Monday, January 24, 2022

ಮಂಗಳೂರಿನ ಹೊಟೇಲ್ ನಲ್ಲಿ ನಡೆಯಿತು; ಮಾಜಿ ಪ್ರಿಯತಮೆ ಮತ್ತು ಆಕೆಯ ಸ್ನೇಹಿತರಿಗೆಭಗ್ನ ಪ್ರೇಮಿಯಿಂದ ಚಾಕು- ಇರಿತ..!

ಮಂಗಳೂರಿನ ಹೊಟೇಲ್ ನಲ್ಲಿ ನಡೆಯಿತು ಮಾಜಿ ಪ್ರಿಯತಮೆ ಮತ್ತು ಆಕೆಯ ಸ್ನೇಹಿತರಿಗೆ         ಭಗ್ನ ಪ್ರೇಮಿಯಿಂದ ಚಾಕು-ಇರಿತ..!

Ex-girlfriend and her friend stab a knife at a hotel in Mangalore

ಮಂಗಳೂರು:ಸ್ನೇಹಿತರೊಂದಿಗೆ ಮಂಗಳೂರಿನ  ಬೆಂದೂರಿನಲ್ಲಿರುವ ಖಾಸಗಿ ಹೋಟೆಲ್ ಗೆ ಯುವತಿ ಜೊತೆಗೆ ಬಂದ ಮೂವರು ಯುವಕರ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದೆ.

ಹೊಟೇಲ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಹಲ್ಲೆ ದೃಶ್ಯಗಳು ಸೆರೆಯಾಗಿವೆ. ಕದ್ರಿ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹಲ್ಲೆಯಿಂದಾಗಿ ಯುವತಿಗೆ ಗಾಯಗಳಾಗಿದ್ದು ಯುವತಿಯ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ಹೊಡೆದಾಟ ಇದಾಗಿದೆ ಎನ್ನಲಾಗಿದೆ. ಭಗ್ನ ಪ್ರೇಮಿಯೊಬ್ಬ ಸ್ನೇಹಿತರ ಜೊತೆ ಸೇರಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿ ಈಗ ವೈರಲ್‌ ಆಗಿದೆ. ಜನವರಿ ೩೦ರಂದು ಮಧ್ಯಾಹ್ನ ಘಟನೆ ನಡೆದಿದೆ. ಯುವತಿಯ ಈಗಿನ ಗೆಳೆಯ ಪ್ರತೀಕ್ಷ್‌ ಎಂಬಾತ ಚೂರಿಯ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಯುವತಿ ಮಧ್ಯಾಹ್ನ ತನ್ನ ಮಿತ್ರರೊಂದಿಗೆ ಹೋಟೆಲ್‌ನಲ್ಲಿ ಆಹಾರ ಸೇವಿಸುತ್ತಿರುವಾಗ ಆಗಮಿಸಿದ ತ್ರಿಶೂಲ್‌ ಮತ್ತು ಆತನ ಮಿತ್ರರು ಪ್ರತೀಕ್ಷಾ ಹಾಗೂ ಇತರರ ಮೇಲೆ ಚೂರಿಯಿಂದ ಹಲ್ಲೆಗೆ ಮುಂದಾಗಿದ್ದಾರೆ.

ತ್ರಿಶೂಲ್‌ ತನ್ನ ಮಾಜಿ ಪ್ರಿಯತಮೆಯ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾನೆ. ಪ್ರತೀಕ್ಷ್‌ನ ದೇಹದ ನಾಲ್ಕು ಕಡೆಗೆ ಚೂರಿಯ ಇರಿತದ ಗಾಯಗಳಾಗಿವೆ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಮಂಗಳೂರಿನ ಕುವರಿ ರೆಮೊನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ

ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ.ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ,...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...