Connect with us

    LATEST NEWS

    ಶಿವಮೊಗ್ಗದಲ್ಲೊಂದು ಮನಕಲುಕುವ ಘಟನೆ.. ಮಾಲೀಕ ಮೃತಪಟ್ಟರೂ ಆತನ ಬರುವಿಕೆಗಾಗಿ ಕಾದು ಕುಳಿತಿರುವ ಮೂಕ ಶ್ವಾನ..!

    Published

    on

    ಶಿವಮೊಗ್ಗ: ನಿಯತ್ತಿಗೆ ಇನ್ನೊಂದು ಹೆಸರು ಅಂದ್ರೆ ಅದು ಶ್ವಾನ… ತನಗೆ ಅನ್ನ ಹಾಕಿ ಸಾಕಿದವರನ್ನು ಎಂದಿಗೂ ಮರೆಯುವುದಿಲ್ಲ. ಒಮ್ಮೆ ಪ್ರೀತಿಯಿಂದ ನಾಯಿಯನ್ನು ಮುದ್ದಾಡಿದರೇ ಸಾಕು ಎಂದೆಂದಿಗೂ ನಮ್ಮನ್ನು ನೆನಪಿನಲ್ಲಿಟ್ಟುಕೊಳ್ಳುತ್ತದೆ. ಪ್ರೀತಿ ಕೊಟ್ಟವನಿಗೆ ಏನಾದರೂ ಆದರೆ ಕುಟುಂಬವದವರು ಮರುಗುತ್ತಾರೋ ಗೊತ್ತಿಲ್ಲ ಆದರೆ ಈ ಶ್ವಾನವಂತೂ ಮೂಕ ವೇದನೆಯನ್ನು ಅನುಭವಿಸುತ್ತದೆ.

    ಇದಕ್ಕೆ ನಿದರ್ಶನವೆಂಬಂತೆ ಶಿವಮೊಗ್ಗದಲ್ಲೊಂದು ಅಚ್ಚರಿಯ ಘಟನೆ ನಡೆದಿದೆ. ಶಿವಮೊಗ್ಗ ಹೊಳೆಹೊನ್ನೂರು ಪಟ್ಟಣ ನಿವಾಸಿ ಪಾಲಾಕ್ಷಪ(47 ವ) ಎಂಬವರಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಹೊಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗುತ್ತದೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.  ಅವರು ಮೃತಪಟ್ಟು 15 ದಿನಗಳ ಕಳೆದರೂ ಕೂಡಾ ಅವರು ಸಾಕಿದ್ದ ಶ್ವಾನ ಮಾತ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಬರುತ್ತಿತ್ತು. ಪಾಲಾಕ್ಷಪ ನಿಧನರಾಗಿ 15 ದಿನಗಳು ಕಳೆದಿದ್ದರೂ ನಾಯಿ ಮಾತ್ರ ಅವರಿನ್ನೂ ಚೇತರಿಸಿಕೊಂಡು ಬದುಕಿ ಬರಲಿದ್ದಾರೆಂಬ ಮಹದಾಸೆಯಿಂದ  ಮಾಲೀಕ ದಾಖಲಾಗಿದ್ದ ವಾರ್ಡ್ ಬಳಿ ಬಂದು ಅವರ ಬರುವಿಕೆಗಾಗಿ ಕಾಯುತ್ತಿದೆ.

    ಬೀಗರ ಊಟ ಸೇವಿಸಿ 20ಕ್ಕೂ ಅಧಿಕ ಮಂದಿ ಅಸ್ವ*ಸ್ಥ..!

    ಪ್ರಾರಂಭದಲ್ಲಿ ಆಸ್ಪತ್ರೆ ಸಿಬಂದಿಗಳು ನಾಯಿಯನ್ನು ಓಡಿಸುತ್ತಿದ್ದರು. ಅದರೆ ಮತ್ತೆ ಪದೇ ಪದೇ ಅದೇ ಜಾಗದಲ್ಲಿ ನಾಯಿ ಬಂದು ಹಾಜರಾಗುತ್ತಿತ್ತು. ಅಲ್ಲದೇ ಹೊರಗಡೆ ನಿಂತು ಬೊಗಳಲು ಆರಂಭಿಸಿದೆ. ಇದರಿಂದ ಆಶ್ಚರ್ಯಗೊಂಡ ಆಸ್ಪತ್ರೆಯವರು ನಾಯಿಯ ಕುರಿತು ವಿಚಾರಿಸಿದಾಗ ನಿಜ ವಿಚಾರ ಬೆಳಕಿಗೆ ಬಂದಿದೆ.  ಮಾಲೀಕನ ಬರುವಿಕೆಗಾಗಿ ಮೂಕಶ್ವಾನ ಕಾಯುತ್ತಿದೆ ಎಂದು ಗೊತ್ತಾಗಿದೆ. ಆದರೆ ನಾಯಿ ಯಾರಿಗಾದರೂ ಕಚ್ಚಬಹುದು ಎಂಬ ಭೀತಿಯಿಂದ ಪಟ್ಟಣ ಪಂಚಾಯತ್‌ಗೆ ಮಾಹಿತಿ ನೀಡಿದ್ದಾರೆ. ಇದೀಗ ಶ್ವಾನವನ್ನು ಬೇರೆ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

     

    Baindooru

    ಪತಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನು ಕೊಂ*ದ ಪಾಪಿ ತಾಯಿ!

    Published

    on

    ಮಂಗಳೂರು/ಬೆಂಗಳೂರು : ರಾಜ್ಯವೇ ಬೆಚ್ಚಿ ಬೀಳುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಕ್ರೂ*ರಿ ತಾಯಿಯೊಬ್ಬಳು ತನ್ನ ಪುಟ್ಟ ಕಂದಮ್ಮಗಳನ್ನು ಕೊಂ*ದಿರುವ ಅಮಾನವೀಯ ಘಟನೆ ನಡೆದಿದೆ. ಅಲ್ಲದೇ ಬಳಿಕ ಆಕೆ ಆತ್ಮಹ*ತ್ಯೆಗೂ ಯತ್ನಿಸಿದ್ದಾಳೆ .

    ಎಲ್ಲವೂ ಚೆನ್ನಾಗಿತ್ತು…ಅನುಮಾನ ಶುರುವಾಯ್ತು :

    ಆ ಕುಟುಂಬ ಕಳೆದ ತಿಂಗಳಷ್ಟೇ ಜಾರ್ಖಂಡ್ ನಿಂದ ಬಂದು ಬೆಂಗಳೂರಿನ ಸುಬ್ರಹ್ಮಣ್ಯಪುರದಲ್ಲಿ ವಾಸವಾಗಿತ್ತು.  ಪತಿ ಸುನೀಲ್ ಸಾಹೋ, ಪತ್ನಿ ಮಮತಾ ಸಾಹೋ, ಮಕ್ಕಳಾದ ಶಂಭು ಸಾಹೋ, ಶಿಯಾ ಸಾಹೋ…ಪುಟ್ಟ ಸಂಸಾರ…ಸಣ್ಣದೊಂದು ಬಾಡಿಗೆ ಮನೆಯಲ್ಲಿ ವಾಸ…ಆಟೋ ಚಾಲಕನಾಗಿ ದುಡಿಯುತ್ತಿದ್ದ ಸುನೀಲ್ ಸಾಹೋ..ಹೀಗೆ ಸಂಸಾರ ಸಾಗುತ್ತಿತ್ತು. ಎಲ್ಲವೂ ಸರಿಯಾಗಿತ್ತು. ಅದ್ಯಾವಾಗ ಗಂಡನ ಬಗ್ಗೆ ಅ*ನೈತಿಕ ಸಂಬಂಧದ ಅನುಮಾನ ಹುಟ್ಟಿಕೊಂತೋ ಎಲ್ಲವೂ ಎಕ್ಕುಟ್ಹೋಗಿತ್ತು. ಪತಿ ಬೇರೊಂದು ಯುವತಿಯೊಂದಿಗೆ ಮಾತಾಡುತ್ತಿರುವುದನ್ನು ಮಮತಾ ಕೇಳಿಸಿಕೊಂಡಿದ್ದಳಂತೆ. ಇದೇ ದಂಪತಿ ನಡುವೆ ನಿತ್ಯ ಜಗಳಕ್ಕೆ ಬುನಾದಿ ಹಾಕಿತ್ತಂತೆ. ನಿನ್ನೆಯೂ(ನ.21) ಜಗಳ ಮುಂದುವರಿದಾಗ ಸುನೀಲ್ ಆಟೋ ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ.

    ಗಂಡ ಹೊರಹೋದ ಮೇಲೆ ಬಾಗಿಲು ಹಾಕಿ, ಇತ್ತ ಮಕ್ಕಳಿಬ್ಬರನ್ನೂ ಕತ್ತು ಹಿಸುಕಿ ಮಮತಾ ಕೊಂ*ದಿದ್ದಾಳೆ. ಬಳಿಕ ತಾನೂ ಚಾ*ಕುವಿನಿಂದ ಕತ್ತು ಕೊ*ಯ್ದುಕೊಂಡಿದ್ದಾಳೆ. ಎಲ್ಲ ಆದ ಮೇಲೆ ತಪ್ಪಿನ ಅರಿವಾಗಿ ಪತಿಗೆ ಸೆಲ್ಫಿ ಫೋಟೋ ಕಳುಹಿಸಿದ್ದಾಳೆ. ಅಷ್ಟೇ ಅಲ್ಲ,  ‘ಗಲತ್ ಹೋಗಯಾ…ಮಾಫ್ ಕರೋ’ ಅಂತ ಮೆಸೇಜ್ ಬೇರೆ ಹಾಕಿದ್ದಾಳೆ.

    ಇದನ್ನೂ ಓದಿ : ತಮಾಷೆಗಾಗಿ ಕ*ಪಾಳಮೋಕ್ಷ; ಸೋದರ ಮಾವನಿಂದ 3 ವರ್ಷದ ಮಗುವಿನ ಜೀ*ವಾಂತ್ಯ

    ಮೆಸೇಜ್ ನೋಡಿದ ತಕ್ಷಣ ಮನೆಯತ್ತ ದೌಡಾಯಿಸಿದ ಪತಿ ಬಾಗಿಲು ಒಡೆದು ಒಳ ಹೋಗಿ ಹೆಂಡತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದಾನೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ಮಮತಾ ಸಾಹೋ ಪ್ರಾ*ಣಾ*ಪಾಯದಿಂದ ಪಾರಾಗಿದ್ದಾಳೆ. ಆದರೆ, ಏನೂ ಅರಿಯದ ಕಂದಮ್ಮಗಳು ಪತಿ – ಪತ್ನಿ ಜಗಳಕ್ಕೆ ಬ*ಲಿಯಾಗಿವೆ.

    Continue Reading

    LATEST NEWS

    ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !

    Published

    on

    ಮಂಗಳೂರು/ಆಸ್ಟ್ರೇಲಿಯಾ: ಪರ್ತ್ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ತನ್ನ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿದೆ.


    ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಕೆ ಎಲ್ ರಾಹುಲ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ ಸ್ವಲ್ಪ ಹೊತ್ತು ಕ್ರೀಸ್ ನಲ್ಲಿ ನಿಂತಿದ್ದು ಬಿಟ್ಟರೆ, ಉಳಿದವರಿಂದ ನ್ಯೂಜಿಲೆಂಡ್ ವಿರುದ್ದದ ಪಂದ್ಯದಲ್ಲಿ ನೀಡಿದ್ದ ಅದೇ ನೀರಸ ಪ್ರದರ್ಶನ ಮುಂದುವರಿಯಿತು.
    ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಜೊತೆಯಾಟ ಮುಂದುವರಿಸಲು ಸಾಧ್ಯವಾಗಲಿಲ್ಲ. 5 ರನ್ ಅಷ್ಟೇ ಜೊತೆಯಾಟವಾಡಿದ ಯಶಸ್ವಿ ಜೈಸ್ವಾಲ್ ಮತ್ತು ಕೆ.ಎಲ್ ರಾಹುಲ್ ಜೋಡಿ, ಜೈಸ್ವಾಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸುವುದರ ಮೂಲಕ ಆರಂಭಿಕ ನಿರಾಸೆ ಮೂಡಿಸಿದರು. ನಂತರ ಬಂದ ದೇವದತ್ ಪಡಿಕ್ಕಲ್, ಜೋಶ್ ಹೇಜಲ್ ವುಡ್ ಮಾರಕ ದಾಳಿಗೆ ಖಾತೆ ತೆರೆಯಲು ಕೂಡ ಸಾಧ್ಯವಾಗದೇ ಪೆವಿಲಿಯನ್ ಗೆ ಮರಳಿದರು.

    ಇದನ್ನೂ ಓದಿ:ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!
    ಅಪಾರ ನಿರೀಕ್ಷೆಗಳ ಸಾಗರವೇ ಹೊತ್ತು ಬ್ಯಾಟಿಂಗ್ ಗೆ ಇಳಿದಿದ್ದ ವಿರಾಟ್ ಕೊಹ್ಲಿ ಮತ್ತೆ ನಿರಾಸೆ ಮೂಡಿಸಿದ್ದಾರೆ, ಕೇವಲ 5 ರನ್ ಗಳಸಿ ಔಟಾದರು. ನಂತರ ಬಂದ ಪಂತ್ ಆಟ ಲಯಕ್ಕೆ ತಂದರಾದರೂ ಇವರಿಗೆ ಯಾರೂ ಕೂಡ ಜೋಡಿಯಾಗಿ ನಿಲ್ಲಲೇ ಇಲ್ಲ. ಧ್ರುವ್ ಜುರೆಲ್ 11 ರನ್ ಗಳಿಗೆ ಔಟಾದರೆ, ವಾಷಿಂಗ್ಟನ್ ಸುಂದರ್ ಕೂಡ ನಾಲ್ಕು ರನ್ ಗೆ ಸುಸ್ತಾದರು. ಆದರೆ 7 ನೇ ವಿಕೆಟ್ ಗೆ ಪಂತ್‌ ಮತ್ತು ನಿತೀಶ್ 48 ರನ್ ಗಳ ಜೊತೆಯಾಟ ನೀಡಿದರು.
    ನಂತರ ಬಂದ ಹರ್ಷಿತ್ ರಾಣಾ 7 ರನ್ ಗಳಿಸಿ ಔಟಾದರು. ಇನ್ನೂ ಬುಮ್ರಾ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಭಾರತದ ಕಳಪೆ ಬ್ಯಾಟಿಂಗ್ ಪ್ರದರ್ಶನ ಮುಂದುವರಿಯಿತು.

    ಅಂಪೈರ್ ತೀರ್ಪು ವಿರುದ್ದ ರಾಹುಲ್ ಅಸಮಾಧಾನ:

    ಮಿಚೆಲ್ ಸ್ಟಾರ್ಕ್ ಎಸೆತವನ್ನು ರಾಹುಲ್ ಹೊಡೆಯಲು ಮುಂದಾದಾಗ, ಅದು ರಾಹುಲ್ ಅವರ ಬ್ಯಾಟ್ ನ ಸಮೀಪ ಹಾದು ಹೋಗಿ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಕ್ಯಾಚ್ ಹಿಡಿದರು. ತಕ್ಷಣವೇ ಫೀಲ್ಡ್ ಅಂಪೈರ್ ಬಳಿ ಮನವಿ ಮಾಡಿದರು. ನಂತರ ಆಸೀಸ್ ತಂಡ ಥರ್ಡ್ ಅಂಪೈರ್ ಮೊರೆ ಹೋದರು. ಇದನ್ನು ಪುರಸ್ಕರಿಸಿದ ಮೂರನೇ ಅಂಪೈರ್ ರಾಹುಲ್ ಔಟ್ ಎಂದು ಘೋಷಿಸಿದರು.
    ಸ್ಟಾರ್ಕ್ ಎಸೆದ ಚೆಂಡು ರಾಹುಲ್ ಬ್ಯಾಟ್ ತಾಗಿದೆಯೇ ಅಥವಾ ಪ್ಯಾಡ್ ಗೆ ತಾಗಿದೆಯೇ ಎಂಬುದು ಸ್ಪಷ್ಟವಾಗಿರಲಿಲ್ಲ. ರೀಪ್ಲೇಯಲ್ಲಿ ವಿವಿಧ ಆಯಾಮಗಳಿಂದ ಪರಿಶೀಲಿಸಿದ ನಂತರ, ಸ್ನಿಕ್ಕೋಮೀಟರ್ ಏರಿಳಿತವನ್ನು ಆಧರಿಸಿ ರಾಹುಲ್ ಔಟ್ ಎಂದು ತೀರ್ಪು ನೀಡಲಾಯಿತು. ಇದರಿಂದ ರಾಹುಲ್ ಅಸಮಾಧಾನದಿಂದಲೇ ಹೊರ ನಡೆದರು.

    Continue Reading

    Baindooru

    ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್‌..! 6 ಕೋಟಿ ಮೌಲ್ಯದ ಡ್ರ*ಗ್ಸ್‌ ಜಪ್ತಿ..!

    Published

    on

    ಬೆಂಗಳೂರು : ಮಾದಕ ವಸ್ತು ಮಾರಾಟ, ಸಾಗಾಟ ಜಾಲದ ಮೇಲೆ ಕಣ್ಣಿಟ್ಟಿರುವ ಸಿಸಿಬಿ ಅಧಿಕಾರಿಗಳು ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಮಾ*ದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಹಾಗೂ ಸಿಸಿಬಿ  ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ  ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಹೊಸ ವರ್ಷಕ್ಕೆ ಗಾಂ*ಜಾ ಸಪ್ಲೈ :
    ಹೊಸ ವರ್ಷಾಚರಣೆಯ ಸಲುವಾಗಿ ಕ್ವಿಂಟಾಲ್ ಗಟ್ಟಲೆ ಗಾಂ*ಜಾ ಸಪ್ಲೈ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಪೆಡ್ಲರ್ ಅಚ್ಚು ಹಾಗೂ ಜಮೀರ್, ರೇಷ್ಮಾ ದಂಪತಿ ಬಂಧಿತರು. ಆರೋಪಿಗಳಿಂದ 3.25 ಕೋಟಿ ರೂಪಾಯಿ ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.

    ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂ*ಜಾ ಸಂಗ್ರಹಿಸಿದ್ದರು. ಹೊಸ ವರ್ಷಾಚರಣೆ ವೇಳೆ ಬೆಂಗಳೂರು, ಕೇರಳದಲ್ಲಿ ಮಾರಾಟ ಮಾಡಲು ಯೋಜಿಸಿದ್ದರು. ಜಮೀರ್ ಮತ್ತು ರೇಷ್ಮಾ ದಂಪತಿ ಬೆಂಗಳೂರಿನಲ್ಲಿ, ಪೆಡ್ಲರ್ ಅಚ್ಚು ಕೇರಳದಲ್ಲಿ ಗಾಂ*ಜಾ ಮಾರಲು ನಿರ್ಧರಿಸಿದ್ದ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

    ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್ ಡ್ರೈವಿಂಗ್ ಕಾರು ಬಾಡಿಗೆಗೆ ಪಡೆದಿದ್ದರು. ಬಳಿಕ ಬೆಡ್ ಶೀಟ್ ನಲ್ಲಿ ಗಾಂಜಾ ತುಂಬಿ ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು . ಗಾಂಜಾ ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಠಾಣೆ ಪೊಲೀಸರು ಹೆಚ್ ಬಿ ಆರ್ ಲೇಔಟ್ ಬಳಿ ಕಾರನ್ನು ಅಡ್ಡ ಹಾಕಿದ್ದಾರೆ. ಪೊಲೀಸರು ಪರಿಶೀಲನೆ ನಡೆಸುವಾಗ ಕಾರಿನಲ್ಲಿ 3 ಕೋಟಿ ರೂ. ಮೌಲ್ಯದ ಗಾಂ*ಜಾ ಪತ್ತೆಯಾಗಿದೆ. ಕೂಡಲೇ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಡ್ರಗ್ ಪೆಡ್ಲರ್ ಅಚ್ಚು ಕೇರಳ ಪೊಲೀಸರಿಗೆ ಬೇಕಾದ ಮೋಸ್ಟ್ ವಾಂಟೆಡ್  ಆರೋಪಿ ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಆತನ ವಿರುದ್ಧ ಕೇರಳದ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

    ಇಬ್ಬರು ವಿದೇಶಿ ಡ್ರಗ್ ಪೆಡ್ಲರ್ಸ್ ಅರೆಸ್ಟ್ :

    ಬೆಂಗಳೂರಿನಲ್ಲಿ ವಿದೇಶಿ ಡ್ರ*ಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಡ್ರಗ್ಸ್ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾ*ಳಿ ನಡೆಸಿದ ಸಿಸಿಬಿ ಅಧಿಕಾರಿಗಳು,  1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ : ಏನಾಶ್ಚರ್ಯ ? ಈ ಡಯಟ್​ನಿಂದ ಪತ್ನಿಯ 4ನೇ ಸ್ಟೇಜ್ ಸ್ತನ ಕ್ಯಾನ್ಸರ್ ಮಾಯ !!
    ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರ*ಗ್ಸ್ ತರಿಸುತ್ತಿದ್ದರು. ಹೊಸ ವರ್ಷಾಚರಣೆಯಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು ಎಂದು ತಿಳಿದು ಬಂದಿದೆ. ಅಲ್ಲದೇ, ಈ ವಿದೇಶಿ ಪೆಡ್ಲರ್ ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು ಎಂಬುದು ತನಿಖೆ ವೇಳೆ ಬಹಿರಂಗವಾಗಿದೆ.

    Continue Reading

    LATEST NEWS

    Trending