು ಕೂತಿದ್ದಾರೆ. ಯಾಕಂದ್ರೆ ಈಗಾಗಲೇ ಈ ಕ್ಷೇತ್ರದಲ್ಲಿ 35 ವರ್ಷವಾದ್ರೂ ಮುಗಿಯದಷ್ಟು ಕೋಲಸೇವೆ ಬುಕ್ ಆಗಿದೆ.
ಪ್ರತಿದಿನ ಇಲ್ಲಿ ಹರಕೆ ಕೋಲ ನಡೆಯುತ್ತದೆಯಾದ್ರೂ ಈಗ ಬುಕ್ಕಿಂಗ್ ಮಾಡಿದವರು ಹರಕೆ ತೀರಿಸಲು ಏನಿಲ್ಲಾಂದ್ರೂ 35 ವರ್ಷ ಕಾಯಬೇಕು. ಇದು ಈ ಕ್ಷೇತ್ರದ ಕಲ್ಕುಡ ಕಲ್ಲುರ್ಟಿ ದೈವದ ಕಾರ್ಣಿಕಕ್ಕೆ ಸಾಕ್ಷಿಯಾಗಿದ್ದು, ಭಕ್ತರು ಈಗಲೂ ಹರಕೆ ಕೋಲಗಳನ್ನು ಬುಕ್ ಮಾಡ್ತಾನೆ ಇದ್ದಾರೆ. ಹರಕೆ ಕೋಲ ಸಲ್ಲಿಸಲು ಆಗದವರು ಇಲ್ಲಿ ನಡೆಯುವ ವರ್ಷಾವಧಿ ನೇಮೋತ್ಸವದಲ್ಲಿ ಭಾಗವಹಿಸಿ ದೈವದ ಕೃಪೆಗೆ ಪಾತ್ರರಾಗುತ್ತಿದ್ದಾರೆ.
ಪಣೋಲಿ ಬೈಲು ಕ್ಷೇತ್ರದಲ್ಲಿ ಕೋಲಗಳ ಬುಕ್ಕಿಂಗ್ ಜಾಸ್ತಿಯಾಗಿರುವ ಹಿನ್ನಲೆಯಲ್ಲಿ ವಾರದ ಐದು ದಿನ ನಡೆಯುತ್ತಿದ್ದ ನಾಲ್ಕು ಕೋಲ ಸೇವೆಯನ್ನು ಈಗ 8 ಕ್ಕೇ ಏರಿಕೆ ಮಾಡಲಾಗಿದೆ. ಕರಾವಳಿಯ ಹೆಚ್ಚಿನ ಪ್ರತಿ ಮನೆಯಲ್ಲೂ ಕಲ್ಲುರ್ಟಿ ದೈವವನ್ನು ನಂಬಿಕೊಂಡು ಬರಲಾಗುತ್ತದೆ. ನಂಬಿದವರ ಕೈ ಬಿಡದ ಮಾಯಾ ಶಕ್ತಿಯಾಗಿ ಪಣೋಲಿ ಬೈಲಿನಲ್ಲಿ ನೆಲೆಯಾಗಿರುವ ಕಲ್ಲುರ್ಟಿಯನ್ನು ಭಕ್ತಿಯಿಂದ ‘ಅಪ್ಪೆ ಕಾಪುಲ’ ಅಂದ್ರೆ ಸಾಕು… ಆಕೆ ಭಕ್ತರ ಬೆನ್ನಿಗೆ ನಿಲ್ಲುತ್ತಾಳೆ ಎಂಬ ನಂಬಿಕೆ ಎಲ್ಲರಲ್ಲೂ ಇದೆ.
ಬಂಟ್ವಾಳ: ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದ ಘಟನೆ ನಡೆದಿದೆ.
ಸರಪಾಡಿ ಎಕ್ಕುಡೇಲು ನಿವಾಸಿ ಗಿರಿಯಪ್ಪ (51) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಸ್ವತಃ ಕೃಷಿಕರಾಗಿರುವ ಇವರು ನ.3 ರಂದು ಅವರ ತೋಟದ ತೆಂಗಿನ ಮರದಿಂದ ಕಾಯಿ ಕೀಳಲು ಮರಕ್ಕೆ ಹತ್ತಿದ್ದರು. ಆದರೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸುಮಾರು 24 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಹಾಗೂ ಮೂರು ಗಂಡು ಮಕ್ಕಳನ್ನು ಅಗಲಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಗಿರಿಯಪ್ಪ ಅವರನ್ನು ಬದುಕಿಸಲು ವೈದ್ಯಕೀಯ ತಂಡ ಪ್ರಯತ್ನ ಮಾಡಿದೆಯಾದರೂ ಪ್ರಯತ್ನ ಫಲಿಸಲಿಲ್ಲ. ಹಾಗಾಗಿ ಕೊನೆಘಳಿಗೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ಗಿರಿಯಪ್ಪ ಅವರ ಅಂಗಾಂಗ ದಾನಕ್ಕೆ ಮುಂದಾದರು. ಗಿರಿಯಪ್ಪ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬಂಟ್ವಾಳ : ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಕಾಡುಮಠದ ಬಳಿ ಅಟೋ ಹಾಗೂ ಬೈಕ್ ಒಂದರ ನಡುವೆ ಅ*ಪಘಾತ ಸಂಭವಿಸಿ ಮೂವರು ಗಾ*ಯಗೊಂಡಿದ್ದಾರೆ.
ಸಾಲೆತ್ತೂರಿನ ಅಟೋ ಚಾಲಕ ರಫೀಕ್, ಬೈಕ್ ಸವಾರರಾದ ಕಡಂಬು ನಿವಾಸಿ ಉಮ್ಮರ್ ಮತ್ತು ರಾದುಕಟ್ಟೆ ನಿವಾಸಿ ಅಬೂಬಕ್ಕರ್ ಅವರು ಗಾ*ಯಗೊಂಡಿದ್ದಾರೆ. ಅ*ಪಘಾತದ ತೀವ್ರತೆಗೆ ಮೂವರಿಗೂ ಗಂಭೀರ ಗಾ*ಯಗಳಾಗಿದ್ದು, ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿತ್ತು. ಇದೇ ವೇಳೆ ಸ್ಥಳದಲ್ಲಿದ್ದ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಗಾ*ಯಾಳುಗಳ ನೆರವಿಗೆ ಧಾವಿಸಿ ಬಂದಿದ್ದಾರೆ.
ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಮೂವರು ಗಾ*ಯಾಳುಗಳು ಕೂಡಾ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದು, ಓರ್ವನ ಸ್ಥಿತಿ ಗಂ*ಭೀರವಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಅ*ಪಘಾತದ ಕುರಿತಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿ ಒಂದು ಮಾಯೆ. ಯುವಕ – ಯುವತಿಯ ನಡೆವಿನ ಅನ್ಯೋನ್ಯತೆ, ಹೊಂದಿಕೊಳ್ಳುವುದರ ಮೇಲೆ ಎಲ್ಲವೂ ಅವಲಂಬಿತವಾಗಿರುತ್ತವೆ. ಪ್ರೀತಿ ಎಂದರೆ ಕೇವಲ ಆಕರ್ಷಣೆಯಲ್ಲ. ಅಥವಾ ಒಂದು ಹೆಣ್ಣಿನ ಅಂಗಾಂಗ ನೋಡಿ ಉಕ್ಕಿ ಬರುವ ಭಾವವೂ ಅಲ್ಲ. ಅದೊಂದು ಪವಿತ್ರ ಬಂಧ. ಎಲ್ಲಿ ಸರಿಯಾದ ಹೊಂದಾಣಿಕೆ ಇರುವುದಿಲ್ಲವೋ ಅಲ್ಲಿ ಬ್ರೇಕಪ್ ಆಗುತ್ತದೆ. ಅಷ್ಡು ಮಾತ್ರವಲ್ಲದೇ ಯಾವುದೋ ಒತ್ತಡ, ಕೌಟುಂಬಿಕ ಕಲಹಗಳಿಂದಲೂ ಪ್ರೇಮಿಗಳ ಸಂಬಂಧಕ್ಕೆ ಬಿರುಕು ಬೀಳುತ್ತದೆ.
ಪ್ರೇಮಿಗಳ ನಡುವೆ ಬ್ರೇಕಪ್ ಸರ್ವೇ ಸಾಮಾನ್ಯ. ಆದರೆ, ಆ ನೋವಿನಿಂದ ಹೊರಬರುವುದಂತೂ ತುಂಬಾ ಕಷ್ಟ. ಕೆಲವರು ಹಳೆಯ ಪ್ರೇಮಿಯ ನೆನಪಲ್ಲಿ ದಿನ ಕಳೆದರೆ, ಇನ್ನು ಕೆಲವರು ಕೈ ಕೊಟ್ಟ ಪ್ರಿಯತಮೆಗೆ ಬುದ್ಧಿ ಕಲಿಸಲು ಮುಂದಾಗುತ್ತಾರೆ. ಆದರೆ, ಇಲ್ಲೊಬ್ಬ ಯುವಕ ಬ್ರೇಕಪ್ ಬಳಿಕ ಮಾಜಿ ಪ್ರಿಯತಮೆಗೆ ವಿಚಿತ್ರವಾಗಿ ಹಿಂಸೆ ನೀಡಿದ್ದಾನೆ ಎಂದು ಉಲ್ಲೇಖವಾಗಿದೆ. ಈ ಕುರಿತು ಸ್ವತಃ ಯುವತಿಯೇ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾಳೆ.
ಬ್ರೇಕಪ್ ಬಳಿಕ ಯುವತಿಯು ಮಾಜಿ ಪ್ರಿಯಕರನ ನಂಬರನ್ನು ಎಲ್ಲ ಕಡೆಯೂ ಬ್ಲಾಕ್ ಮಾಡಿದ್ದಾಳೆ. ಆದರೆ ಅವನು ತನ್ನ ಪ್ರೇಯಸಿಯನ್ನು ಹಿಂಸಿಸಲು ಗೂಗಲ್ ಪೇ ಆಯ್ಕೆ ಮಾಡ್ಕೊಂಡಿದ್ದಾನೆ. ಬ್ರೇಕಪ್ ನಂತರ ಅವನು ಗೂಗಲ್ ಪೇ ನಲ್ಲಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡುತ್ತಿದ್ದಾನಂತೆ.
ಆಯುಷಿ ಎಂಬುವವರು ತಮ್ಮ ಎಕ್ಸ್ ಖಾತೆ @ShutupAyushiii ಯಲ್ಲಿ ಮಾಜಿ ಪ್ರಿಯಕರ ಬಗ್ಗೆ ಬರೆದುಕೊಂಡಿದ್ದಾಳೆ. ಪೋಸ್ಟ್ ನಲ್ಲಿ, ‘ಎಲ್ಲ ಕಡೆ ಆತನನ್ನು ಬ್ಲಾಕ್ ಮಾಡಿದ ಮೇಲೆ ಗೂಗಲ್ ಪೇನಲ್ಲಿ ಪ್ರತಿ ನಿಮಿಷಕ್ಕೆ ಒಂದು ರೂಪಾಯಿ ಸೆಂಡ್ ಮಾಡ್ತಿದ್ದಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದು, ಅದರೊಂದಿಗೆ ಅಳುವ ಎಮೋಜಿ ಹಾಕಿದ್ದಾಳೆ. ಈ ಪೋಸ್ಟ್ ನೋಡಿದರೆ ಒಂದು ಕ್ಷಣ ಹೀಗೂ ಹಿಂಸೆ ಕೊಡುತ್ತಾರಾ ? ಎಂದೆನಿಸುತ್ತದೆ.
ಈ ಪೋಸ್ಟ್ ಒಂದು ಲಕ್ಷದವರೆಗೆ ವೀಕ್ಷಣೆ ಕಂಡಿದ್ದು, ನೆಟ್ಟಿಗರು ವಿಧವಿಧವಾಗಿ ಕಾಮೆಂಟ್ ಮಾಡಿದ್ದಾರೆ.ಒಬ್ಬರು, ‘ನಿಮ್ಮ ಮಾಜಿ ಇದೇ ಕೆಲಸ ಮುಂದುವರೆಸಿದ್ರೆ ತಿಂಗಳಿಗೆ ನೀವು 40 ಸಾವಿರಕ್ಕಿಂತ ಹೆಚ್ಚು ಸಂಪಾದನೆ ಮಾಡಬಹುದು. ಏನೂ ಕೆಲಸ ಮಾಡದೆ ಕುಳಿತಲ್ಲೇ ಹಣ ಬರುತ್ತೆ ಅಂದ್ರೆ ಟೆನ್ಷನ್ ಏಕೆ’ ಎಂದಿದ್ದಾರೆ. ಇನ್ನೊಬ್ಬರು, ‘ನಿಮಿಷದ ಲೆಕ್ಕದಲ್ಲಿ ನೋಡೋದಾದ್ರೆ ನೀವು ದಿನಕ್ಕೆ 1440 ರೂಪಾಯಿ ಪಡೆಯುತ್ತೀರಿ’ ಎಂದಿದ್ದಾರೆ. ಮತ್ತೊಬ್ಬರು, ‘ಎರಡು ದಿನ ಮಾಡ್ತಾನೆ, ಹಣ ಖಾಲಿ ಆದ್ಮೇಲೆ ಆತನೇ ಸುಮ್ಮನಾಗ್ತಾನೆ’ ಎಂದು ಕಾಮೆಂಟ್ ಮಾಡಿದ್ದಾರೆ.