Thursday, September 29, 2022

ಕೇರಳ ಕೋಯಿಕೋಡ್ ನಲ್ಲಿ  ಸ್ಪೋಟಕ ಜಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ ಗಳು ಪತ್ತೆ..!

ಕೇರಳ ಕೋಯಿಕೋಡ್ ನಲ್ಲಿ  ಸ್ಪೋಟಕ ಜಲೆಟಿನ್ ಕಡ್ಡಿ ಹಾಗೂ ಡಿಟೋನೇಟರ್ ಗಳು ಪತ್ತೆ..!

ಕೋಯಿಕ್ಕೋಡ್:  ಜಿಲೆಟಿನ್ ಕಡ್ಡಿ ಸ್ಪೋಟಕ ವಿಷಯ ಭಾರೀ ಸುದ್ದಿಯಲ್ಲಿರುವಾಲೇ ಕೇರಳದ ಕೋಯಿಕ್ಕೋಡ್ ರೈಲು ನಿಲ್ದಾಣದಲ್ಲಿ ಅಪಾರ ಪ್ರಮಾಣದ ಸ್ಪೋಟಕ ಪತ್ತೆಯಾಗಿದೆ.

ಚೆನ್ನೈ – ಮಂಗಳೂರು ಸೂಪರ್ ಎಕ್ಸ್ ಪ್ರೆಸ್ ರೈಲಿನ ಸೀಟಿನ ಅಡಿಯಲ್ಲಿ 117 ಜಿಲೆಟಿನ್ ಕಡ್ಡಿಗಳು ,350 ಡಿಟೋನೇಟರ್ ಗಳು ಪತ್ತೆಯಾಗಿದ್ದು ಅವುಗಳನ್ನು  ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂದರ್ಭ ಪೊಲೀಸರು ತಪಾಸಣೆ ನಡೆಸಿದ್ದು, ರೈಲಿನ ಡಿ 1 ಕಂಪಾರ್ಟ್ಮೆಂಟ್ ನಲ್ಲಿ ಸ್ಪೋಟಕಗಳು ಪತ್ತೆಯಾಗಿದ್ದು

ಸ್ಪೋಟಕ ಸಾಗಿಸುತ್ತಿದ್ದ ಚೆನ್ನೈ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿ,  ವಿಚಾರಣೆ ನಡೆಸುತ್ತಿದ್ದಾರೆ. ತಲಶ್ಶೇರಿಯಿಂದ ಮಹಿಳೆ ಚೆನ್ನೈಗೆ ಪ್ರಯಾಣಿಸುತ್ತಿದ್ದುದಾಗಿ ತಿಳಿದುಬಂದಿದೆ.

ಕರ್ನಾಟಕದಲ್ಲಿ ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರದ ಕ್ವಾರಿಗಳಲ್ಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡು ಕಾರ್ಮಿಕರು ಮೃತಪಟ್ಟಿರುವ ಪ್ರಕರಣಗಳು ವರದಿಯಾದ ಬಳಿಕ ಜಿಲೆಟಿನ್ ಕಡ್ಡಿಗಳ ಸಾಗಾಟದ ಬಗ್ಗೆ ಪೊಲೀಸರು ಎಚ್ಚರ ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...