Saturday, August 20, 2022

ಉಳ್ಳಾಲದ ಹಲ್ಲೆಯ ಸುಳ್ಳು ಕಥೆ ಕಟ್ಟಿದ ಹಿಂದಿನ ಷಡ್ಯಂತ್ರ ಬಯಲು ಮಾಡಿ : ಶಾಸಕ ಯು.ಟಿ.ಖಾದರ್

ಮಂಗಳೂರು :  ಉಳ್ಳಾಲದಲ್ಲಿ ಹಲ್ಲೆಯ ಸುಳ್ಳು ಕಥೆ ಕಟ್ಟಿದವನ ವಿರುದ್ಧ ಕ್ರಮ ಶ್ಲಾಘನೀಯ,ಆದರೆ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ ಈ ಘಟನೆಯನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಶಕ್ತಿಯನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲು ಸ್ಥಳೀಯ ಶಾಸಕ ಯು.ಟಿ.ಖಾದರ್ ಆಗ್ರಹ ಮಾಡಿದ್ದಾರೆ.

ಉಳ್ಳಾಲದಲ್ಲಿ ವ್ಯಕ್ತಿಯೋರ್ವ ತನ್ನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲು ಪ್ರಯತ್ನಿಸಲಾಗಿದೆ ಎಂದು ಸುಳ್ಳು ಕಥೆ ಕಟ್ಟಿ ಉಳ್ಳಾಲದ ಶಾಂತಿಯನ್ನು ಕೆಡಿಸಲು ಪ್ರಯತ್ನಿಸಿದ್ದು,ಆತನ ವಿರುದ್ಧ ಪೋಲೀಸ್ ಇಲಾಖೆ ಕ್ರಮ ಕೈಗೊಳ್ಳಲು ಮುಂದಾಗಿರುವುದು ಶ್ಲಾಘನೀಯ.

ಆದರೆ ಈ ಘಟನೆಯು ಉಳ್ಳಾಲದ ಸೌಹಾರ್ದತೆ,ಶಾಂತಿ ಕೆಡಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಇದರ ಹಿಂದೆ ಕೆಲಸ ಮಾಡುತ್ತಿರುವಂತೆ ಮೇಲ್ನೋಟಕ್ಕೆ ಕಂಡು ಬರುತ್ತಿದ್ದು,ಪೋಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ಕಾಣದ ಕೈಗಳನ್ನು ಕೂಡಾ ಪತ್ತೆ ಹಚ್ಚಿ ಕಾನೂನಿನ ಮುಂದೆ ತರಬೇಕೆಂದು ಮಾಜಿ ಸಚಿವ,ವಿಪಕ್ಷ ಉಪ ನಾಯಕ,ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...

ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್‌ಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್‌ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ...

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...