DAKSHINA KANNADA
ಡೆಂಗಿ ನಿಯಂತ್ರಣಕ್ಕೆ ತಜ್ಞರ ಸಮಿತಿ: ಮೇಯರ್ ಸುಧೀರ್ ಶೆಟ್ಟಿ
Published
5 months agoon
By
NEWS DESK2ಮಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇರುವಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿಯೂ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅದನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಇಂದು ನಡೆದ ಮಹಾನಗರ ಪಾಲಿಕೆಯ ವಿಶೇಷ ಸಭೆಯಲ್ಲಿ ನಿರ್ಣಯಿಸಲಾಗಿದೆ.
ಈ ಸಮಿತಿಯಲ್ಲಿ ಪಾಲಿಕೆಯ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು, ಮಂಗಳೂರಿನ ಹಿರಿಯ ವೈದ್ಯ ಡಾ. ಶಾಂತಾರಾಮ ಬಾಳಿಗಾ, ಸ್ಥಳೀಯ ಸಂಘ ಸಂಸ್ಥೆಗಳು, ನಗರದ ಮೆಡಿಕಲ್ ಕಾಲೇಜುಗಳ ಆಡಳಿತದ ಪ್ರತಿನಿಧಿಗಳು ಇರುತ್ತಾರೆ ಎಂದು ಅಧ್ಯಕ್ಷತೆ ವಹಿಸಿದ್ದ ಮೇಯರ್ ಸುಧೀರ್ ಶೆಟ್ಟಿ ಅವರು ತಿಳಿಸಿದರು. ಇದಲ್ಲದೆ ಮಾಹಿತಿ ವಿನಿಮಯ ಮಾಡಿಕೊಳ್ಳಲು ಮಾಹಿತಿ ಕೇದ್ರ ಸ್ಥಾಪನೆ ಮತ್ತು ಟೋಲ್ ಫ್ರೀ ಫೋನ್ ವ್ಯವಸ್ಥೆ ಮಾಡಲಾಗುವುದು. ಐಯುಸಿಪಿ ಆ್ಯಪ್ ಮೂಲಕ ಪಾಲಿಕೆ ವ್ಯಾಪ್ತಿಯ ಯಾವುದೇ ಲ್ಯಾಬ್ ನಲ್ಲಿ ಡೆಂಗ್ಯೂ ಪರೀಕ್ಷೆ ಮಾಡಿಸಿದರೂ ಅದರ ವರದಿ ಲಭಿಸುವಂತೆ ವ್ಯವಸ್ಥೆ ಮಾಡಲಾಗುವುದು. 60 ಮಂದಿ ಎಂಪಿಡಬ್ಲ್ಯೂ ಕಾರ್ಯಕರ್ತರನ್ನು ನೇಮಕ ಮಾಡಿದ್ದು, ಅವರು ಮನೆಮನೆಗೆ ಹೋಗಿ ತಪಾಸಣೆ ಮಾಡಿ ಮಾಹಿತಿ ಕಲೆ ಹಾಕಲಿದ್ದಾರೆ ಎಂದರು.
ಮಲೇರಿಯಾ ಆ್ಯಪ್ ಕೂಡಾ ಮುಂದಿನ ದಿನಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮಾಡಲಾಗುವುದು ಎಂದು ತಿಳಿಸಿದರು. ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಮಹಾನಗರ ಪಾಲಿಕೆಯು ಯೋಜಿತವಾಗಿ, ವ್ಯವಸ್ಥಿತವಾಗಿ ಕಾರ್ಯತಂತ್ರಗಳನ್ನು ರೂಪಿಸಿ ಡೆಂಗ್ಯೂ ನಿಯಂತ್ರಣಕ್ಕೆ ತರ ಬೇಕು. ಪ್ರಮಾಣಿತ ಕಾರ್ಯಾಚರಣೆ ವಿಧಾನಗಳನ್ನು ಅನುಸರಿಸ ಬೇಕೆಂದರು. ನಿಯಂತ್ರಣ ಕ್ರಮಗಳ ಕುರಿತಂತೆ ಜನರಿಗೆ ಮಾಹಿತಿ ಇಲ್ಲ. ಅವರಿಗೆ ಮಾಹಿತಿ ನೀಡಲು ಕ್ರಮ ಕೈಗೊಳ್ಳ ಬೇಕೆಂದು ಕಾರ್ಪೊರೇಟರ್ ಸಂಗೀತಾ ಆರ್. ನಾಯಕ್ ಸಲಹೆ ಮಾಡಿದರು.
ಪ್ರತಿ ಪಕ್ಷ ಸದಸ್ಯ ಎ.ಸಿ. ವಿನಯರಾಜ್ ಅವರು ಈ ಹಿಂದೆ 2013- 14 ರಲ್ಲಿ ಮಲೇರಿಯಾ ವ್ಯಾಪಕವಾಗಿದ್ದ ಸಂದರ್ಭದಲ್ಲಿ ಮಲೇರಿಯಾ ಆ್ಯಪ್ ಮತ್ತು ಸಮಿತಿ ರಚಿಸಿ ಅದರ ಮೂಲಕ ಮಲೇರಿಯಾ ನಿಯಂತ್ರಣ ಮಾಡಿದ ಉದಾಹರಣೆ ಇದೆ. 7 ವರ್ಷಗಳ ಕಾಲ ಸಕ್ರಿಯವಾಗಿದ್ದ ಈ ಸಮಿತಿ ಬಳಿಕ ನಿಷ್ಕ್ರಿಯವಾಗಿದೆ. ಆದೇ ರೀತಿ ಇದೀಗ ಡೆಂಗ್ಯೂ ಸಮಿತಿ ರಚಿಸಿದರೆ ಡೆಂಗ್ಯೂ ನಿಯಂತ್ರಣಕ್ಕೆ ತರ ಬಹುದು ಎಂದು ಸಲಹೆ ಮಾಡಿದರು. ಡೆಂಗ್ಯೂ ಜ್ವರ ಸೋಂಕಿದ ಬಳಿಕ ಕ್ರಮ ಕೈಗೊಳ್ಳುವ ಬದಲು ಅದು ಸೋಂಕದಂತೆ ತಡೆಯುವುದು ಮುಖ್ಯ.
ಮಂಗಳೂರಿನಲ್ಲಿ 18 ರಿಂದ 36 ವರೆಗಿನ ಉಷ್ಣಾಂಶವಿದ್ದು, ಡೆಂಗ್ಯೂ ಹರಡುವ ಸೊಳ್ಳೆ ಉತ್ಪತ್ತಿಗೆ ಇದು ಅನುಕೂಲಕರ ವಾತಾವರಣ. ಹಾಗಾಗಿ ಸೊಳ್ಳೆ ಉತ್ಪನ್ನ ಆಗದಂತೆ ಮೂಲದಲ್ಲಿಯೇ ತಡೆಯುವ ಕೆಲಸ ಆಗ ಬೇಕೆಂದು ಡೆಂಗ್ಯೂ ನಿಯಂತ್ರಣ ನೋಡಲ್ ಅಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಹೇಳಿದರು.
ಶಾಸಕ ಡಿ. ವೇದವ್ಯಾಸ ಕಾಮತ್, ಪ್ರತಿಪಕ್ಷ ನಾಯಕ ಪ್ರವೀನ್ ಚಂದ್ರ ಆಳ್ವ, ಉಪ ಮೇಯರ್ ಸುನಿತಾ, ಆಯುಕ್ತ ಆನಂದ್ ಸಿ.ಎಲ್. ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS6 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ