Connect with us

LATEST NEWS

BJPಯವ್ರು ಪ್ರಣಾಳಿಕೆಯ 10% ಭರವಸೆ ಈಡೇರಿಸಿಲ್ಲ: ಅಂಕಿ-ಅಂಶದೊಂದಿಗೆ ಸಿದ್ದರಾಮಯ್ಯ ವಾಗ್ದಾಳಿ

Published

on

ಬೆಂಗಳೂರು: 2018ರ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿಯವರು ಪಕ್ಷದವರು ರಾಜ್ಯದ ಜನತೆಗೆ ಸುಮಾರು 600 ಭರವಸೆಗಳನ್ನು ನೀಡಿದ್ದರು. ಅಧಿಕಾರಕ್ಕೆ ಬಂದು 3 ವರ್ಷಗಳ ನಂತರ ಎಷ್ಟು ವಚನಗಳನ್ನು ಈಡೇರಿಸಿದ್ದಾರೆ ಎಂದು ಉತ್ತರಿಸಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಸವಾಲೆಸೆದಿದ್ದಾರೆ.


ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಅವರು, ನಾವು 2013ರ ಚುನಾವಣೆ ವೇಳೆ ಜನರಿಗೆ 165 ಭರವಸೆಗಳನ್ನು ನೀಡಿ, ಅವುಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಜೊತೆಗೆ ಹೆಚ್ಚುವರಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಬಿಜೆಪಿ ತನ್ನ ಪ್ರಣಾಳಿಕೆಯ ಭರವಸೆಗಳಲ್ಲಿ 10% ಕೂಡ ಈಡೇರಿಸಿಲ್ಲ. ಉಳಿದ ಭರವಸೆಗಳ ಈಡೇರಿಕೆ ಯಾವಾಗ?.
ಪರಿಶಿಷ್ಟ ಹಾಗೂ ಹಿಂದುಳಿದ ಜಾತಿಗಳ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಾತ್ ರೂಂ ಕಿಟ್ ವಿತರಣೆ ಮಾಡುವ ಯೋಗ್ಯತೆ ಬಿಜೆಪಿ ಸರ್ಕಾರಕ್ಕೆ ಇಲ್ಲ.
ದೇವರಾಜ ಅರಸು ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ ಕಳೆದ 3 ವರ್ಷಗಳಿಂದ ಅಗತ್ಯ ಅನುದಾನ ನೀಡಿಲ್ಲ.
ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ 15 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿಕೊಟ್ಟಿದ್ದೆವು, ರಾಜೀವ್‌ ಗಾಂಧಿ ವಸತಿ ಯೋಜನೆ ಪ್ರಾಧಿಕಾರದಿಂದ ಯಾರು ಬೇಕಾದರೂ ಈ ಮಾಹಿತಿ ಪಡೆದುಕೊಳ್ಳಬಹುದು. ಇಡೀ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಂಜೂರು ಮಾಡಿ, ಕಟ್ಟಿಸಿಕೊಟ್ಟ ಒಂದೇ ಒಂದು ಮನೆ ತೋರಿಸಲಿ.
ನಾವು ಬೆಂಗಳೂರು ನಗರಕ್ಕೆ 1 ಲಕ್ಷ ಮನೆ ನಿರ್ಮಾಣ ಮಾಡಬೇಕೆಂದು ಬಜೆಟ್ ನಲ್ಲಿ ಹಣ ಒದಗಿಸಿ, 1072 ಎಕರೆ ಜಮೀನನ್ನು ನೀಡಿ, ಆನ್‌ ಲೈನ್‌ ಮೂಲಕ ಅರ್ಜಿ ಕರೆದು 50,000 ಮನೆಗಳನ್ನು ಮಂಜೂರು ಮಾಡಿದ್ದೆವು. ಬಿಜೆಪಿ ಸರ್ಕಾರ ಬಂದಮೇಲೆ ಎಲ್ಲಾ ಅರ್ಜಿಗಳನ್ನು ವಜಾ ಮಾಡಿದೆ. ಹೊಸದಾಗಿ ಅರ್ಜಿಯನ್ನು ಕರೆದಿಲ್ಲ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಲ ಜಾಸ್ತಿಯಾಗಿದೆ ಎಂದು ಸಿ.ಟಿ ರವಿ ಹೇಳುತ್ತಿದ್ದರು. ನಮ್ಮ ಸರ್ಕಾರದ ಕೊನೆ ಬಜೆಟ್‌ ಮಂಡಿಸಿದಾಗ ರಾಜ್ಯದ ಮೇಲಿದ್ದ ಒಟ್ಟು ಸಾಲ 2.4 ಲಕ್ಷ ಕೋಟಿ. ನಾನು ಅಧಿಕಾರಕ್ಕೆ ಬರುವ ಮೊದಲು ಈ ಸಾಲ 1.36 ಲಕ್ಷ ಕೋಟಿ ಇತ್ತು. ನಮ್ಮನ್ನು ಸಾಲ ಮಾಡಿ ತುಪ್ಪ ತಿನ್ನುವವರು ಎಂದು ಟೀಕಿಸುತ್ತಿದ್ದ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಸಾಲ 5 ಲಕ್ಷದ 40 ಸಾವಿರ ಕೋಟಿಗೆ ಏರಿದೆ. ಕೇವಲ 4 ವರ್ಷಗಳಲ್ಲಿ 3 ಲಕ್ಷ ಕೋಟಿ ಸಾಲ ಮಾಡಿದ್ದು ಬಿಜೆಪಿ ಸಾಧನೆ ಅಲ್ಲವೇ ಸಿ.ಟಿ ರವಿ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ನಡೆದ ಹಗರಣಗಳು ಒಂದೊಂದಾಗಿ ಹೊರಬಂದು ಐಎಎಸ್, ಐಪಿಎಸ್ ಅಧಿಕಾರಿಗಳು ಜೈಲು ಸೇರಿದ್ದಾರೆ. ಮುಖ್ಯಮಂತ್ರಿಗಳಿಗೆ ಅಧಿಕಾರಿಗಳ ಮೇಲೆ ಹಿಡಿತ ಇಲ್ಲ. ಹಾಗಾಗಿಯೇ ಮಾಧುಸ್ವಾಮಿ ಅವರು ಇಲ್ಲಿ ಸರ್ಕಾರ ನಡೆಯುತ್ತಿಲ್ಲ, ಕೇವಲ ಮ್ಯಾನೇಜ್‌ ಮಾಡುತ್ತಿದ್ದೇವೆ ಎಂದು ಹೇಳಿದ್ದು.
ಅಧಿಕಾರಕ್ಕೆ ಬಂದ 24 ಗಂಟೆಗಳ ಒಳಗೆ ಎಸ್.ಟಿ ಸಮುದಾಯಕ್ಕೆ 7.5% ಮೀಸಲಾತಿ ಕಲ್ಪಿಸಿಕೊಡುತ್ತೇವೆ, ಇದನ್ನು ಬೇಕಾದರೆ ರಕ್ತದಲ್ಲಿ ಬರೆದುಕೊಡ್ತೇನೆ ಎಂದಿದ್ದ ಶ್ರೀರಾಮುಲು ಮಹಾ ವಚನಭ್ರಷ್ಟ.
ತಮ್ಮ ವಚನ ಭ್ರಷ್ಟತೆಯನ್ನು ಮುಚ್ಚಿಡಲು ಬಿಜೆಪಿ ನಾಯಕರು ಜನರ ನಡುವೆ ಧರ್ಮ, ಭಾಷೆ, ಆಚಾರ, ವಿಚಾರಗಳಲ್ಲಿ ವಿವಾದ ಸೃಷ್ಟಿಸಿ, ತಮ್ಮನ್ನು ಧರ್ಮ ರಕ್ಷಕರಂತೆ ಬಿಂಬಿಸಿಕೊಳ್ಳುವ ಕೀಳು ರಾಜಕೀಯದ ಮೊರೆ ಹೋಗಿದ್ದಾರೆ ಎಂದು ಸರಣಿ ಟ್ವೀಟ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

LATEST NEWS

ಸಾಕು ಪ್ರಾಣಿಗಳ ಕೃತ್ಯಕ್ಕೆ ಮಾಲೀಕರೇ ಜವಾಬ್ದಾರಿ : ಕರ್ನಾಟಕ ಹೈಕೋರ್ಟ್

Published

on

ಬೆಂಗಳೂರು : ಅಪಾಯಕಾರಿ ತಳಿಯ ಶ್ವಾನಗಳು ಮಾತ್ರ ಜನರಿಗೆ ಗಾಯವನ್ನುಂಟು ಮಾಡಲ್ಲ. ಯಾವ ನಾಯಿಯೂ ಉಗ್ರವಾಗಬಹುದು ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್ ಸಾಕುಪ್ರಾಣಿಗಳ ಮಾಲೀಕರ ಜವಾಬ್ದಾರಿಯನ್ನು ನಿಗದಿಪಡಿಸಲು ಸಂಬಂಧಿತ ನಿಯಮಗಳ ಅಡಿಯಲ್ಲಿ ಕೆಲವು ಮಾರ್ಗಸೂಚಿಗಳನ್ನು ಹೊರಡಿಸುವುದು ಅಗತ್ಯ ಎಂದು ಹೇಳಿದೆ.


ಕೇಂದ್ರ ಸರ್ಕಾರದ ಮೂರು ನಿಯಮಗಳಾದ ಪ್ರಾಣಿಗಳ ಜನನ ನಿಯಂತ್ರಣ (ನಾಯಿಗಳು) ನಿಯಮಗಳು, 2001, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ (ನಾಯಿ ಸಂತಾನೋತ್ಪತ್ತಿ ಮತ್ತು ಮಾರುಕಟ್ಟೆ) ನಿಯಮಗಳು, 2017 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ (ಪೆಟ್ ಶಾಪ್) ನಿಯಮಗಳು, 2018 ಅಡಿಯಲ್ಲಿ ಅಂತಹ ಮಾರ್ಗಸೂಚಿಗಳನ್ನು ನೀಡಲು ಪರಿಗಣಿಸಬಹುದು ಎಂದು ಕೋರ್ಟ್ ಹೇಳಿದೆ.

ಸಾಕು ಪ್ರಾಣಿ ಮಾಲೀಕರ ಹೊಣೆ :

ನಾಯಿ ಕಚ್ಚಿದರೆ ಅದು ಯಾವುದೇ ನಾಯಿಯಾಗಿದ್ದರೂ ಅದು ನಾಯಿ ಕಚ್ಚಿದ್ದೇ ಆಗಿರುತ್ತದೆ. ಅದು ಬ್ರಾಂಡೆಡ್ ಅಪಾಯಕಾರಿ ನಾಯಿ ಅಥವಾ ಇತರ ಯಾವುದೇ ಸಾಮಾನ್ಯ ನಾಯಿಯಾಗಿರಬಹುದು. ಸಾಕು ಪ್ರಾಣಿ ಮಾಲೀಕರು ತಮ್ಮ ನಾಯಿಗಳ ಕೃತ್ಯಕ್ಕೆ ಸಂಪೂರ್ಣವಾಗಿ ಜವಾಬ್ದಾರರಾಗುತ್ತಾರೆ. ಸಾಕು ಪ್ರಾಣಿಗಳ ಮಾಲೀಕರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಸೂಕ್ತವಾಗಿ ರಚಿಸಲಾದ ಸಮಿತಿಯು ಜವಾಬ್ದಾರಿಯುತ ಸಾಕುಪ್ರಾಣಿಗಳ ಮಾಲೀಕತ್ವದ ಪರಿಕಲ್ಪನೆಯನ್ನು ರಕ್ಷಿಸಬೇಕು ಮತ್ತು ಬೇಜವಾಬ್ದಾರಿಯುತ ಸಾಕುಪ್ರಾಣಿ ಮಾಲೀಕತ್ವವನ್ನು ದಂಡನೆಗೆ ಒಳಪಡಿಸಬೇಕು ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಪಾಯಕಾರಿ ಶ್ವಾನಗಳ ಸಾಕಣೆ ನಿಷೇಧಿಸಿ ಮಾರ್ಚ್ 12, 2024 ರಂದು ಹೊರಡಿಸಿದ್ದ ವಿವಾದಾತ್ಮಕ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ (ಏ.10) ರದ್ದುಗೊಳಿಸಿದೆ. ಇಂತಹ ಆಲೋಚನಾ ಪ್ರಕ್ರಿಯೆಯು ಸಮಸ್ಯೆಯನ್ನು ಪರಿಹರಿಸುವುದಿಲ್ಲ ಮತ್ತು ನಾಯಿ ಮಾಲೀಕರು ಅಥವಾ ಯಾವುದೇ ಸಾಕುಪ್ರಾಣಿಗಳು ಮಾಲೀಕರು ಯಾವುದೇ ನಾಗರಿಕರಿಗೆ / ಇತರ ಜೀವಿಗಳಿಗೆ ಹಾನಿಯಾಗದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ : ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!
ಆಯಾ ಪ್ರದೇಶದ ಸುತ್ತಮುತ್ತಲಿನ ನಾಗರಿಕರು ಮತ್ತು ಇತರ ಪ್ರಾಣಿಗಳ ಸಂರಕ್ಷಣೆಗೆ ಸಾಕುಪ್ರಾಣಿ ಮಾಲೀಕರು ಜವಾಬ್ದಾರರಾಗಿರುತ್ತಾರೆ. ಸಾಕುಪ್ರಾಣಿಗಳಿಂದಾಗುವ ಯಾವುದೇ ರೀತಿಯ ಬೇಜವಾಬ್ದಾರಿಯುತ ನಡವಳಿಕೆಗೆ ಸಾಕುಪ್ರಾಣಿ ಮಾಲೀಕರೇ ಜವಾಬ್ದಾರರಾಗಿರುತ್ತಾರೆ ಎಂದು ಕೋರ್ಟ್ ತಿಳಿಸಿದೆ.

Continue Reading

BELTHANGADY

ಶ್ವಾನ ಪ್ರಿಯರೇ ಎಚ್ಚರ..ಎಚ್ಚರ..! ಮಾಲಕಿಯ ತಲೆ ಸೀಳಿದೆ ಸಾಕು ನಾಯಿ..!

Published

on

ಬೆಳ್ತಂಗಡಿ : ಮನೆಯಲ್ಲಿ ಪ್ರಾಣಿಗಳನ್ನು ಸಾಕುವುದೆಂದರೆ ಹೆಚ್ಚಿನವರಿಗೆ ಇಷ್ಟ. ಅದರಲ್ಲೂ ನಾಯಿ ಪ್ರಿಯರು ಅನೇಕ ಮಂದಿ ಇದ್ದಾರೆ. ತಮ್ಮ ಮನೆಗಳಲ್ಲಿ ವಿವಿಧ ತಳಿಯ ನಾಯಿಗಳನ್ನು ಸಾಕುತ್ತಾರೆ. ಈ ನಾಯಿಗಳನ್ನು ಪ್ರೀತಿಸಿದಾಗ ಅವೂ ಅದಕ್ಕೆ ಪ್ರತಿಯಾಗಿ ಪ್ರೀತಿ ಕೊಡೋದು ಸಹಜ. ಆದರೆ, ಅದಕ್ಕೆ ವಿರುದ್ಧವಾದ ಘಟನೆಯೂ ನಡೆಯಬಹುದು ಎಂಬುದಕ್ಕೆ ಗುರುವಾರ(ಏ.18) ಬೆಳ್ತಂಗಡಿಯಲ್ಲಿ ನಡೆದ ಈ ಸುದ್ದಿ ನಿದರ್ಶನವಾಗಿದೆ.


ಮನೆ ಮಾಲಕಿ ತನ್ನ ಸಾಕು ನಾಯಿಯನ್ನು ಮುದ್ದಾಡುವಾಗ ಅದು ಏಕಾಏಕಿ ದಾ*ಳಿ ಮಾಡಿ, ತಲೆ ಭಾಗವನ್ನು ಸೀಳಿ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಮುಂಡಾಜೆ ಗ್ರಾಮ ನಿಡಿಕಲ್ ಓಂಕಾರ್ ನಿವಾಸಿ ದಿವಂಗತ ರಾಮ್ ದಾಸ್ ಎಂಬವರ ಪತ್ನಿ 49 ವರ್ಷದ ಪೂರ್ಣಿಮಾ ಗಂಭೀ*ರ ಗಾ*ಯಗೊಂಡ ಮಹಿಳೆ.

ಇದನ್ನೂ ಓದಿ : Viral Video; ಸ್ಮೋಕ್ ಬಿಸ್ಕೆಟ್ ತಿನ್ನುತ್ತಿದ್ದಂತೆಯೇ ಬಾಲಕ ಅಸ್ವಸ್ಥ

ಪೂರ್ಣಿಮಾ ತನ್ನ ಮನೆಯ ಸಾಕು ನಾಯಿಯನ್ನು ಎಂದಿನಂತೆ ಮುದ್ದಾಡುತ್ತಿದ್ದರು. ಈ ವೇಳೆ ಅವರು ಕಾಲು ಜಾರಿ ನೆಲಕ್ಕೆ ಬಿದ್ದಿದ್ದಾರೆ. ಅದೇನಾಯ್ತೋ ಗೊತ್ತಿಲ್ಲ, ಸಾಕು ನಾಯಿ ಪೂರ್ಣಿಮಾ ಮೇಲೆ ದಾ*ಳಿ ನಡೆಸಿದೆ. ತಲೆ ಭಾಗ ಸೀ*ಳಿ ಹಾಕಿದೆ. ಕೈ ಕಚ್ಚಿ ಗಂಭೀ*ರ ಗಾ*ಯಗೊಳಿಸಿದೆ. ಸದ್ಯ, ಪೂರ್ಣಿಮಾ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

ಬಿಕಿನಿ ತೊಟ್ಟು ಬಸ್ಸಿನಲ್ಲಿ ಅಡ್ಡಾಡಿದ ಯುವತಿ

Published

on

ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ವಿಡೀಯೋಗಳು ಒಂದಾ.. ಎರಡಾ.. ಪ್ರತಿದಿನವೂ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವರಗೆ ವಿಡಿಯೋಗಳನ್ನು ಟ್ರೋಲ್ ಮಾಡೋದೆ ಒಂದು ಕೆಲಸವಾಗಿರುತ್ತದೆ. ಸದ್ಯ ಅದೇ ರೀತಿಯ ಘಟನೆಯೊಂದು ದೆಹಲಿಯಲ್ಲಿ ವೈರಲ್ ಆಗ್ತಾ ಇದೆ.

ಬೇಸಿಲ ಬೇಗೆಗೆ ಸೆಖೆ ಜಾಸ್ತಿ ಆಗಿ ಹೋಗಿದೆ. ಹಾಗಾಗಿ ಇಲ್ಲೊಬ್ಬಳು ಕೇವಲ ಒಳ ಉಡುಪನ್ನು ಧರಿಸಿ ಅರೆಬೆತ್ತಲೆಯಾಗಿ ಬಸ್ಸಿನಲ್ಲಿ ಅಡ್ಡಾಡ್ಡಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಮಹಿಳೆಯ ಈ ವರ್ತನೆಯನ್ನು ಕಂಡು ಜನರು ಗರಂ ಆಗಿದ್ದಾರೆ.

ಸೆಲೆಬ್ರಿಟಿಗಳು, ಇನ್ಫ್ಲುಯೆನ್ಸರ್ ಗಳು ಫೋಟೋಶೂಟ್ ಗಳಿಗಾಗಿ ಬಿಕಿನಿ ಧರಿಸುವುದು ಹೊಸದೇನಲ್ಲ. ಆದರೆ ಇಲ್ಲೊಬ್ಬಳು ಯುವತಿ ಮಾತ್ರ ಸಾರ್ವಜನಿಕ ಸ್ಥಳದಲ್ಲಿ ಬಿಕಿನಿ ತೊಟ್ಟು ಓಡಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾಳೆ. ಹೌದು ದೆಹಲಿಯಲ್ಲಿ ಯುವತಿಯೊಬ್ಬಳು ಕೇವಲ ಒಳ ಉಡುಪು ಧರಿಸಿ ಸಾರ್ವಜನಿಕವಾಗಿ DTC ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ಪ್ರಯಾಣಿಸಿದ್ದಾಳೆ.

ಈಕೆ ಬಸ್ಸಿನಲ್ಲಿ ಅರೆಬೆತ್ತಲೆಯಾಗಿ ನಿಂತಿರುವ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ಇದೆ. ಆಕೆಯ ಈ ಅವತಾರವನ್ನು ನೋಡಲಾರದೆ ಆಕೆಯ ಹತ್ತಿರ ಇದ್ದಂತಹ ಸಹ ಪ್ರಯಾಣಿಕರ ಅಲ್ಲಿಂದ ಎದ್ದು ಹೋಗಿದ್ದಾರೆ.

Continue Reading

LATEST NEWS

Trending