Connect with us

    DAKSHINA KANNADA

    ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ನಿಧನ

    Published

    on

    ನೆಲ್ಯಾಡಿ: ರಬ್ಬರ್ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತಪಟ್ಟ ಘಟನೆ ಕೊಣಾಲು ಗ್ರಾಮದಿಂದ ವರದಿಯಾಗಿದೆ.


    ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ.ಯಾನೆ ವಲ್ಸಮ್ಮ(52)ಮೃತಪಟ್ಟ ದುರ್ದೈವಿ
    ರೋಸಮ್ಮ ಅವರು ಮಾ.11ರಂದು ರಾತ್ರಿ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್‌ಗೆ ಹೋಗಿದ್ದ ವೇಳೆ ಅವರಿಗೆ ವಿಷಕಾರಿ ಹಾವೊಂದು ಕಡಿದಿದೆ. ಇದು ಗಮನಕ್ಕೆ ಬರುತ್ತಿದ್ದಂತೆ ರೋಸಮ್ಮರವರು ಅಲ್ಲಿಂದ ಪಕ್ಕದ ಮನೆಗೆ ಬಂದಿದ್ದು ಅಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ನೆಲ್ಯಾಡಿಯ ಆಸ್ಪತ್ರೆಯೊಂದಕ್ಕೆ ಕರೆತರಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ವರದಿಯಾಗಿದೆ.

    DAKSHINA KANNADA

    ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಮಾರಾಟವಾಗಿಲ್ಲ; ಅಧೀಕ್ಷಕರಿಂದ ಸ್ಪಷ್ಟನೆ

    Published

    on

    ಮಂಗಳೂರು: ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿರುವುದು. ಆಕೆಯ ಈ ಆರೋಪವು ಸಂಪೂರ್ಣ ನಿರಾಧಾರವಾಗಿದೆ ಎಂದು ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.

    ಆಗಸ್ಟ್‌ 18ರಂದು ಬೆಳಗ್ಗೆ 9.58ಕ್ಕೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭವ್ಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಮಗುವಿಗೆ ಒಂದು ಕಣ್ಣು ಗುಡ್ಡೆ ಇಲ್ಲದಿರುವುದನ್ನು ತಜ್ಞರು ಆಕೆಗೆ ತಿಳಿಸಿದ ಸಂದರ್ಭ ಆ ಶಿಶು ತನ್ನದಲ್ಲವೆಂದು ಆಕೆ ನಿರಾಕರಿಸಿದ್ದರು. ತನ್ನ ಮಗುವನ್ನು ಆಸ್ಪತ್ರೆಯ ಸಿಬ್ಬಂದಿ ಅದಲು ಬದಲು ಮಾಡಿದ್ದಾರೆ ಎಂದು ಸುಳ್ಳು ಆರೋಪವನ್ನು ಹೊರಿಸಿದ್ದರು. ಈ ವಿಚಾರದಲ್ಲಿ ಪೊಲೀಸ್ ತನಿಖೆ ನಡೆದು ನ್ಯಾಯಾಧೀಶರ ಉಪಸ್ಥಿತಿಯಲ್ಲಿ ಡಿಎನ್‌ಎ ಪರೀಕ್ಷೆ ಮಾಡುವ ಸಲುವಾಗಿ ಪ್ರಕ್ರಿಯೆಯನ್ನು ನಡೆಸಲಾಗಿದೆ.

    ಡಿಎನ್‌ಎ ಪರೀಕ್ಷೆಯ ವರದಿಯನ್ನು ನೇರವಾಗಿ ತನಿಖಾಧಿಕಾರಿಗಳ ಮೂಲಕ ನ್ಯಾಯಾಲಯಕ್ಕೆ ಸಂಬಂಧಿತರು ನೀಡಿದ್ದರು. ಈ ಮಧ್ಯೆ ಭವ್ಯಾ ಅವರ ಮಗು ದ.ಕ.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಯಲ್ಲಿದೆ. ಇತ್ತೀಚಿನ ಎರಡು ದಿನಗಳಲ್ಲಿ ಭವ್ಯಾ ತನ್ನ ಶಿಶುವನ್ನು ಸರಕಾರಿ ಲೇಡಿಗೋಶನ್ ಆಸ್ಪತ್ರೆಯ ಸಿಬ್ಬಂದಿ ಮಾರಾಟ ಮಾಡಿರುತ್ತಾರೆ ಎಂದು ಮಾನಹಾನಿಕರ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿತ್ತರಿಸುತ್ತಾ, ಸಮಾಜದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿ ಮಾಡುತ್ತಿದ್ದಾರೆ. ಅಲ್ಲದೆ ಹೆರಿಗೆ ಮತ್ತು ಸ್ತ್ರೀರೋಗ ಸಂಬಂಧ ವಿಚಾರದಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ಸರಕಾರಿ ಸ್ವಾಮ್ಯದ ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಕಳಂಕವನ್ನು ತರುವ ವಿಚಾರಗಳು ಖೇದಕರ. ಈ ಪ್ರಕರಣವು ನ್ಯಾಯಾಲಯದ ಪರಾಮರ್ಶೆಯ ಹಂತದಲ್ಲಿರುವ ಕಾರಣ ನ್ಯಾಯಾಲಯದ ತೀರ್ಪನ್ನು ನಿರೀಕ್ಷಿಸುತ್ತಿದ್ದೇವೆ ಎಂದು ಅಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Continue Reading

    BELTHANGADY

    ದಿಡುಪೆ: ಆ*ತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

    Published

    on

    ದಿಡುಪೆ: ಮಿತ್ತಬಾಗಿಲು ನೆಲ್ಲಿಗುಡ್ಡೆ ನಿವಾಸಿ ರಿಶಿ (17) ಸಾ*ವನ್ನಪ್ಪಿರುವ ಘಟನೆ 26 ರಂದು ಮಂಗಳವಾರ (ನ.26) ನಡೆದಿದೆ.

    ರಾಜೇಶ್ ಅರುಣಾ ದಂಪತಿ ಮಗಳಾದ ರಿಶಿ ಕಳೆದ ವಾರ 20 ರಂದು ಮನೆಯಲ್ಲಿ ಆ*ತ್ಮಹತ್ಯೆಗೆ ಯತ್ನಿಸಿದ್ದು ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.

    ಇದನ್ನೂ ಓದಿ : ರಜೆಗೆ ಎಂದು ಊರಿಗೆ ಬಂದಿದ್ದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ!

     

    ಚಿಕಿತ್ಸೆ ಫಲಕಾರಿಯಾಗದೆ ನ. 26 ರಂದು ನಿ*ಧನ ಹೊಂದಿದ್ದಾರೆ. ಆ*ತ್ಮಹತ್ಯೆಗೆ ಸೂಕ್ತ ಕಾರಣವೇನೆಂದು ತಿಳಿದು ಬಾರದ ಹಿನ್ನಲೆ, ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Continue Reading

    DAKSHINA KANNADA

    ಗೆಜ್ಜೆ ಹಸ್ತಾಂತರ, ಚೌಕಿ ಪೂಜೆಯೊಂದಿಗೆ ಕಟೀಲು ಯಕ್ಷಗಾನ ಮೇಳಗಳ ತಿರುಗಾಟ ಆರಂಭ

    Published

    on

    ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ, ಯಕ್ಷಗಾನ ಮಂಡಳಿಯ ಆರೂ ಮೇಳಗಳ ಸೇವೆಯಾಟ ದೇವಳದ ರಥಬೀದಿಯಲ್ಲಿ ನಡೆಯಿತು. ನಿನ್ನೆ (ನ.25) ಸಂಜೆ ದೇವಳದ ಗೋಪುರದಲ್ಲಿ ಆರೂ ಮೇಳಗಳ ಪ್ರಧಾನ ಭಾಗವತರಿಂದ ತಾಳಮದ್ದಳೆ ಮತ್ತು ಗೆಜ್ಜೆ ಹಸ್ತಾಂತರ ನಂತರ ಚೌಕಿ ಪೂಜೆ, ಸೇವೆಯಾಟ ‘ಪಾಂಡಾಶ್ವಮೇಧ’ ನಡೆಯಿತು.

    ಈ ಸಂದರ್ಭ ವೇದವ್ಯಾಸ ತಂತ್ರಿ, ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಲಕ್ಷೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ಅತ್ತೂರು ಬೈಲು ವೆಂಕಟರಾಜ ಉಡುಪ, ಹರಿ ಉಡುಪ ಮೂಡುಮನೆ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮಾಜಿ ಸಚಿವ ರಮಾನಾಥ ರೈ, ದೇವಸ್ಯ ಹಾಗೂ ಕೊಡೆತ್ತೂರುಗುತ್ತು ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ನಿತಿನ್ ಶೆಟ್ಟಿ ಕೊಡೆತ್ತೂರುಗುತ್ತು, ಗಣೇಶ್ ವಿ. ಶೆಟ್ಟಿ ಐಕಳ, ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ ಎಕ್ಕಾರು, ಪ್ರದೀಪ್ ಕುಮಾರ್ ಶೆಟ್ಟಿ ಎಕ್ಕಾರು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಮತ್ತಿತರ ಹಿರಿಯ ಗಣ್ಯರು ಉಪಸ್ಥಿತರಿದ್ದರು. ಈ ಬಾರಿಯೂ ಕಟೀಲು ಮೇಳದ ಯಕ್ಷಗಾನ ಬಯಲಾಟಗಳು ಕಾಲಮಿತಿಯಲ್ಲಿ ನಡೆಯಲಿವೆ.

    Continue Reading

    LATEST NEWS

    Trending