Sunday, November 27, 2022

ಕರಾವಳಿಯ ದೈವಗಳ ಹೆಸರಲ್ಲಿ ಹಣ ಸುಲಿಗೆ; ತುಳುನಾಡ ದೈವಾರಾಧಕರಿಂದ ಎಚ್ಚರಿಕೆಯ ಸಂದೇಶ ..!

ಬೆಂಗಳೂರು, ಮೈಸೂರು ಭಾಗದಲ್ಲಿ ದೈವದ ಕಟ್ಟೆಗಳನ್ನು ಸ್ಥಾಪಿಸಿ ಗೂಗಲ್ ಪೇ ಮಾಡಿ, ಫೋನ್ ಪೇ ಮಾಡಿ ಎನ್ನುತ್ತಿದ್ದಾರೆ. ಇದು ಕರಾವಳಿಯ ದೈವಾರಾಧಕರನ್ನು ಕೆರಳಿಸಿದ್ದು ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು: ತುಳುನಾಡಿಗೆ ಸೀಮಿತವಾಗಿದ್ದ ದೈವರಾಧನೆ ಇದೀಗ ರಾಜ್ಯದ ಇತರ ಕಡೆಗಳಲ್ಲೂ ಆರಂಗೊಂಡಿದ್ದು ಬೇರೆ ಕಡೆಗಳಲ್ಲಿ ಕೊರಗಜ್ಜ, ಗುಳಿಗನ ದೈವಸ್ಥಾನಗಳು ತಲೆ ಎತ್ತಿವೆ.

ಇಲ್ಲಿ ದೈವ ಆರಾಧನೆಗಳ ಹೆಸರಲ್ಲಿ ಜನರಿಂದ ಸುಲಿಗೆ ಮಾಡುತ್ತಿರೋದು ಬಯಲಾಗಿದೆ.

ಬೆಂಗಳೂರು, ಮೈಸೂರು ಭಾಗದಲ್ಲಿ ದೈವದ ಕಟ್ಟೆಗಳನ್ನು ಸ್ಥಾಪಿಸಿ ಗೂಗಲ್ ಪೇ ಮಾಡಿ, ಫೋನ್ ಪೇ ಮಾಡಿ ಎನ್ನುತ್ತಿದ್ದಾರೆ. ಇದು ಕರಾವಳಿಯ ದೈವಾರಾಧಕರನ್ನು ಕೆರಳಿಸಿದ್ದು ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.

ದುಡ್ಡು ಸಿಗುತ್ತದೆ ಎಂಬ ಕಾರಣಕ್ಕಾಗಿ ಅಲ್ಲಿ ಹೋಗಿ ನೇಮ ಕಟ್ಟುವವರಿಗೆ, ತಾಸೆ ಬ್ಯಾಂಡ್ ಸೆಟ್‌ನವರಿಗೆ, ಮಧ್ಯಸ್ಥ, ಮುಕ್ಕಾಲ್ದಿ ಹಾಗೂ ಯಾರೆಲ್ಲ ಇಲ್ಲಿ ತೊಡಗಿಸಿಕೊಳ್ಳುತ್ತಾರೆಯೋ ಅವರೆಲ್ಲರಿಗೂ ಮುಂದೆ ನಮ್ಮ ಊರಿನ ಯಾವುದೇ ದೈವಸ್ಥಾನ, ಮನೆಗಳಲ್ಲಿ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟವಾದ ಎಚ್ಚರಿಕೆ ನೀಡಿದ್ದಾರೆ.

ಇದೇ ಮಾದರಿಯಲ್ಲಿ ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದ ಸಂದೇಶದ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ವೈರಲ್ ಆಗಿದೆ. .

LEAVE A REPLY

Please enter your comment!
Please enter your name here

Hot Topics

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...