Wednesday, December 1, 2021

ಕೋಟಿ-ಚೆನ್ನಯ್ಯರ ಸುರಿಯವನ್ನು ತಲವಾರಿಗೆ ಹೋಲಿಕೆ ಮಾಡಿದರೂ ಬಿಜೆಪಿ ಜಿಲ್ಲಾಧ್ಯಕ್ಷ, ಸಚಿವರೂ ಯಾಕೆ ಮೌನವಾಗಿದ್ದಾರೆ: ಮಾಜಿ ಶಾಸಕಿ ಶಕುಂತಳಾ ಶೆಟ್ಟಿ

ಮಂಗಳೂರು: ಚೈತ್ರಾ ಕುಂದಾಪುರ ಅವರು ಬಿಲ್ಲವ ಸಮುದಾಯದ ಪೂಜನೀಯ ಆಯುಧ ಸುರಿಯ ವನ್ನು ತಲವಾರಿಗೆ ಹೋಲಿಕೆ ಮಾಡಿ ಮಾತನಾಡಿದರೂ ಅದೇ ಸಮುದಾಯದದವರಾದ ಬಿಜೆಪಿಯ ಜಿಲ್ಲಾಧ್ಯಕ್ಷರು,

ಸಮುದಾಯ ಇಬ್ಬರು ಸಚಿವರು ಮಾನವಾಗಿರುವುದು ಏನನ್ನು ಸೂಚಿಸುತ್ತದೆ ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪ್ರಶ್ನಿಸಿದ್ದಾರೆ.


‘ಸುರಿಯ ಎನ್ನುವುದು ಕೋಟಿ ಚೆನ್ನಯ್ಯರ ಕೈಯಲ್ಲಿರುವ ಆಯುಧ. ಆ ಆಯುಧಕ್ಕೆ ಒಂದು ಗೌರವ ಇದೆ. ಅದೊಂದು ಪೂಜ್ಯನೀಯ ವಸ್ತು.

ಅದನ್ನು ತಲವಾರಿಗೆ ಹೋಲಿಸಿ ನೀವು ಮಾತನಾಡುವಾಗ ಅಲ್ಲಿ ಬಿಲ್ಲವ ಯುವಕರು, ಬಂಟ ಯುವಕರು ಇರಲಿಲ್ಲವೇ? ನಾಲಗೆ ಹರಿಬಿಡುವ ವೇಳೆ ಜಾಗೃತೆ ಇರಲಿ ಎಂದರು.
ಅನೈತಿಕ ಪೊಲೀಸ್‌ಗಿರಿಯನ್ನು ಪ್ರಶ್ನಿಸುವ ಮಹಿಳಾ ನಾಯಕಿಯರನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಅವಮಾನಿಸುವ, ನಿಂದಿಸುವುದು, ಮಾನಸಿಕ ಹಿಂಸೆ ನೀಡುವುದು ಹಿಂದೂ ಧರ್ಮದ ಸಂಸ್ಕೃತಿಯಲ್ಲ.

ನಾನು 30 ವರ್ಷ ಬಿಜೆಪಿಯಯಲ್ಲಿ ತಳಮಟ್ಟದಿಂದ ಬೆಳೆದು ಬಂದವಳು. ನನ್ನ ಪಕ್ಷದ ಚಿನ್ನೆ ಬದಲಾಗಿರಬಹುದು ಆದರೆ ಈ ಶಕು ಅಕ್ಕ ಬದಲಾಗಲಿಲ್ಲ ಎಂದರು.
ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಮತಾ ಗಟ್ಟಿ, ಅಪ್ಪಿ, ಸುರೇಖಾ ಚಂದ್ರಹಾಸ್, ಚಂದ್ರಕಲಾ, ಮಲ್ಲಿಕಾ, ತನ್ವೀರ್, ಗೀತಾ ಅತ್ತಾವರ ಮೊದಲಾದವರು ಉಪಸ್ಥಿತರಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...