Connect with us

    FILM

    ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್‌ನ ಖ್ಯಾತ ನಟಿಯ ತಂಗಿ ಅರೆಸ್ಟ್

    Published

    on

    ಮಂಗಳೂರು/ನವದೆಹಲಿ : ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಸಹೋದರಿ ಅಲಿಯಾ ಫಕ್ರಿಯನ್ನು ಬಂಧಿಸಲಾಗಿದೆ.  ಮಾಜಿ ಪ್ರಿಯಕರ ಎಡ್ವರ್ಡ್ ಜೇಕಬ್ಸ್(35) ಮತ್ತು ಅನಸ್ತಾಸಿಯಾ ಎಟಿಯೆನ್ನೆಯನ್ನು ಹ*ತ್ಯೆಗೈದಿರುವ ಗಂಭೀರ ಆರೋಪ ಅಲಿಯಾ ವಿರುದ್ಧ ಕೇಳಿ ಬಂದಿದೆ.  ಎಡ್ವರ್ಡ್ ಜೇಕಬ್ಸ್ ಮತ್ತು ಆತನ ಸ್ನೇಹಿತೆ ಅನಸ್ತಾಸಿಯಾ ನೆಲೆಸಿದ್ದ ಎರಡು ಅಂತಸ್ತಿನ ಕಟ್ಟಡಕ್ಕೆ ಅಲಿಯಾ ಫಕ್ರಿ ಬೆಂ*ಕಿ ಹಚ್ಚಿದ್ದರು. ನೀವೆಲ್ಲರೂ ಸಾಯಿರಿ ಎಂಬುದಾಗಿ ಆಕೆ ಕೂಗಾಡಿದ್ದರು ಎಂಬ ಬಗ್ಗೆ ವರದಿಯಾಗಿದೆ.

    ಬೆಂ*ಕಿ ಸಂಪೂರ್ಣವಾಗಿ ಕಟ್ಟಡವನ್ನು ಆವರಿಸಿದ್ದರಿಂದ ಎಡ್ವರ್ಡ್ ಜೇಕಬ್ಸ್  ಮತ್ತು ಅನಸ್ತಾಸಿಯಾಗೆ ತಪ್ಪಿಕೊಳ್ಳಲಾಗಿರಲಿಲ್ಲ. ಹೀಗಾಗಿ, ದಟ್ಟ ಹೊಗೆ ಆವರಿಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಪ್ರಾ*ಣಬಿಟ್ಟಿದ್ದರು.

    ಇದನ್ನೂ ಓದಿ : ರಿಷಬ್ ಶೆಟ್ಟಿಯಿಂದ ಹೊಸ ಸಿನಿಮಾ ಅನೌನ್ಸ್; ಶಿವಾಜಿ ಮಹಾರಾಜ್ ಆಗಿ ಡಿವೈನ್ ಸ್ಟಾರ್

    ಜೇಕಬ್ಸ್ ಒಂದು ವರ್ಷದ ಹಿಂದೆ ಅಲಿಯಾ ಫಕ್ರಿಯೊಂದಿಗೆ ಬ್ರೇಕ್ ಅಪ್ ಮಾಡಿಕೊಂಡಿದ್ದ. ಆದರೂ ಅಲಿಯಾ ನನ್ನ ಮಗನನ್ನು ಹಿಂಬಾಸುತ್ತಿದ್ದಳು ಎಂಬುದಾಗಿ ಜೇಕಬ್ಸ್ ತಾಯಿ ಆರೋಪಿಸಿದ್ದಾರೆ.  ಸದ್ಯ ಅಲಿಯಾರನ್ನು ನ್ಯೂಯಾರ್ಕ್‌ನ ಕ್ರಿಮಿನಲ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಜಿಲ್ಲಾ ಅಟಾರ್ನಿ ಮೆಲಿಂಡಾ ಜಾಮೀನು ನೀಡಲು ನಿರಾಕರಿಸಿದೆ ಎಂದು ತಿಳಿದುಬಂದಿದೆ.

    DAKSHINA KANNADA

    ಉಳ್ಳಾಲ: ಯುಐ ಚಿತ್ರದ ಯಶಸ್ಸಿಗೆ ಕೊರಗಜ್ಜನಿಗೆ ಅಡ್ಡಬಿದ್ದ ಉಪೇಂದ್ರ

    Published

    on

    ಉಳ್ಳಾಲ: ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಕ್ಷೇತ್ರವು ಪ್ರಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್‌ನ ರಿಯಲ್ ಸ್ಟಾರ್ ನಟ , ನಿರ್ದೇಶಕ ಉಪೇಂದ್ರ ಹೇಳಿದರು.

    ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ಅವರು ಭೇಟಿ ನೀಡಿ ಡಿಸೆಂಬರ್ 20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ ಯುಐ ಸಿನೆಮಾದ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.

    ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪ್ರಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆಯು ನಮ್ಮ ಮೇಲಿರಲಿ ಎಂದರು.  ಚಿತ್ರದ ನಿರ್ಮಾಪಕರಾದ ಕೆ ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್ , ರಾಜೇಶ್ ಭಟ್ ಮೊದಲಾದವರಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನು  ಕ್ಷೇತ್ರದ ಪರವಾಗಿ ಅಭಿನಂದಿಸಿದರು.

    Continue Reading

    BIG BOSS

    ಐಶ್ವರ್ಯ-ಮಂಜು ನಡುವೆ ಹೊತ್ತಿಕೊಂಡ ಬೆಂಕಿ !

    Published

    on

    ಮಂಗಳೂರು/ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಸೀಸನ್ 11’ ರೋಚಕ ಘಟ್ಟ ತಲುಪುತ್ತಿದೆ.

    ಈಗಾಗೀ ಸ್ಪರ್ಧಿಗಳ ನಡುವೆ ಸದ್ಯ ಬಿಗ್ ಬಾಸ್ ಮನೆ ಎರಡು ಟಿವಿ ವಾಹಿನಿಗಳಾಗಿ ಪರಿವರ್ತನೆ ಆಗಿದೆ. ಎರಡು ವಾಹಿನಿಗಳ ಉದ್ಯೋಗಿಗಳು ಎದುರಾಳಿಗಳಿಗೆ ಟಕ್ಕರ್ ನೀಡುವ, ಕಾಲೆಳೆಯುವ ಟಾಸ್ಕ್ ಜೋರಾಗಿ ನಡೆಯುತ್ತಿದೆ.

    ಇದರ ನಡುವೆ ದೊಡ್ಮನೆಯಲ್ಲಿ ನಾಮಿನೇಷನ್ ಕಾವು ಜೋರಾಗಿದೆ. ಬಿಗ್ ಬಾಸ್ ಇಂದು ನಾಮಿನೇಷನ್ ಗೆ ಸಂಬಂಧಿಸಿದ ಟಾಸ್ಕ್ ನೀಡಿದ್ದಾರೆ. ಈ ಸಲದ ನಾಮಿನೇಷನ್ ಪ್ರಕ್ರಿಯೆ ವಿಭಿನ್ನವಾಗಿದ್ದು, ಮನೆಯಲ್ಲಿ ಇರಲು ಯೋಗ್ಯತೆ ಇಲ್ಲದ ಸದಸ್ಯರನ್ನು ಆರಿಸಿ, ಬೆನ್ನಿಗೆ ಚೂರಿಯನ್ನು ಚುಚ್ಚಬೇಕು ಎಂಬ ಟಾಸ್ಕ್ ನೀಡಲಾಗಿದೆ.

    ಇದನ್ನೂ ಓದಿ: ಮುಖ್ಯಶಿಕ್ಷಕನಿಂದಲೇ ಬ*ಲತ್ಕಾರಕ್ಕೊಳಗಾದ 5ನೇ ತರಗತಿ ವಿದ್ಯಾರ್ಥಿನಿ !

    ಈ ಟಾಸ್ಕ್ ನಲ್ಲಿ ಎಲ್ಲಾ ಸ್ಪರ್ಧಿಗಳು ಮಂಜು ಬೆನ್ನಿಗೆ ಚುರಿ ಚುಚ್ಚಿದ್ದಾರೆ. ಎಂಟು ಮಂದಿ ಸ್ಪರ್ಧಿಗಳ ಚೂರಿಗಳು ಮಂಜು ಬೆನ್ನಿಗೆ ಬಿದ್ದಿದೆ. ಮಂಜು ಅವರಿಗೆ ಐಶ್ವರ್ಯ ಚೂರಿ ಚುಚ್ಚುವ ವೇಳೆ ನೀಡಿರುವ ಕಾರಣ, ಮಂಜು ಅವರನ್ನು ಕೆರಳಿಸುವಂತೆ ಮಾಡಿದೆ.
    ಇಬ್ಬರು ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ನೀವು ಮಾನಸಿಕವಾಗಿ ನನ್ನನ್ನು ಕುಗ್ಗಿಸಲು ನೋಡಿದ್ರೆ, ನಾನು ಕುಗ್ಗುವಂತಹ ಮಗಳೇ ಅಲ್ಲ. ಅದು ಏನೇನು ಚುಚ್ಚಿ ಮಾತನಾಡ್ತಿರೋ ಆಡಿ ಎಂದು ಐಶ್ವರ್ಯ ಸವಾಲ್ ಹಾಕಿದ್ದಾರೆ.

    ಅದಕ್ಕೆ ಮಂಜು ಅವರು ಯಾವ ರೀತಿ ಕೌಂಟರ್ ನೀಡುತ್ತಾರೆ ? ಅದು ಅಲ್ಲದೆ ಇವರಿಬ್ಬರ ನಡುವೆ ಬೆಂಕಿ ಹೊತ್ತಿಕೊಳ್ಳಲು ನಿಜವಾದ ಕಾರಣ ಏನು ಅನ್ನೋದು ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

     

    Continue Reading

    FILM

    ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು !

    Published

    on

    ಮಂಗಳೂರು/ಬೆಂಗಳೂರು: ಸರಿಯಾಗಿ ಒಂದು ತಿಂಗಳ ಬಳಿಕ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ಹಿಂದಿನ ರಹಸ್ಯ ಬಹಿರಂಗಗೊಂಡಿದೆ.


    ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ತನಿಖೆಯಿಂದ ಹಲವು ಸಂಗತಿಗಳು ಬಯಲಿಗೆ ಬಂದಿವೆ. ಅವರು ಹಣ ಇಲ್ಲದೇ ಸಾಲ ಮಾಡಿಕೊಂಡಿದ್ದರು. ಸ್ನೇಹಿತರು, ಸಂಬಂಧಿಕರು ಸೇರಿ ಹಲವರ ಬಳಿ ಕೋಟ್ಯಂತರ ರೂ. ಸಾಲ ಮಾಡಿದ್ದಾರೆ.

    ಇದನ್ನೂ ಓದಿ: ತಾಯಿಯ ಆಸೆ ಈಡೇರಿಸಲು ಹೋಗಿ ಕಂಬಿ ಎಣಿಸುತ್ತಿರುವ ಮಗ !

    ಸಾಲದಿಂದ ರೋಸಿ ಹೋಗಿದ್ದ ಗುರುಪ್ರಸಾದ್, ಆನ್ ಲೈನ್ ಜೂಜಿನ ಚಟಕ್ಕೆ ಸಿಲುಕಿರುವ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಸಾಲ ಹೆಚ್ಚಾದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಸಾಲ ಕೇಳುವಾಗ ‘ಫಿಲ್ಮ್ ಮಾಡ್ತಿದ್ದೀನಿ, ಸಿನಿಮಾದಿಂದ ಖಂಡಿತ ಹಣ ಬರುತ್ತೆ, ಆಗ ಹಣ ವಾಪಸ್ ಕೊಡುತ್ತೀನಿ ಎಂದು ಹೇಳುತ್ತಿದ್ದರಂತೆ. ಹೀಗಾಗಿ ಆನ್ ಲೈನ್ ಗೇಮ್ ಗಳಲ್ಲಿ ಬೆಟ್ಟಿಂಗ್ ಆಡುತ್ತಿದ್ದರು ಎಂದು ತಿಳಿದುಬಂದಿದೆ. ಅದರಲ್ಲೂ ಗುರುಪ್ರಸಾದ್ ರಮ್ಮಿ ಸರ್ಕಲ್ ಸುಳಿಗೆ ಸಿಲುಕ್ಕಿದ್ದರು. ಸಾಲ ಹೆಚ್ಚಾದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    Continue Reading

    LATEST NEWS

    Trending