Connect with us

    FILM

    ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

    Published

    on

    ಮಂಗಳೂರು/ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ ನ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಕೋರ್ಟ್‌ ಸೋಮವಾರ(ಸೆ.9) ಆದೇಶ ಹೊರಡಿಸಿದೆ.

    ನಟ ದರ್ಶನ್​ ಸೇರಿ ಎಲ್ಲಾ 17 ಆರೋಪಿಗಳ​ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಸೆ.12ರ ವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.

    ವೀಡಿಯೋ ಕಾನ್ಫ್ರೆನ್ಸ್ ಮೂಲಕ ವಿಚಾರಣೆ:

    ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಯಿತು. ಎ1 ಪವಿತ್ರಾ ಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಎ2 ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರೆ, ಉಳಿದ ಆರೋಪಿಗಳು ಮೈಸೂರು, ಬೆಳಗಾವಿಯ ಹಿಂಡಲಗಾ, ಶಿವಮೊಗ್ಗ ಮತ್ತು ತುಮಕೂರು ಜೈಲುಗಳಲ್ಲಿ ಇದ್ದಾರೆ.  ಹೀಗಾಗಿ ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯಿತು.

    ಇದನ್ನೂ ಓದಿ : ಯೂಟ್ಯೂಬ್ ನೋಡಿ ಆಪರೇಷನ್; ನಕಲಿ ವೈದ್ಯನ ಕೃ*ತ್ಯಕ್ಕೆ ಬಾಲಕ ಬ*ಲಿ

    ದರ್ಶನ್​ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಮತ್ತೆ ಕೋರ್ಟ್ ಗೆ ಇವರೆಲ್ಲರೂ ಹಾಜರಾಗಬೇಕಿದೆ.

    FILM

    ಸುಚಿತ್ರ ಥಿಯೇಟರ್ ನಲ್ಲಿ“ ಕಲ್ಜಿಗ“ ಸಿನಿಮಾ ಬಿಡುಗಡೆ

    Published

    on

    ಮಂಗಳೂರು: ಮಲ್ಟಿಫ್ಲೆಕ್ಸ್ ನಲ್ಲಿ ಬಿಡುಗಡೆಗೊಂಡು ಜನಮೆಚ್ಚುಗೆ ಪಡೆಯುತ್ತಿರುವ ”ಕಲ್ಜಿಗ“ ಸಿನಿಮಾ ನಗರದ ಸುಚಿತ್ರ ಥಿಯೇಟರ್ ನಲ್ಲಿ ಶುಕ್ರವಾರ ಮುಂಜಾನೆ ಬಿಡುಗಡೆಗೊಂಡಿತು.

    ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಬಹಳ ಸಮಯದ ಬಳಿಕ ಸುಚಿತ್ರ ಥಿಯೇಟರ್ ನಲ್ಲಿ ತುಳುನಾಡ ಕಲಾವಿದರ ಸಿನಿಮಾ ಬಿಡುಗಡೆಯಾಗುತ್ತಿದೆ. ಇನ್ನು ಮುಂದೆಯೂ ಇಲ್ಲಿ ತುಳು ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಮಾಲಕರು ಹೇಳಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದರು.

    ಡಾ.ದೇವದಾಸ್ ಕಾಪಿಕಾಡ್ ಮಾತಾಡಿ, “ತುಳು ಸಿನಿಮಾಗಳಿಗೆ ಸುಚಿತ್ರ ಥಿಯೇಟರ್ ನಲ್ಲಿ ಅವಕಾಶ ನೀಡುತ್ತಿಲ್ಲ ಎಂಬ ಬೇಸರ ಇತ್ತು. ಅದು ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಇಲ್ಲಿಗೆ ಬಂದು ಸಿನಿಮಾ ವೀಕ್ಷಿಸಿ ಕಲ್ಜಿಗ ಸಿನಿಮಾವನ್ನು ಗೆಲ್ಲಿಸಿ” ಎಂದರು.

    ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ಕಲ್ಜಿಗ ಸಿನಿಮಾ ನಾನು ನೋಡಿದ್ದೇನೆ. ಸಿನಿಮಾದಲ್ಲಿ ನಟಿಸಿರುವ ಎಲ್ಲರೂ ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು.

    ವೇದಿಕೆಯಲ್ಲಿ ನಟ ಅರ್ಜುನ್ ಕಾಪಿಕಾಡ್, ಥಿಯೇಟರ್ ಮಾಲಕ ಪ್ರಶಾಂತ್, ನಿರ್ಮಾಪಕ ಶರತ್ ಕುಮಾರ್ ಎ.ಕೆ. ,ಶರ್ಮಿಳಾ ಕಾಪಿಕಾಡ್, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ಜ್ಯೋತಿಷ್ ಶೆಟ್ಟಿ, ಭೋಜರಾಜ್ ವಾಮಂಜೂರ್, ಅನೂಪ್ ಸಾಗರ್, ಕಾವ್ಯ ಅರ್ಜುನ್ ಕಾಪಿಕಾಡ್, ಸದಾಶಿವ ಅಮೀನ್, ರಂಜನ್ ಬೋಳೂರು, ನಿರ್ದೇಶಕ ಸುಮನ್ ಸುವರ್ಣ, ಮಾಧವ ಶೆಟ್ಟಿ ಬಾಳ ಉದಯ ಆಚಾರ್ಯ, ಆನಂದ ಬಂಗೇರ, ಶನಿಲ್ ಗುರು, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು

    Continue Reading

    FILM

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    Published

    on

    ಬೆಂಗಳೂರು/ಮಂಗಳೂರು: ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನವಾಗಿದೆ. 21 ವರ್ಷ ಪ್ರಾಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿಯಲ್ಲಿ ಕೊರಿಯೋಗ್ರಾಫರ್ ಬಂಧನವಾಗಿದೆ.

    ಇತ್ತೀಚಿಗೆ ಖ್ಯಾತ ಕೊರಿಯೋಗ್ರಾಫರ್‌ ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಸ್ಟರ್ ವಿರುದ್ಧ 21 ವರ್ಷದ ಸಹಾಯಕ ಡ್ಯಾನ್ಸರ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಿಂದಿ, ತೆಲುಗು, ಕನ್ನಡ, ತಮಿಳು ಸಿನೆಮಾಗಳಿಗೆ ಮಾತ್ರವಲ್ಲದೆ ಸ್ಟಾರ್ ನಟರಿಗೆ ಕೊರಿಯೋಗ್ರಫಿ ಮಾಡಿರುವ ಕೋರಿಯೋಗ್ರಾಫರ್ ಇದೀಗ ಬಂಧನಕ್ಕೊಳಗಾಗಿದ್ದಾರೆ.

    ಏನಿದು ಘಟನೆ?
    ಯುವತಿಯ ನೀಡಿದ ದೂರಿನ ಹಿನ್ನೆಲೆಯಲ್ಲಿ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ ಜೀರೋ ಎಫ್‌ಐಆರ್ ದಾಖಲಾಗಿತ್ತು. ಆ ಬಳಿಕ ನೃತ್ಯ ನಿರ್ದೇಶಕ ತಲೆ ಮರೆಸಿಕೊಂಡಿದ್ದರು. ಮೂರು ದಿನಗಳಿಂದ ಹುಡುಕಾಡುತ್ತಿದ್ದ ಹೈದರಾಬಾದ್‌ನ ಪೊಲೀಸರು ನಾಲ್ಕು ತಂಡಗಳಾಗಿ ಶೋಧ ನಡೆಸಿದ್ದರು. ಇಂದು (ಸೆಪ್ಟೆಂಬರ್ 19) ಬೆಳಗ್ಗೆ ಗೋವಾದಲ್ಲಿ ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದು ಕಡೆ ಜಾನಿ ಮಾಸ್ಟರ್ ವಿರುದ್ಧ ಪೋಕ್ಸೊ ಪ್ರಕರಣ ಕೂಡ ಇವರ ಮೇಲೆ ದಾಖಲಾಗಿದೆ. ಮಹಿಳಾ ನೃತ್ಯ ನಿರ್ದೇಶಕಿಯೊಬ್ಬರ ಮೇಲೆ ಚಿತ್ರೀಕರಣದ ವೇಳೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿ ದೂರು ನೀಡಿದ್ದರು. ಅಲ್ಲದೆ ಔಟ್ ಡೋರ್ ಶೂಟಿಂಗ್ ವೇಳೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಆರೋಪ ಮಾಡಿದ್ದಾರೆ.

    ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ

    ಈ ದೂರಿನ ಬೆನ್ನಲ್ಲೇ ಪೊಲೀಸರು ಜಾನಿ ಮಾಸ್ಟರ್ ವಿರುದ್ಧ ಸೆಕ್ಷನ್ 376, 506, 323 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನರಸಿಂಗಿ ಠಾಣೆಯ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ಝೀರೊ ಎಫ್‌ಐಆರ್ ಕೂಡ ದಾಖಲಾಗಿತ್ತು. ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಯುವತಿಯನ್ನು ವಿಚಾರಣೆ ಮಾಡಿದ್ದರು. ಆಕೆಯ ಮನೆಯಲ್ಲಿಯೇ ಸುಮಾರು ಮೂರು ಗಂಟೆಗಳಿಗೂ ಅಧಿಕ ಕಾಲ ವಿಚಾರಣೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದರು.

    Continue Reading

    FILM

    ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಗೆ ಕೊ*ಲೆ ಬೆದರಿಕೆ ಹಾಕಿದ ಮಹಿಳೆ

    Published

    on

    ಮಂಗಳೂರು/ಮುಂಬೈ : ನಟ ಸಲ್ಮಾನ್‌ ಖಾನ್‌ ತಂದೆ, ಹಿರಿಯ ಸಾಹಿತಿ ಸಲೀಂ ಖಾನ್ ಅವರಿಗೆ ವಾಕಿಂಗ್ ವೇಳೆ ಮಹಿಳೆಯೊಬ್ಬರು ಬೆದರಿ*ಕೆ ಹಾಕಿದ್ದಾರೆ ಎನ್ನಲಾಗಿದೆ.  ಮುಂಜಾನೆಯ ವಾಕಿಂಗ್ ಸಮಯದಲ್ಲಿ ಮಹಿಳೆಯೊಬ್ಬಳು ಡಾನ್‌ ಲಾರೆನ್ಸ್‌ ಬಿಷ್ಣೋಯ್‌ ಹೆಸರಿನಲ್ಲಿ ಬೆದರಿ*ಕೆ ಹಾಕಿದ್ದಾಗಿ ವರದಿಯಾಗಿದೆ. ಈ ಬಗ್ಗೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವಾಕಿಂಗ್ ವೇಳೆ ಹತ್ತಿರಕ್ಕೆ ಬಂದಿದ್ದ ಮಹಿಳೆ ಸಲೀಂ ಖಾನ್‌ ಅವರಿಗೆ, ಸರಿಯಾಗಿ ನಡೆದುಕೊಳ್ಳಿ, ಇಲ್ಲದೆ ಇದ್ದರೆ ಸಲ್ಮಾನ್‌ ಖಾನ್‌ ಅವರಿಗೆ ಕೊ*ಲೆ ಬೆದರಿ*ಕೆ ಹಾಕಿರುವ ಡಾನ್‌ ಲಾರೆನ್ಸ್‌ಗೆ ಕರೆ ಮಾಡುವುದಾಗಿ ಹೇಳಿದ್ದಾಗಿ ದೂರು ನೀಡಲಾಗಿದೆ. ಮಹಿಳೆ ಯಾರು? ಎಲ್ಲಿಂದ ಬಂದವಳು ? ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ಸಲ್ಮಾನ್‌ ಖಾನ್‌ ನಗರದಿಂದ ಹೊರಟ ಕೆಲವೇ ಗಂಟೆಯಲ್ಲಿ ಈ ಘಟನೆ ನಡೆದಿದೆ

    ಎಪ್ರಿಲ್‌ ತಿಂಗಳಲ್ಲಿ ಸಲ್ಮಾನ್ ಖಾನ್‌ ಅವರ ಬಾಂದ್ರದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ಹೊರಗೆ ಗುಂಡಿನ ದಾ*ಳಿ ನಡೆಸಲಾಗಿತ್ತು. ಇದು ಲಾರೆನ್ಸ್ ಬಿಷ್ಣೋಯ್‌ ಸಹೋದರ ಅನ್ಮೋಲ್ ಬಿಷ್ಣೋಯ್‌ ಮಾಡಿರುವುದಾಗಿ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದ. ಸಲ್ಮಾನ್ ಖಾನ್‌ ವಿಚಾರಣೆಯ ವೇಳೆಯಲ್ಲಿ ತನ್ನ ಕುಟುಂಬಕ್ಕೆ ಲಾರೆನ್ಸ್‌ ಬಿಷ್ಣೋಯ್‌ ಗ್ಯಾಂಗ್‌ನಿಂದ ಬೆದರಿ*ಕೆ ಇದೆ ಎಂದು ಹೇಳಿಕೆ ನೀಡಿದ್ದರು.

    ಇದನ್ನೂ ಓದಿ : ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಅತ್ಯಾಚಾ*ರ ಕೇಸ್ ದಾಖಲು

    ಇದೀಗ ಸಲ್ಮಾನ್ ಖಾನ್‌ ತಂದೆ ಸಲೀಂ ಖಾನ್‌ ಅವರಿಗೆ ಬೆದರಿಕೆ ಹಾಕಿರುವ ಹಿನ್ನಲೆಯಲ್ಲಿ ಸಲ್ಮಾನ್ ಖಾನ್ ಕುಟುಂಬಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಮಹಿಳೆ ಯಾರು ಎಂಬ ಬಗ್ಗೆ ತನಿಖೆ ಆರಂಭಿಸಿದ್ದಾರೆ.

    Continue Reading

    LATEST NEWS

    Trending