Connect with us

    LATEST NEWS

    ಮುಂಬೈ ಹಿರೇನ್ ಕೊಲೆ ಪ್ರಕರಣ: ಎನ್ ಕೌಂಟರ್ ಸ್ಪೆಷಲಿಸ್ಟ್ ಪ್ರದೀಪ್ ಶರ್ಮಾ ಮನೆ ಮೇಲೆ ಎನ್‌ಐಎ ದಾಳಿ..!

    Published

    on

    ಮುಂಬೈ: ಉದ್ಯಮಿ ಮನ್ ಸುಕ್ ಹಿರೇನ್ ಕೊಲೆ ಪ್ರಕರಣ ಮತ್ತು  ರಿಲಯನ್ಸ್ ಇಂಡಸ್ಟ್ರೀಸ್ ಚೇರ್ ಮೆನ್  ಮುಖೇಶ್ ಅಂಬಾನಿ ನಿವಾಸದ ಸಮೀಪ ಬಾಂಬ್‌ ಪತ್ತೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)  ಎನ್‌ಕೌಂಟರ್ ಸ್ಪೆಷಲಿಸ್ಟ್‌ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾ ಅವರ ನಿವಾಸದ ಮೇಲೆ ದಾಳಿ ನಡೆಸಿದೆ.

    ಎನ್‌ಐಎ ತಂಡ ಸಶಸ್ತ್ರ ಸಿಆರ್‌ಪಿಎಫ್‌ ಪೊಲೀಸರ ಬಿಗು ಭದ್ರತೆಯಲ್ಲಿ ಮುಂಬೈ ಅಂಧೇರಿ ಉಪನಗರದ ಪಶ್ಚಿಮ ಭಾಗದ ಜೆ.ಬಿ.ನಗರದಲ್ಲಿರುವ ಶರ್ಮಾ ಅವರ ಮನೆ ಮೇಲೆ ಇಂದು ಮುಂಜಾನೆ ದಾಳಿ ನಡೆಸಿದೆ.

    ಇದೇ ವೇಳೆ ಮನ್‌ಸುಖ್ ಹಿರೇನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶರ್ಮಾ ಅವರನ್ನು ಎನ್‌ಐಎ ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ದಾಳಿಯ ವೇಳೆ ಶರ್ಮಾ ನಿವಾಸವನ್ನು ಸಂಪರ್ಕಿಸುವ ಎಲ್ಲ ರಸ್ತೆಗಳನ್ನು ಸಿಆರ್‌ಪಿಎಫ್‌ ಪಡೆಗಳು ಸುತ್ತುವರಿದಿದ್ದು, ಈ ಪ್ರದೇಶದಲ್ಲಿ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

    ಈ ದಾಳಿಯ ಬಗ್ಗೆ ಮಾಹಿತಿ ಪಡೆದ ನಂತರ ಮುಂಬೈ ಪೊಲೀಸರು ತನ್ನ ಸಿಬ್ಬಂದಿಯನ್ನು ಸ್ಥಳದಲ್ಲಿಯೇ ನಿಯೋಜಿಸಿದ್ದಾರೆ.

    ಇದಕ್ಕೂ ಮುನ್ನ ಶರ್ಮಾ ಅವರನ್ನು ತನಿಖೆಯ ಭಾಗವಾಗಿ ಎನ್‌ಐಎ ದಕ್ಷಿಣ ಮುಂಬೈನ ತನ್ನ ಕಚೇರಿಯಲ್ಲಿ ಎರಡು ದಿನಗಳ ಕಾಲ ಪ್ರಶ್ನಿಸಿತ್ತು.

    ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತಂಡ ಪೊಲೀಸ್ ಅಧಿಕಾರಿಗಳಾದ ಸಚಿನ್ ವಾಜೆ, ರಿಯಾಝುದ್ದೀನ್ ಕಝಿ, ಸುನಿಲ್ ಮಾನೆ, ನಿವೃತ್ತ ಪೊಲೀಸ್ ಕಾನ್‌‌ಸ್ಟೆಬಲ್ ವಿನಾಯಕ್ ಶಿಂಧೆ ,ಕ್ರಿಕೆಟ್ ಬುಕಿ ನರೇಶ್ ಗೌರ್, ಸಂತೋಷ್ ಸೇಲರ್ ಮತ್ತು ಆನಂದ್ ಜಾಧವ್ ಅವರನ್ನು ಈಗಾಗಲೇ ಬಂಧಿಸಿದ್ದಾರೆ.

     

    LATEST NEWS

    ಕಂಬಳ ಕ್ಷೇತ್ರಕ್ಕೆ ಮತ್ತೊಂದು ಅಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ

    Published

    on

    ಮಣಿಪಾಲ: ಕೆಲವು ದಿನಗಳ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಅಘಾ*ತ ಎದುರಾಗಿದೆ. ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಹೃದಯಾಘಾ*ತದಿಂದ ಕೊನೆ*ಯುಸಿರೆಳೆದಿದೆ.

    ‘ನಾಗು’ ಕೋಣವು ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.

    ಬೈಂದೂರಿನಿಂದ ಬಂಢಾರಮನೆ ಸೇರಿದ್ದ ನಾಗು, ಬಳಿಕ ಚಿತ್ಪಾಡಿ ಅಪ್ಪು ಶೆಟ್ಟಿ ಅವರ ಹಟ್ಟಿ ಸೇರಿದ್ದ. ಎರಡು ವರ್ಷಗಳ ಹಿಂದೆ ನಾಗು ಕೋಣವನ್ನು ಜಪ್ಪು ಮಂಕುತೋಟ ಅನಿಲ್ ಶೆಟ್ಟಿ ಅವರು ಖರೀದಿ ಮಾಡಿದ್ದರು.

    ಕೂಟಗಳಲ್ಲಿ ಸಕ್ರಿಯವಾಗಿದ್ದ ಎರಡು ಕೋಣಗಳನ್ನು ಎರಡು ವಾರಗಳ ಅಂತರದಲ್ಲಿ ಕಂಬಳ ಕ್ಷೇತ್ರ ಕಳೆದುಕೊಂಡಿದೆ.

    Continue Reading

    LATEST NEWS

    WATCH : UDUPI : ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದಿದ್ದು ಹೇಗೆ?

    Published

    on

    ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ(ಜು.27) ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು‌ ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.


    ನಾಯಿ ಬೊಗಳಿದರೂ ಮನೆಯವರು ಹೊರಬಂದಿಲ್ಲ. ಕೆಲವು ದಿನಗಳಿಂದ ಮಣಿಪಾಲ ಆಸುಪಾಸಿನಲ್ಲಿ ಚಿರತೆ ಓಡಾಟದ ಮಾಹಿತಿ ತಿಳಿದಿದ್ದ ಮನೆಯವರು ಸುಮ್ಮನಿದ್ದರು ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ನಾಯಿಯ ಶಬ್ದ ಕೂಡ ಕೇಳಿರಲಿಲ್ಲ. ಬೆಳಿಗ್ಗೆ ಮನೆಯ ಸಿಸಿಟಿವಿ ದ್ರಶ್ಯಾವಳಿ ಗಮನಿಸಿದಾಗ ಚಿರತೆ ನಾಯಿಯ ಹಿಂದೆ ಹೋಗುತ್ತಿರುವ ದೃಶ್ಯ ಕಂಡು ಭಯಭೀತರಾಗಿದ್ದಾರೆ.

    ಇದನ್ನೂ ಓದಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
    ಆದರೆ ಅಚ್ಚರಿ ಎಂಬಂತೆ ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬೆಳಿಗ್ಗೆ ಪ್ರತ್ಯಕ್ಷವಾಗಿದೆ. ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಪ್ರಾ*ಣ ಉಳಿಸಿಕೊಂಡಿದೆ. ಈ ಘಟನೆ ಮಣಿಪಾಲ, ಪೆರಂಪಳ್ಳಿ ಭಾಗದಲ್ಲಿ ಆತಂಕ ಸೃಷ್ಟಿಸಿದೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು, ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.

    Continue Reading

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    LATEST NEWS

    Trending