Connect with us

  LATEST NEWS

  ಸರ್ಕಾರ ರಚಿಸಲು ಕಸರತ್ತು..! ಇಂಡಿ ಒಕ್ಕೂಟ ಸೇರಲು ಟಿಡಿಪಿ, ಜೆಡಿಯು ನಾಯಕರಿಗೆ ಆಫರ್‌..!!

  Published

  on

  ದೆಹಲಿ/ಮಂಗಳೂರು: ಕೇಂದ್ರದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಯನ್ನು ಕಟ್ಟಿ ಹಾಕಲು ಇಂಡಿ ಒಕ್ಕೂಟ ಶತಯಾ ಗತಾಯ ಪ್ರಯತ್ನ ನಡೆಸಿದೆ. ಸರ್ಕಾರ ರಚಿಸಲು ಅಗತ್ಯವಾಗಿ ಬೇಕಾಗಿರುವ ಸಂಖ್ಯಾ ಬಲ ಬಿಜೆಪಿ ಬಳಿ ಇಲ್ಲವಾಗಿದ್ದು, ಸರ್ಕಾರ ರಚನೆಗೆ ಆಂಧ್ರದ ಟಿಡಿಪಿ ಹಾಗೂ ಬಿಹಾರದ ಜೆಡಿಯು ಸಹಕಾರ ಬೇಕಾಗಿದೆ. ಆದ್ರೆ ಈ ಎರಡೂ ಪಕ್ಷದ ನಾಯಕರಾದ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ಸೆಳೆಯಲು ಇಂಡಿ ಒಕ್ಕೂಟ ಇನ್ನಿಲ್ಲದ ಪ್ರಯತ್ನ ನಡೆಸಿದೆ.

  ಇಂದು ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಎನ್‌ಡಿಎ ಸಭೆ ನಡೆಸುತ್ತಿದ್ದು, ಇದಕ್ಕೆ ಈ ಇಬ್ಬರೂ ನಾಯಕರು ಹಾಜರಾಗುತ್ತಿದ್ದಾರೆ. ಆದ್ರೆ ಸಭೆಗೆ ಹಾಜರಾಗುತ್ತಿರುವ ನಾಯಕರಿಗೆ ಈ ಹಿಂದಿನ ಘಟನೆಗಳನ್ನು ನೆನಪಿಸುವ ಕೆಲಸವನ್ನು ಉದ್ಭವ್‌ ಠಾಕ್ರೆ ಮಾಡಿದ್ದಾರೆ. ತೆಲಂಗಾಣ ಪ್ರತ್ಯೇಕವಾದಾಗ ಆಂಧ್ರದ ರಾಜಧಾನಿ ಅಮರಾವತಿಯನ್ನು ಅಭಿವೃದ್ದಿ ಮಾಡಲು ಪ್ರಧಾನಿ ಮೋದಿಯ ಅಸಹಕಾರವನ್ನು ಚಂದ್ರಬಾಬು ನಾಯ್ಡು ಅವರಿಗೆ ನೆನಪಿಸಿದ್ದಾರೆ. ಇನ್ನು ಜಿಎಸ್‌ಟಿ ಪಾಲಿನಲ್ಲಿ ರಾಜ್ಯಕ್ಕೆ ಪ್ರಧಾನಿ ಮೋದಿ ಅನ್ಯಾಯ ಮಾಡಿದ್ದಾರೆ ಅನ್ನೋ ವಿಚಾರ ಗಮನ ಸೆಳೆದಿದ್ದಾರೆ. ಇನ್ನು ನಿತೀಶ್ ಕುಮಾರ್ ಅವರಿಗೂ ನಿಮ್ಮ ಜೊತೆ ಪ್ರಧಾನಿ ಮೋದಿ ಅವರ ಹಿಂದಿನ ವ್ಯವಹಾರ ಹೇಗಿತ್ತು ಅಂತ ನೋಡಿ ಎಂದು ಹೇಳಿದ್ದಾರೆ.

  ಇದನ್ನೂ ಓದಿ..; 18 ನೇ ಲೋಕಸಭೆಗೆ ಕ್ಷಣಗಣನೆ..! ಮೋದಿ ಮತ್ತೆ ಪ್ರಧಾನಿ ಆಗ್ತಾರ..?

  ನಾವೆಲ್ಲರೂ ಪ್ರಜಾಪ್ರಭುತ್ವದ ಉಳಿವಿಗಾಗಿ ಹಾಗೂ ಸರ್ವಾಧಿಕಾರದಿಂದ ದೇಶವನ್ನು ಕಾಪಾಡಲು ಒಗ್ಗಟ್ಟಾಗಿದ್ದೇವೆ. ನೀವೂ ನಮ್ಮ ಹೋರಾಟಕ್ಕೆ ಕೈ ಜೋಡಿಸಿ ಅಂತ ಉದ್ಭವ್ ಠಾಕ್ರೆ ಮನವಿ ಮಾಡಿಕೊಂಡಿದ್ದಾರೆ. ಆದ್ರೆ ಚಂದ್ರಬಾಬು ನಾಯ್ಡು ನಾನು ಎನ್‌ಡಿಎ ಜೊತೆಗಿರುವುದಾಗಿ ಹೇಳಿದ್ದು, ಸಭೆಗೆ ಹಾಜರಾಗಲು ದೆಹಲಿ ತಲುಪಿದ್ದಾರೆ. ಇನ್ನು ನಿತೀಶ್ ಕುಮಾರ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದ್ರೂ ದೆಹಲಿಯ ಸಭೆಗೆ ಹಾಜರಾಗಿದ್ದು, ತಮ್ಮ ನಡೆಯನ್ನು ನಿಗೂಢವಾಗಿರಿಸಿದ್ದಾರೆ.

  LATEST NEWS

  WATCH : ಕಾರು ಚಲಾಯಿಸುವಾಗ ರೀಲ್ಸ್ ಮಾಡಲು ಹೋಗಿ ಪ್ರಾ*ಣ ಕಳೆದುಕೊಂಡ ಯುವತಿ

  Published

  on

  ಮಂಗಳೂರು/ ಮಹಾರಾಷ್ಟ್ರ : ಇದು ಸೋಶಿಯಲ್ ಮೀಡಿಯಾ ಯುಗ. ಇಲ್ಲಿ ಎಲ್ಲವನ್ನೂ ಪ್ರದರ್ಶನಕ್ಕಾಗಿ, ಶೋಕಿಗಾಗಿ ಹಂಚಿಕೊಳ್ಳುವ ಪರಿಪಾಠ ಹೆಚ್ಚಾಗಿದೆ. ರೀಲ್ಸ್ ಮಾಡೋದು ಕಾಮನ್ ಆಗೋಗಿದೆ. ವೀವ್ಸ್ ಗಿಟ್ಟಿಸಿಕೊಳ್ಳಲು ಸರ್ಕಸ್ ಮಾಡೋರ ಸಂಖ್ಯೆ ಹೆಚ್ಚಾಗಿದೆ. ಈ ರೀಲ್ಸ್ ಹುಚ್ಚು ಪ್ರಾಣಕ್ಕೆ ಕುತ್ತಾಗಿರೋ ಉದಾಹರಣೆಗಳಿಗೇನೂ ಕಮ್ಮಿಯಿಲ್ಲ ಬಿಡಿ. ಇದೀಗ ಯುವತಿಯೊಬ್ಬಳು ಕಾರು ಚಲಾಯಿಸುವ ರೀಲ್ಸ್ ಮಾಡಲು ಹೋಗಿ ಪ್ರಾ*ಣ ಕಳೆದುಕೊಂಡ ಘಟನೆ ನಡೆದಿದೆ.


  ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದ ಸುಲಿಭಂಜನ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ಯುವತಿ ರಿವರ್ಸ್​ ಗೇರ್ ​ನಲ್ಲಿದ್ದಾಗ ಏಕಾಏಕಿ ಎಕ್ಸಲೇಟರ್​​ ಒತ್ತಿದ್ದಾಳೆ. ಪರಿಣಾಮ ಕಾರು ಕಂದಕಕ್ಕೆ ಬಿದ್ದಿದೆ. ಪರಿಣಾಮ ಗಂಭೀ*ರವಾಗಿ ಗಾಯಗೊಂಡ ಯುವತಿ ಇಹಲೋಕ ತ್ಯಜಿಸಿದ್ದಾಳೆ.

  ಶ್ವೇತಾ ಸುರ್ವಾಸೆ(23) ಮೃತ ಯುವತಿ. ಯುವತಿ ಆಕಸ್ಮಿಕವಾಗಿ ರಿವರ್ಸ್​ ಗೇರ್​ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್​ ಬ್ಯಾರಿಯರ್​ ಅನ್ನು ಮುರಿದು ಕಂದಕಕ್ಕೆ ಬಿದ್ದ ಪರಿಣಾಮ ಸಾ*ವನ್ನಪ್ಪಿದ್ದಾಳೆ. ಕಾರು ರಿವರ್ಸ್ ಗೇರ್ ನಲ್ಲಿದ್ದಾಗ ಯುವತಿ ಕ್ಲಚ್ ಬದಲು ಎಕ್ಸಲೇಟರ್ ಒತ್ತಿದ ಪರಿಣಾಮ ಕಾರು ನೇರವಾಗಿ ಕಂದಕಕ್ಕೆ ಬಿದ್ದಿದೆ.

  ಸ್ನೇಹಿತ ಶಿವರಾಜ್ ಮುಳೆ ಕಾರಿನಲ್ಲಿ ಸಂಭಾಜಿನಗರದಿಂದ ದತ್ ಮಂದಿರ ಪ್ರದೇಶಕ್ಕೆ ಬಂದಿದ್ದರು. ಶಿವರಾಜ್ ಇತ್ತೀಚೆಗಷ್ಟೇ ಶ್ವೇತಾಳಿಗೆ ಕಾರು ಓಡಿಸಲು ಕಲಿಸಿದ್ದ. ಶ್ವೇತಾಗೆ ಕಾರು ಓಡಿಸುವಾಗ ರೀಲ್ಸ್ ತಯಾರಿಸುವ ಆಸೆ ಇತ್ತು. ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್​ ಮಾಡುವಂತೆ ಹೇಳಿದ್ದಳು. ಇದ್ದಕ್ಕಿದ್ದಂತೆ ಕಾರು ರಿವರ್ಸ್ ಗೇರ್‌ನಲ್ಲಿ ಚಲಿಸಲು ಪ್ರಾರಂಭಿಸಿತು. ಈ ವೇಳೆ ಶ್ವೇತಾ ಎಕ್ಸಲೇಟರ್ ಒತ್ತಿದ್ದಾಳೆ. ಥಟ್ಟನೆ ಶ್ವೇತಾಳ ಕಾರು ವೇಗವಾಗಿ ಹಿಂದಕ್ಕೆ ಚಲಿಸತೊಡಗಿತು.

  ಇದನ್ನೂ ಓದಿ : ಪತ್ನಿಯನ್ನು ಗುಂಡಿಕ್ಕಿ ಕೊಂ*ದು ಆತ್ಮಹ*ತ್ಯೆ ಮಾಡಿಕೊಂಡ ಪತಿ!

  ಶಿವರಾಜ್​ ಕ್ಲಚ್ ಕ್ಲಚ್​ ಎಂದು ಎಷ್ಟೇ ಕೂಗಿದರೂ ಆಕೆಗೆ ಕೇಳಿಸಲೇ ಇಲ್ಲ, ಅಷ್ಟರಲ್ಲಾಗಲೇ ಕಾರು ಕೆಳಗೆ ಬಿದ್ದಿದೆ. ಕಾರು ರಿವರ್ಸ್​ ಗೇರ್​ನಲ್ಲಿದ್ದಾಗ ಅಕಸ್ಮಾತ್​ ಆಗಿ ಎಕ್ಸಲರೇಟರ್ ಒತ್ತಿದ್ದರಿಂದ ಈ ಅವಘ*ಡ ಸಂಭವಿಸಿದೆ.

  ರಕ್ಷಣಾ ಸಿಬ್ಬಂದಿ ಆ ಪ್ರದೇಶವನ್ನು ತಲುಪಲು ಗಂಟೆಗಳ ಸಮಯವನ್ನು ತೆಗೆದುಕೊಂಡಿತು, ತಕ್ಷಣ ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗದೆ, ಯುವತಿ ಜೀವಾಂತ್ಯವಾಗಿದೆ. ಘಟನೆಯ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸದ್ಯ ವೀಡಿಯೋ ವೈರಲ್ ಆಗಿದೆ.

  Continue Reading

  LATEST NEWS

  ಪತ್ನಿಯನ್ನು ಗುಂಡಿಕ್ಕಿ ಕೊಂ*ದು ಆತ್ಮಹ*ತ್ಯೆ ಮಾಡಿಕೊಂಡ ಪತಿ!

  Published

  on

  ಮಂಗಳೂರು/ಹಾಸನ : ಪತ್ನಿಯನ್ನು ಗುಂಡಿಕ್ಕಿ ಕೊಂ*ದು ಬಳಿಕ ಪತಿ ನೇ*ಣಿಗೆ ಶರಣಾಗಿರುವ ಘಟನೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ. ಪತಿ ಹರೀಶ್ (50,) ಪತ್ನಿ ಜಾಜಿ (45) ಮೃ*ತಪಟ್ಟವರು.
  ದಂಪತಿ ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ಜಗಳವಾಡುತ್ತಿದ್ದರು ಎನ್ನಲಾಗಿದೆ. ಸೋಮವಾರ (ಜೂ.17) ರಾತ್ರಿಯೂ ಮನೆಯಲ್ಲಿ ದಂಪತಿ ನಡುವೆ ಕಲಹವಾಗಿದೆ.

  ಈ ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಹರೀಶ್​​ ಪತ್ನಿ ಜಾಜಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಹ*ತ್ಯೆ ಮಾಡಿದ್ದಾನೆ. ಬಳಿಕ ಹರೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.

  ಇದನ್ನೂ ಓದಿ : ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್..!

  ಈ ಬಗ್ಗೆ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  Continue Reading

  LATEST NEWS

  ಸಂತ್ರಸ್ತೆ ಅಪಹರಣ ಪ್ರಕರಣ : ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು

  Published

  on

  ಬೆಂಗಳೂರು : ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಅಲ್ಲದೇ, ಅವರಿಗೆ ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.


  ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಭವಾನಿ ರೇವಣ್ಣ ಊಟ, ಬಟ್ಟೆ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್​ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿದೆ.

  ಪ್ರಕರಣದ ವಿವರ :

  ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀ*ಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು.

  ಈ ಬಗ್ಗೆ ಹೆಚ್.​ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೇ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು. ಈಗಾಗಲೇ ಹೆಚ್​ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸದ್ಯ ಹೆಚ್​ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ.

  ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರನ್ನೂ ಕೂಡ ಎಸ್​ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕೆಂದು ಎರಡೆರಡು ನೋಟೀಸ್​ ಕೊಡಲಾಗಿತ್ತು. ನೋಟೀಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು.

  ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್​​ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ.

  Continue Reading

  LATEST NEWS

  Trending