Connect with us

LATEST NEWS

“ಮಾನವೀಯ ಮೌಲ್ಯಗಳಿಗೆ ನಿಜಕ್ಕೂ ದೂರವಾಗಿರುವ ಮಾಧ್ಯಮಗಳು ಇದ್ದರೆಷ್ಟು ಹೋದರೆಷ್ಟು”

Published

on

ಬೆಂಗಳೂರು: ಈ ದೇಶದ ಸಂವಿಧಾನದ ಕುರಿತು ಸಮರ್ಪಕ ತಿಳುವಳಿಕೆ ಇಲ್ಲದ ಮತ್ತು ಸಂವಿಧಾನದ ಮೂಲ ಆಶಯಗಳ ಸಾಕಾರಕ್ಕಾಗಿ ತುಡಿಯದ, ಮಾನವೀಯ ಮೌಲ್ಯಗಳಿಗೆ ನಿಜಕ್ಕೂ ದೂರವಾಗಿರುವ ಮಾಧ್ಯಮಗಳು ಇದ್ದರೆಷ್ಟು ಹೋದರೆಷ್ಟು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಾಜಿ ಸಚಿವ ಹೆಚ್‌.ಸಿ ಮಹದೇವಪ್ಪ ಗರಂ ಆಗಿದ್ದಾರೆ.


ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ತೈಲ ಬೆಲೆ ಏರಿಕೆ ಆದಾಗ ಜನರಿಗೆ ತೊಂದರೆ ಆಗುತ್ತಿದೆ, ಅದರ ಬಗ್ಗೆ ಗಮನ ಹರಿಸಿ ಅದನ್ನು ಬಿಟ್ಟು ಕಾಶ್ಮೀರ ಫೈಲ್ಸು, ಆ ಫೈಲ್ಸು ಈ ಫೈಲ್ಸು ಅಂತೀರಲ್ಲ ಅಂತ ಒಂದು ಗಟ್ಟಿಯಾದ stand ತೆಗೆದುಕೊಳ್ಳುವುದಿರಲಿ, ಕನಿಷ್ಠ ಪಕ್ಷ ಆ ಬಗ್ಗೆ ಒಂದು ಪ್ರಶ್ನೆಯನ್ನೂ ಕೇಳದ ಸ್ಥಿತಿಗೆ ಕೆಲವು ಮಾಧ್ಯಮಗಳು ಬಂದು ಬಿಟ್ಟಿವೆ.
ಇನ್ನು ಹೊನ್ನಾಳಿಯ ಶಾಸಕ ತಮ್ಮ ಕುಟುಂಬದವರಿಗೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ಪಡೆದರೂ ಅದು ಅಸಂವಿಧಾನಿಕ ಎಂದು ಗಟ್ಟಿಯಾಗಿ ಹೇಳುವ ಧೈರ್ಯವನ್ನು ಯಾವ ಮಾಧ್ಯಮ ತೋರಿದೆ? ನಿಜಕ್ಕೂ ಇದೊಂದು ತಲೆ ತಗ್ಗಿಸಬೇಕಾದ ಸಂಗತಿ?
ಮೊನ್ನೆ ವಿಧಾನ ಸಭಾ ಸ್ಪೀಕರ್ ಅದ ಕಾಗೇರಿ ಅವರು ತಾವು ಎಂತಹ ಸ್ಥಾನದಲ್ಲಿ ಕೂತಿದ್ದೇವೆ ಎಂಬುದನ್ನು ಮರೆತು “ನಾವು RSS ನವರು” ಎಂದು ಬಾಲಿಶವಾಗಿ ಮಾತನಾಡುತ್ತಿದ್ದಾಗ ಅದು ಅಸಂವಿಧಾನಿಕ ನಡೆ, ಓರ್ವ ಸ್ಪೀಕರ್ ಹಾಗೆ ವರ್ತಿಸಬಾರದು ಎಂದು ಒಬ್ಬರಾದರೂ ತಮ್ಮ ಪ್ರತಿರೋಧವು ರಿಜಿಸ್ಟರ್ ಆಗುವಂತೆ ಹೇಳಿದರೇ?
ಇನ್ನು ಸಮಾಜವಾದಿ ನಾಡಿನ ಓರ್ವ ವ್ಯಾಧಿ ಎನ್ನಬಹುದಾದ ಶಾಸನಬದ್ಧ ಜನ ಪ್ರತಿನಿಧಿ ಈಶ್ವರಪ್ಪ ಎಂಬಾತ ರಾಷ್ಟ್ರಧ್ವಜದ ಬಗ್ಗೆ ಅಗೌರವ ತೋರಿದಾಗ, ಅದು ಅಸಂವಿಧಾನಿಕ ನಡೆ ಎಂದು ತಾವೇ ಒಂದು ಹೆಜ್ಜೆ ಮುಂದೆ ಹೋಗಿ ಆತನಿಗೆ ತಿಳಿ ಹೇಳಬೇಕಿದ್ದ ಮಾಧ್ಯಮಗಳು ” ಸದನದಲ್ಲಿ ಕಾಂಗ್ರೆಸ್ ನಿಂದ ಗದ್ದಲ” ಎನ್ನುವಾಗ ಇವರಿಗೆ ಏನು ಹೇಳುವುದು?

ಪುಲ್ವಾಮ ಘಟನೆ ನಡೆದು ಎಷ್ಟು ದಿನವಾಯಿತು? ಮಡಿದ ಸೈನಿಕರ ಸಾವಿಗೆ ಕಾರಣ ಹುಡುಕಿ ಎಂದು ಒಬ್ಬರಾದರೂ ಸರ್ಕಾರದ ಪಟ್ಟು ಹಿಡಿಯುವ ಧೈರ್ಯ ತೋರಿದರೇ?
ಕೆಲ ಪುಂಡರು ಬೀದಿಯಲ್ಲಿ ನಿಂತು ಬೇರೆ ಧರ್ಮದವರ ಅಂಗಡಿಗಳನ್ನು ತೆರವುಗೊಳಿಸುತ್ತೇವೆ,ಶಸ್ತ್ರ ಹಿಡಿಯಬೇಕು ಎಂದೆಲ್ಲಾ ಮಾತನಾಡುವಾಗ ಅವರು
“ಅನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದು, ಸಮಾಜದ ಸಾಮರಸ್ಯ ಕೆಡಿಸುತ್ತಿದ್ದಾರೆ, ಸರ್ಕಾರ ಕೂಡಲೇ ಅಂತವರನ್ನ ಬಂಧಿಸಬೇಕು” ಎಂಬ ಅರಿವು ಮೂಡಿಸಲು ಆಗದೇ ಇದ್ದ ಮೇಲೆ ಸಮಾಜಕ್ಕೆ ಇವರ ಅವಶ್ಯಕತೆ ಏನು?
ಹರ್ಷ ಎಂಬಂತಹ ನಿರುದ್ಯೋಗಿ ಹುಡುಗರ ತಲೆ ಕೆಡಿಸಿ ಅವನನ್ನು ರೌಡಿ ಶೀಟರ್ ಆಗಿಸಿ ಕೊನೆಗೆ ಹಿಂಸಾ ಮಾರ್ಗದಲ್ಲೇ ಬಲಿಯಾಗುವಂತಹ ಮಾರ್ಗವು ತಪ್ಪು, ಅದು ಧರ್ಮವಲ್ಲ ಮೂರ್ಖತನ ಎಂದು ಹೇಳಿದ ಒಂದೇ ಒಂದು ಮುಖ್ಯ ವಾಹಿನಿಯ ಮಾಧ್ಯಮಗಳನ್ನು ನಾನು ಕಾಣಲಿಲ್ಲ ಎಂಬುದು ಸತ್ಯ.
ನಾನು ಗಮನಿಸಿದಂತೆ ಮಾಧ್ಯಮ ವಲಯದಲ್ಲಿ ಸಂವಿಧಾನದ ಕುರಿತ ತಿಳುವಳಿಕೆ ತೀರಾ ಕಡಿಮೆ ಮಟ್ಟದಲ್ಲಿ ಇದೆ. ಹೀಗಾಗಿಯೇ ಅವರಿಗೆ ಸಮಾಜ, ಸರ್ಕಾರ ಮತ್ತು ರಾಜಕೀಯದಲ್ಲಿ ಯಾವುದು ಸಂವಿಧಾನ ಬಾಹಿರ ನಡೆ ಎಂದು ಗುರುತಿಸಲು ಮತ್ತು ಆ ಬಗ್ಗೆ ಧೈರ್ಯದಿಂದ ದನಿ ಎತ್ತಲು ವಿಶ್ವಾಸ ಸಾಲುತ್ತಿಲ್ಲ ಎಂದು ಅನಿಸುತ್ತಿದೆ ಎಂದು ಸರಣಿ ಟ್ವೀಟ್‌ ಮಾಡಿದ್ದಾರೆ.

DAKSHINA KANNADA

ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

Published

on

ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Continue Reading

LATEST NEWS

ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!

Published

on

ಮಂಗಳೂರು ( ಕನ್ಯಾಕುಮಾರಿ ) : ಮದುವೆ ಸಮಾರಂಭಕ್ಕೆಂದು ಕನ್ಯಾಕುಮಾರಿಗೆ ತೆರಳಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಅಸು ನೀಗಿದ್ದಾರೆ. ಮದುವೆಗೆ ತೆರಳಿದ್ದ ಸ್ನೇಹಿತರು ಲೇಮುರ್ ಬೀಚ್‌ನಲ್ಲಿ ಈಜಲು ಇಳಿದಾಗ ಈ ಧುರ್ಘಟನೆ ಸಂಭವಿಸಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಸಮುದ್ರಲ್ಲಿ ಈಜಲು ಹೋಗಿದ್ದು ಮೂವರನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ. ಎಲ್ಲರೂ ತಿರುಚಿನಪಳ್ಳಿಯಲ್ಲಿರುವ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ. ತಂಜಾವೂರಿನ ಚಾರುಕವಿ, ನೇಯ್ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್, ದಿಂಡಿಗಲ್‌ನ ಪ್ರವೀಣ್ ಸ್ಯಾಮ್ ಹಾಗೂ ಆಂದ್ರದ ವೆಂಕಟೇಶ್‌ ನೀರುಪಾಲದ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದಾರೆ. ಇಂಟರ್ನ್‌ಗಳಾಗಿದ್ದ ಕರೂರಿನ ನೇಶಿ, ಥೆಂಗಿಯ ಪ್ರಿಯಾಂಕಾ ಹಾಗೂ ಮದುರೈನ ಶರಣ್ಯ ಎಂಬ ಯುವತಿಯರನ್ನು ರಕ್ಷಿಸಲಾಗಿದೆ

ನಿಶೇಧವಿದ್ರೂ ಸಮುದ್ರಕ್ಕೆ ಪ್ರವೇಶ ಮಾಡಿದ್ದರು

ಖಾಸಗಿ ಬೀಚ್‌ ಆಗಿರೋ ಲೆಮುರ್ ಬೀಚ್‌ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಲಾಗಿತ್ತು. ಇನ್ನು ಭಾನುವಾರದಂದು ಸಮುದ್ರದಲ್ಲಿ ಭಾರಿ ಅಲೆಗಳು ಇದ್ದ ಕಾರಣ ಯಾರೂ ಸಮುದ್ರಕ್ಕೆ ಇಳಿಯಬಾರದು ಅನ್ನೋ ಎಚ್ಚರಿಕೆ ನೀಡಲಾಗಿತ್ತು. ಹೀಗಿದ್ರೂ ಇವರು ಸಮುದ್ರಕ್ಕೆ ಹೇಗೆ ಹೋದ್ರು ಅನ್ನೋದು ತನಿಖೆ ನಡೆಸಲಾಗುತ್ತಿದೆ. ಮದುವೆಗೆ ಬಂದಿದ್ದ ಸ್ನೇಹಿತರೆಲ್ಲ ಬೇರೆ ಬೇರೆ ಗುಂಪುಗಳಾಗಿ ಚದುರಿ ಹೋಗಿದ್ದು, ಈ ಎಂಟು ಜನ ವಿದ್ಯಾರ್ಥಿಗಳು ಸಮುದ್ರ ಕಿನಾರೆ ಬಂದು ಸಮುದ್ರಕ್ಕೆ ಇಳಿದಿದ್ದಾರೆ.

ಕೋರ್ಸು ಮುಗಿಸುವ ಹಂತದಲ್ಲಿ ನಡೆಯಿತು ದುರ್ಘಟನೆ

ಈ ವಿದ್ಯಾರ್ಥಿಗಳ ಕೋರ್ಸ್‌ ಇನ್ನೇನು ಕೆಲವೇ ದಿನಗಳಲ್ಲಿ ಮುಗಿದು ಎಲ್ಲರೂ ವೈದ್ಯರಾಗುವ ಕನಸು ಕಾಣುತ್ತಿದ್ದರು. ಯಾವ ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್‌ ಮಾಡಬೇಕು, ಯಾವ ನಗರಕ್ಕೆ ಹೋದರೆ ಸೂಕ್ತ ಎಂಬ ಕುರಿತು ಅವರ ಮಧ್ಯೆಯೇ ಚರ್ಚೆ ನಡೆಯುತ್ತಿತ್ತು. ಅವರ ಪೋಷಕರು ಕೂಡ ನೂರಾರು ಕನಸು ಕಂಡಿದ್ದರು. ಆದರೆ, ಮದುವೆಗೆ ಹೋದವರು, ಮದುವೆ ಮುಗಿಸಿ ನೇರ ಮನೆಗೆ ಬಂದಿದ್ರೆ ಎಲ್ಲವೂ ಎನಿಸಿದಂತೆ ನಡೆಯುತ್ತಿತ್ತು. ಆದ್ರೆ ವಿಧಿ ಇವರ ಎಲ್ಲಾ ಕನಸುಗಳನ್ನ ಕಿತ್ತುಕೊಂಡಿದೆ.

Continue Reading

LATEST NEWS

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!

Published

on

ಬೆಂಗಳೂರು: ಹಾಸನದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೆಸರು ಬಳಸದಂತೆ ಬೆಂಗಳೂರಿನ ನ್ಯಾಯಾಲಯ ನಿರ್ಬಂಧ ಹೇರಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಎಚ್. ಡಿ ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ಹೆಸರು ಬಳಸಂತೆ ಮಾಧ್ಯಮಗಳು, ಪತ್ರಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ‘ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ. ಮಾಧ್ಯಮಗಳಲ್ಲಿ ನಮ್ಮ ಹೆಸರು ಬಳಸುವುದರಿಂದ ತಮ್ಮ ಘನತೆ, ಗೌರವಕ್ಕೆ ಧಕ್ಕೆಯಾಗುತ್ತಿದೆ. ಹೀಗಾಗಿ ಮಧ್ಯಂತರ ತಡೆಯಾಜ್ಞೆ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದರು.‌ ಮನವಿ ಆಲಿಸಿದ ನ್ಯಾಯಾಧೀಶರು ಮಾಧ್ಯಮಗಳು ಸತ್ಯಕ್ಕೆ ದೂರವಾದ, ಆಧಾರ ರಹಿತ ಸುದ್ದಿಗಳನ್ನು ಅರ್ಜಿದಾರರ ವಿರುದ್ಧ ಪ್ರಸಾರ ಮಾಡದಂತೆ ನಿರ್ಬಂಧ‌ ವಿಧಿಸಿ ಪ್ರತಿವಾದಿಗಳಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದ್ದಾರೆ.

 

Continue Reading

LATEST NEWS

Trending