Friday, August 12, 2022

ಹೆಜಮಾಡಿ: ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ವೇಗದೂತ ಬಸ್‌

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.


ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತಂದಿದ್ದಾರೆ. ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಪಾಲಿಕೆಯ ಸದಸ್ಯ ಎ.ಸಿ ವಿನಯ್ ರಾಜ್‌ಗೆ ಪುತ್ರ ವಿಯೋಗ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್ ಅವರ ಪುತ್ರ ರಾಹುಲ್ ವಿನಯರಾಜ್ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.ಇಂದು ಸಂಜೆ ಮಂಗಳೂರಿನ ಜೆಪ್ಪುವಿನಲ್ಲಿರುವ ಸಂತ. ಆಂತೋನಿ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...

ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಷ್ಟ್ರಧ್ವಜ ಸಂಹಿತೆ ಪಾಲಿಸಲು ದ.ಕ ಡಿಸಿ ಸೂಚನೆ

ಮಂಗಳೂರು: ಆಗಸ್ಟ್ 13 ರಿಂದ 15ರ ವರೆಗೆ ದೇಶದ ಪ್ರತೀ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿ ಬಿಂಬಿಸುವ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸುವಂತೆ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಅಭಿಯಾನದ ಹಿನ್ನೆಲೆ ಸರ್ಕಾರಿ ಕಟ್ಟಡಗಳ...