DAKSHINA KANNADA
ಮೂಡುಬಿದಿರೆಯಲ್ಲಿ ಒಂಟಿ ಮಹಿಳೆಯ ಸುಲಿಗೆ ಪ್ರಕರಣ: ಮೂವರ ಸೆರೆ
ಮಂಗಳೂರು : ಮೂಡುಬಿದಿರೆಯಲ್ಲಿ ನಡೆದು ಸುಲಿಗೆ ಪ್ರಕರಣವನ್ನು ಮಂಗಳೂರು ಪೊಲೀಸರು ಭೇದಿಸಿದ್ದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇಲ್ಲಿನ ಬಡಗಮಿಜಾರು ಗ್ರಾಮದ ಅಶ್ವಥಪುರ ಬೆರಿಂಜಗುಡ್ಡದ ಮನೆಯೊಂದರಲ್ಲಿ ಒಂಟಿಯಾಗಿದ್ದ ಮಹಿಳೆಯನ್ನು ಬೆದರಿಸಿ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು.
ಬಡಗಮಿಜಾರು ಗ್ರಾಮದ ದಿನೇಶ್ ಪೂಜಾರಿ (36), ಬೆಳ್ತಂಗಡಿ ತಾಲೂಕಿನ ಉಳಗುಡ್ಡ ಹೊಸಮನೆಯ ಸುಕೇಶ್ ಪೂಜಾರಿ (32), ಮೂಡುಬಿದಿರೆ ತಾಲೂಕಿನ ಮೂಡುಮಾರ್ನಾಡು ಗ್ರಾಮದ ಹರೀಶ್ ಪೂಜಾರಿ (34) ಬಂಧಿತ ಆರೋಪಿಗಳಾಗಿದ್ದಾರೆ.
ಕೃತ್ಯಕ್ಕೆ ಬಳಸಿದ್ದ 1 ತಲವಾರು, 2 ಸ್ಕೂಟರ್, 3 ಮೊಬೈಲ್ ಫೋನ್, 2 ಮಂಕಿಕ್ಯಾಪ್ ಹಾಗೂ ಸುಲಿಗೆಗೈದ 62 ಗ್ರಾಂ ಚಿನ್ನಾಭರಣವನ್ನೂ ವಶಪಡಿಸಲಾಗಿದ್ದು ಒಟ್ಟು ಮೌಲ್ಯ 4.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಅಶ್ವಥಪುರ ಬೆರಿಂಜಗುಡ್ಡದ ಕಮಲಾ ಎಂಬಾಕೆಯ ಮನೆಗೆ ಅಕ್ರಮವಾಗಿ ನುಗ್ಗಿ ಕುತ್ತಿಗೆ ಹಿಸುಕಿ ತಲವಾರು ತೋರಿಸಿ ಜೀವ ಬೆದರಿಕೆ ಹಾಕಿ ಚಿನ್ನದ ಕರಿಮಣಿ ಸರ, ಚಿನ್ನದ ಬಳೆಯನ್ನು ಸುಲಿಗೆಗೈದಿದ್ದರು. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಆರೋಪಿಗಳು ಗುರುತು ಮರೆಮಾಚುವ ಸಲುವಾಗಿ ಮಂಕಿಕ್ಯಾಪ್ ಹಾಗೂ ಹ್ಯಾಂಡ್ ಗ್ಲೌಸ್ ಧರಿಸಿದ್ದರು. ಆದಾಗ್ಯೂ ಪೊಲೀಸ್ ಆಯುಕ್ತ ಶಶಿಕುಮಾರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಚಿನ್ನಾಭರಣ ಮಾರಾಟ ಮಾಡಲು ಮಂಗಳೂರಿಗೆ ಬರುತ್ತಿದ್ದಾಗ ನಗರದ ಕುಲಶೇಖರ ಚರ್ಚ್‌ಗೇಟ್ ಬಳಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಒಂಟಿ ಮಹಿಳೆ ಕಮಲಾ ಅವರಿಗೆ ಸಂಬಂಧಿಕರಾರೂ ಸಮೀಪದಲ್ಲಿ ಇಲ್ಲದಿರುವುದನ್ನು ಗಮನಿಸಿದ ಆರೋಪಿಗಳು ಸುಲಿಗೆ ಕೃತ್ಯ ನಡೆಸಿದ್ದರು.
ಆರೋಪಿಗಳಾದ ದಿನೇಶ್ ಪೂಜಾರಿ, ಸುಕೇಶ್ ಪೂಜಾರಿ, ಹರೀಶ್ ಪೂಜಾರಿಯ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಅಡಕೆ ಕಳವು ಪ್ರಕರಣ, ಸುಕೇಶ್ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪೋಕ್ಸೊ ಮತ್ತು ಮಣಿಪಾಲ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
DAKSHINA KANNADA
ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!
ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.
ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.
ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.
ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!
ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.
ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.
ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.
ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.
DAKSHINA KANNADA
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ
ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.
ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.
ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.
- bangalore7 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA4 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA6 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ