Wednesday, July 28, 2021

ರಾಜ್ಯ ಸಚಿವ ಸಂಪುಟ ವಿಸ್ತರಣೆ; ಅಂಗಾರರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ; ಅಂಗಾರರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ..!

ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು  ಮದ್ಯಾಹ್ನ 3.50ಕ್ಕೆ ರಾಜಭವನದಲ್ಲಿ ನಡೆಯಲಿದೆ.ಈಗಾಗಲೇ 7 ಜನರು ಹೊಸದಾಗಿ ಸಿಎಂ ಯಡಿಯೂರಪ್ಪ ಅವರ ಸಂಪುಟ ಸೇರುವುದು ಖಚಿತವಾಗಿದೆ. ಆದರೆ ಉಪ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಆರ್‌ಆರ್‌ ನಗರ ಶಾಸಕ ಮುನಿರತ್ನ ಅವರು ಸಂಪುಟ ಸೇರಲು ಇನ್ನೂ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ ಎಂಬ ಮಾಹಿತಿ ಬಿಜೆಪಿ ವಲಯದಿಂದಲೇ ಕೇಳಿ ಬರುತ್ತಿದೆ.ಹೀಗಾಗಿ 8ನೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಶಾಸಕ ಮುನಿರತ್ನ ಅವರು ಸಂಪುಟ ಸೇರುವ ಬಗ್ಗೆ ಹೈಕಮಾಂಡ್ ಇನ್ನೂ ಒಪ್ಪಿಗೆ ಕೊಟ್ಟಿಲ್ಲ ಎಂಬ ಮಾಹಿತಿಯಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಬೆಳಗ್ಗೆ 9.30ಕ್ಕೆ ಬೆಂಗಳೂರಿಗೆ ಬರಲಿದ್ದು, ಬಳಿಕ 10 ಗಂಟೆಗೆ ಮುನಿರತ್ನ ಅವರು ಸಂಪುಟ ಸೇರುವ ಬಗ್ಗೆ ಅಂತಿಮ ತೀರ್ಮಾನವಾಗಲಿದೆ ಎನ್ನಲಾಗಿದೆ.

ಉಳಿದಂತೆ 7 ಜನರು ಯಡಿಯೂರಪ್ಪ ಅವರ ಸಂಪುಟ ಸೇರುವುದು ಖಚಿತವಾಗಿದೆ. ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ,ಆರ್. ಶಂಕರ್,ಸಿ.ಪಿ. ಯೋಗೇಶ್ವರ್, ಹುಕ್ಕೇರಿ ಶಾಸಕರಾದ ಉಮೇಶ್ ಕತ್ತಿ, ಮಹದೇವಾಪುರ ಶಾಸಕ ಅರವಿಂದ ಲಿಂಬಾವಳಿ , ಬಿಳಗಿ ಶಾಸಕ ಮುರುಗೇಶ್ ‌ನಿರಾಣಿ, ಕರಾವಳಿಯ ಸುಳ್ಯ ಶಾಸಕ ಎಸ್. ಅಂಗಾರ ಅವರು ಇಂದು ಸಂಪುಟ ಸೇರುವುದು ಖಚಿತವಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...