LATEST NEWS
ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸದ ಆಮಿಷ ನೀಡಿ ಹಣ ಸುಲಿಗೆ : ಕುಖ್ಯಾತ ಆಂಧ್ರ ಗ್ಯಾಂಗ್ ಸೆರೆ..!
ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೊರರಾಜ್ಯದವರನ್ನು ನಗರಕ್ಕೆ ಕರೆಸಿಕೊಂಡು ಹೆದರಿಸಿ ಹಣ ಪಡೆದು ವಂಚಿಸುತ್ತಿದ್ದ ಆಂಧ್ರದ ಗ್ಯಾಂಗ್‌ನ್ನು ಬೆಂಗಳೂರು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಹೊರರಾಜ್ಯದವರನ್ನು ನಗರಕ್ಕೆ ಕರೆಸಿಕೊಂಡು ಹೆದರಿಸಿ ಹಣ ಪಡೆದು ವಂಚಿಸುತ್ತಿದ್ದ ಆಂಧ್ರದ ಗ್ಯಾಂಗ್‌ನ್ನು ಬೆಂಗಳೂರು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಗ್ಯಾಂಗ್ ನಲ್ಲಿದ್ದ ಆಂದ್ರಪ್ರದೇಶದ ವಿಜಯವಾಡ ಕೃಷ್ಣಜಿಲ್ಲೆಯ ಮಲ್ಲು ಶಿವಶಂಕರ್ ರೆಡ್ಡಿ ಅಲಿಯಾಸ್ ಗೋಪಿಚಂದ್ (26) ಗುಂಜ ಮಂಗರಾವ್(35) ಇಬ್ರಾಹಿಂ ಪಟ್ಟಣಂನ ಶೇಖ್ ಶಹಬಾಷಿ(30) ಎನ್ ಟಿ ಆರ್ ಜಿಲ್ಲೆಯ ಮಹೇಶ್( 21) ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳು ಹಣ ವರ್ಗಾವಣೆ ಮಾಡಿಕೊಳ್ಳಲು ಬಳಸಿಕೊಂಡಿದ್ದ ಹಲವು ಬ್ಯಾಂಕ್ ಖಾತೆಗಳಲ್ಲಿನ 5,95,585 ರೂ ಹಣವನ್ನು ಫ್ರೀಜ್ ಮಾಡಲಾಗಿದೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ.ಅನೂಪ್ ಶೆಟ್ಟಿ ತಿಳಿಸಿದ್ದಾರೆ.
ಬಂಧಿತರ ಗ್ಯಾಂಗ್ ಸಾಮಾಜಿಕ ಜಾಲತಾಣದ ಮೂಲಕ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಜಾಹಿರಾತು ನೀಡುತ್ತಿತ್ತು ಇದನ್ನು ನಂಬಿದ್ದ ಆಂಧ್ರಪ್ರದೇಶದ ಪ್ರದೀಪ್ ಅಸಾಮ್ವರ್‌ಗೆ ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ ಫೇಸ್ ಬುಕ್ ಮುಖಾಂತರ ಪರಿಚಯವಾಗಿದ್ದನು. ನಂತರ ಖಾಸಗಿ ಕಂಪನಿಯಲ್ಲಿ ಕೆಲಸ ಕೊಡಿಸುತ್ತೇನೆಂದು ನಂಬಿಸಿ, ಆಂದ್ರದಿಂದ ಬೆಂಗಳೂರಿಗೆ ಬರುವಂತೆ ಹೇಳಿದ್ದನು.
ಅದರಂತೆ ಪ್ರದೀಪ್ ಅಸಾಮ್ವರ್ ಕಳೆದ ಜ. 11 ರಂದು ಬೆಳಗ್ಗೆ 05.30 ಕ್ಕೆ ಹೆಬ್ಬಾಳ ಬಳಿ ಬಂದು ಇಳಿದಿದ್ದನು.
ಅಲ್ಲಿಂದ ಪ್ರದೀಪ್ ಅಸಾಮ್ವರ್ ನನ್ನು ಸ್ವಿಫ್ಟ್ ಕಾರಿನಲ್ಲಿ ಬಂದು ನಾಲ್ವರು ಕರೆದುಕೊಂಡು ಹೊರಟಿದ್ದು, ಈ ವೇಳೆ ಪ್ರದೀಪ್ ಅಸಾಮ್ವರ್ ಕಾರಿನ ಫೋಟೊ ತೆಗೆದುಕೊಂಡಿದ್ದನು. ಪ್ರದೀಪ್‌ನನ್ನು ಕಾರಿನಲ್ಲಿ ಕೂರಿಸಿಕೊಂಡಿದ್ದ ಗ್ಯಾಂಗ್ ಮ್ಯಾನೇಜರ್ ಭೇಟಿ ಮಾಡಿಸುತ್ತೇವೆ ಎಂದಿದ್ದರು.
ಕಾರಿನಲ್ಲಿ ಹೋಗುವಾಗ ಪ್ರದೀಪ್, ಶಿವಶಂಕರ್ ರೆಡ್ಡಿ ಜೊತೆಗೆ ಬಂದಿದ್ದವರ ಹೆಸರು ಕೇಳಿದ್ದಾನೆ. ಆಗ ಆರೋಪಿ ಶಿವಶಂಕರ್ ರೆಡ್ಡಿ ಹೆಸರು ಹೇಳದಿದ್ದಾಗ ಆತನಿಗೆ ಅನುಮಾನ ಬಂದಿದೆ.
ಬಳಿಕ ಗ್ಯಾಂಗ್ ಡಾಕ್ಯುಮೆಂಟ್ ಚಾರ್ಜ್ ಎಂದು 30 ಸಾವಿರ ಹಣ ಹಾಕಲು ಪ್ರದೀಪ್‌ಗೆ ಹೇಳಿದೆ. ಗೂಗಲ್ ಪೇ ವರ್ಕ್ ಆಗದಿದ್ದಾಗ ಮೊಬೈಲ್ ಕಸಿದು ಪರಿಶೀಲನೆ ಮಾಡಿದ್ದಾರೆ. ಆಗ ಕಾರಿನ ಫೋಟೊ ಲೈವ್ ಲೊಕೇಶನ್ ನೋಡಿ ಪ್ರದೀಪ್‌ಗೆ ಥಳಿಸಿದ್ದಾರೆ.
ನಂತರ ನಿನಗೆ ಕೆಲಸ ಸಿಕ್ಕಿದೆ ಎಂದು ಸ್ನೇಹಿತರ ಬಳಿ ಹಣ ಹಾಕಿಸಿಕೋ ಎಂದು ಪ್ರದೀಪ್‌ಗೆ ಬೆದರಿಸಿದ್ದಾರೆ. ಹೀಗೆ ಆರೋಪಿಗಳು ಒಟ್ಟು 6 ಲಕ್ಷ ಹಣ ಅಕೌಂಟ್ ಮೂಲಕ ಪಾವತಿ ಮಾಡಿಸಿಕೊಂಡಿದ್ದಾರೆ.
ಅಲ್ಲದೆ ಕ್ರಿಕೆಟ್ ಬೆಟ್ಟಿಂಗ್ ಆಪ್‌ನಲ್ಲೂ ಹಣ ಹಾಕಿಸಿಕೊಂಡಿದ್ದಾರೆ. ನಂತರ ಯಲಹಂಕ ಸಮೀದ ಡೆಕಾತ್ ಲ್ಯಾನ್ ಬಳಿ ಬಿಟ್ಟು ಪರಾರಿಯಾಗಿದ್ದಾರೆ.
ಬಳಿಕ ಪ್ರದೀಪ್ ಘಟನೆ ಸಂಬಂಧ ಕೊಡಿಗೆಹಳ್ಳಿ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಡಿಗೆಹಳ್ಳಿ ಪೊಲೀಸರ ವಿಚಾರಣೆ ವೇಳೆ ಭಯಾನಕ ವಿಚಾರ ಹೊರಬಂದಿದ್ದು ಆರೋಪಿ ಮಲ್ಲು ಅಲಿಯಾಸ್ ಗೋಪಿಚಂದ್ ಕೂಡ ಟೆಕ್ಕಿಯಾಗಿದ್ದಾನೆ.
ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ನಕಲಿ ದಾಖಲಾತಿ ನೀಡಿ ಕೆಲಸಕ್ಕೆ ಸೇರಿಕೊಂಡಿದ್ದನು. ವಿಷಯ ಗೊತ್ತಾದ ಬಳಿಕ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು.
FILM
ಬದುಕಿನ ಕೊನೆಯವರೆಗೂ ನೋವು, ತಾತ್ಸಾರ, ಅಪವಾದಗಳೇ ಹೆಚ್ಚು-ಸ್ವರ್ಗದಲ್ಲಾದರೂ ನೆಮ್ಮದಿ ಸಿಗಲಿ ಅಮ್ಮಾ…
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ. ಇಂದು ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ ಲೀಲಾವತಿ ಕಲಿತದ್ದು ಕೇವಲ ಎರಡನೇ ತರಗತಿವರೆಗು ಮಾತ್ರ. 9ನೇ ವಯಸ್ಸಿಗೆ ತಂದೆ ಹಾಗೂ ತಾಯಿಯನ್ನು ಕಳೆದುಕೊಳ್ಳುತ್ತಾರೆ..
ಅವರನ್ನು ಕ್ರೈಸ್ತ ಕುಟುಂಬವೊಂದು ಆರೈಕೆ ಮಾಡಿದ್ದರು.
ತುತ್ತು ಅನ್ನಕ್ಕಾಗಿ ಬೇರೆಯವರ ಮನೆಯಲ್ಲಿ ಮುಸುರೆ ತಿಕ್ಕಿ, ಚಾಕರಿ ಮಾಡಿ ಆಕೆ ತನ್ನ ಬಾಲ್ಯವನ್ನು ಕಳೆದರು.
ತುಳು ಚಿತ್ರರಂಗದಲ್ಲಿ ಅಂದಿಗೆ ತುಳು ಸಿನಿಮಾಗಳು ಆರಂಭ ಆದವು. ಹೊಟ್ಟೆ ಹಸಿವನ್ನು ನೀಗಿಸಲು ಚಂದದ ಹೆಣ್ಣು ಮಗಳೋರ್ವಳು ಸಿನಿಮಾದಲ್ಲಿ ಅವಕಾಶ ಕೊಡುವಂತೆ ಅಂಗಲಾಚುತ್ತಾಳೆ. ಅವಳೇ ಮುದ್ದು ಮುದ್ದು ಲೀಲಾ ಕಿರಣ್ ಅಲಿಯಾಸ್ ಇಂದಿನ ಲೆಜೆಂಡೆರಿ ಆಕ್ಟ್ರೆಸ್ ಲೀಲಾವತಿ ಅಮ್ಮ. ಇದರ ಪರಿಣಾಮವಾಗಿ ‘ಸಾವಿರೊಡೊರ್ತಿ ಸಾವಿತ್ರಿ, ದಾರೆದ ಬುಡೆದಿ, ಬಿಸತ್ತಿ ಬಾಬು ಮೊದಲಾದ ತುಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಬಣ್ಣದ ಬದುಕಿ ಕಟ್ಟಿಕೊಂಡು ಅವಕಾಶ ಪಡೆದು ಜೀವನ ಸಾಗಿಸಬಹುದು ಎಂಬ ಕನಸಿನೊಂದಿಗೆ ಬೆಂಗಳೂರಿಗೆ ಹೋದ ಲೀಲಮ್ಮ ಅಲ್ಲಿ ಬರಬಾರದ ಕಷ್ಟಗಳನ್ನು ಅನುಭವಿಸಿದ್ರು.
ಆಗ ಆಸರೆಯಾಗಿದ್ದೇ ಮಹಾನ್ ಕಲಾವಿದ ಆಗಿದ್ದ ಮಹಾಲಿಂಗ ಭಾಗವತರ್ ಅವರ ಪ್ರಸಿದ್ಧ ‘ಶ್ರೀ ಸಾಹಿತ್ಯ ಸಾಮ್ರಾಜ್ಯ ಡ್ರಾಮ ಕಂಪೆನಿ. ಯಾವ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ಅವರು ಅಭಿನಯ ಮಾಡುತ್ತಿದ್ದರು ಲೀಲಾವತಿ ಅಮ್ಮ. ಸುಬ್ಬಯ್ಯ ನಾಯ್ಡು ಅವರ ಪರಿಚಯ ಆಗಿ ‘ಭಕ್ತ ಪ್ರಹ್ಲಾದ’ ಸಿನಿಮಾದಲ್ಲಿ ಒಂದು ಪಾತ್ರವನ್ನು ಗಿಟ್ಟಿಸಿಕೊಂಡರು.
ಅದೇ ಸಂದರ್ಭದಲ್ಲಿ ಮಹಾಲಿಂಗ ಭಾಗವತರ್ ಅವರನ್ನು ಮದುವೆ ಆದ ಲೀಲಾವತಿ ಆ ಮದುವೆಯನ್ನು ರಹಸ್ಯವಾಗಿ ಇಟ್ಟರು. ಆಗ ಹೆಚ್ಚಿನ ನಟಿಯರು ತಮ್ಮ ಬೇಡಿಕೆ ಉಳಿಸಿಕೊಳ್ಳಲು ಮದುವೆಯನ್ನು ಬಹಿರಂಗ ಮಾಡುತ್ತಿರಲಿಲ್ಲ. ಮುಂದೆ ಲೀಲಾವತಿ ಜೀವನದಲ್ಲಿ ಮಹಾಲಿಂಗ ಭಾಗವತರ್ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದರು.
ಡಾ. ರಾಜ್ ಕುಮಾರ್ ಹಾಗೂ ಲೀಲಾವತಿ ಅವರದ್ದು ಸೂಪರ್ ಡೂಪರ್ ಕಾಂಬಿನೇಷನ್. ಇವರಿಬ್ಬರ ಅದ್ಭುತ ಅಭಿನಯವನ್ನು ಕಂಡು ರಾಜ್ – ಲೀಲಾವತಿ ಅವರನ್ನು ಗಂಡ ಹೆಂಡತಿ ಎಂದೇ ಕರೆಯಲು ಆರಂಭಿಸಿದರು.
ಆದ್ರೆ ಲೀಲಾವತಿ ಅಮ್ಮ ರಾಜ್ ಅವರನ್ನು ಭಕ್ತಿಯಿಂದ ‘ದೊಡ್ಡೋರು’ ಎಂದೇ ಭಕ್ತಿಯಿಂದ ಕರೆಯುತ್ತಿದ್ದರು. ಡಾ. ರಾಜ್ ಅವರಿಗೆ ಮಾತ್ರ ಲೀಲಾವತಿ ಅಂದರೆ ಬಹಳ ಪ್ರೀತಿ..ಅವರೇ ಲೀಲಾವತಿಯವರಿಗರ ಬರೆದ ಪತ್ರಗಳು ವೈರಲ್ ಆಗಿದ್ದವು.ಇದೀಗ ಲೀಲಾವತಿ ಅಮ್ಮ ನಮ್ಮನೆಲ್ಲಾ ಬಿಟ್ಟು ಬಾರದ ಊರಿಗೆ ತೆರಳಿದ್ದಾರೆ. ಇಂದು ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ಬದುಕಿದ್ದಾಗ ಅಷ್ಟೇನೂ ಸುಖ ಕಾಣದ ಲೀಲಾವತಿ ಅಮ್ಮನವರಿಗೆ ಸ್ವರ್ಗದಲ್ಲಾದರೂ ಸುಖ ನೆಮ್ಮದಿ ಸಿಗಲಿ.
DAKSHINA KANNADA
ಡಿ. 14ರಿಂದ 17 ರವರೆಗೆ “ಆಳ್ವಾಸ್ ವಿರಾಸತ್”
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.14ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದು,ಈ ಬಾರಿಯ ವಿರಾಸತ್ ನಲ್ಲಿ ಬೆನ್ನಿದಯಾಲ್, ವಿಜಯಪ್ರಕಾಶ್, ಶ್ರೇಯಾ ಘೋಷಾಲ್ ಸ್ವರ ಮಾಧುರ್ಯ, ಪ್ರತಿನಿತ್ಯ 13 ಗಂಟೆಗಳ ಕಾಲ 750 ಮಳಿಗೆಗಳಲ್ಲಿ ಪ್ರದರ್ಶನ ಹಾಗೂ ಮಾರಾಟಗಳು ನಡೆಯಲಿವೆ. ಭವ್ಯ ಸಾಂಸ್ಕೃತಿಕ ಮೆರವಣಿಗೆ ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪದರ್ಶನ ಮೇಳ, ಚಿತ್ರಕಲಾ ಮೇಳಗಳು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಸ್ಕೌಟ್ಸ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
BELTHANGADY
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS7 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA7 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!