Sunday, July 3, 2022

ತಾಲಿಬಾನ್ ಸುದ್ದಿ – ಪೋಸ್ಟ್‌ ಗಳಿಗೆ ನಿಷೇಧ ಹೇರಿದ ಫೇಸ್ ಬುಕ್..!

ಲಂಡನ್: ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್ ಬುಕ್ ತಾಲಿಬಾನ್ ಗೆ  ನಿಷೇಧ ಹೇರಿದೆ. ಈಗಾಗಲೇ ತಾಲಿಬಾನ್ ಬೆಂಬಲಿಗರ ಖಾತೆಗಳು, ಬರಹಗಳು, ಪೋಸ್ಟ್ ಗಳನ್ನು ಅಳಿಸಿ ಹಾಕಿರುವುದಾಗಿ ಫೇಸ್ ಬುಕ್ ತಿಳಿಸಿದೆ.

ಅಫ್ಘಾನಿಸ್ತಾನ ವಿದ್ಯಮಾನಗಳನ್ನು ಪರಿಶೀಲಿಸಲು ಪ್ರತ್ಯೇಕ ತಂಡವನ್ನು ಫೇಸ್ ಬುಕ್ ನಿಯೋಜಿಸಿದ್ದು ತಾಲಿಬಾನ್ ಬೆಂಬಲಿಗರು ನಾಯಕರಿಂದ ಹಾಗೂ ತಾಲಿಬಾನ್ ಕುರಿತು ಫೇಸ್ ಬುಕ್ ನಲ್ಲಿ ಶೇರ್ ಮಾಡಲ್ಪಡುವ ಪೋಸ್ಟ್ ಗಳ ಮೇಲೆ ನಿಗಾ ಇರಿಸಲಿದೆ.

ಹಲವು ವರ್ಷಗಳಿಂದ ತಾಲಿಬಾನ್ ಸಂಘಟನೆ ಜನರಲ್ಲಿ ಭಯ ಬಿತ್ತಲು ಸಾಮಾಜಿಕ ಜಾಲತಾಣಗಳ ಬಳಕೆ ಮಾಡಿಕೊಂಡಿತ್ತು. ಫೇಸ್ ಬುಕ್ ಸಂಸ್ಥೆಯ ಅಧೀನದಲ್ಲಿರುವ ವಾಟ್ಸ್ ಆಪ್ ಮತ್ತು ಇನ್ಸ್ಟಾಗ್ರಾಂಗೂ ಈ ನಿಯಮಾವಳಿ ಅನ್ವಯವಾಗಲಿದೆ.

ಅಂತಾರಾಷ್ಟ್ರೀಯ ಸಮುದಾಯದ ಅಭಿಪ್ರಾಯಗಳ ಅನ್ವಯ ತಾನು ಕಾರ್ಯಾಚರಿಸುವುದಾಗಿ ಫೇಸ್ ಬುಕ್ ಹೇಳಿಕೊಂಡಿದೆ. ಅಂದರೆ ತಾಲಿಬಾನ್ ಸರ್ಕಾರದ ಮಾತಿಗೆ ತಾನು ಕಿವಿಗೊಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದಂತಾಗಿದೆ.

LEAVE A REPLY

Please enter your comment!
Please enter your name here

Hot Topics

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...

ಮಹಾ ಪಾಲಿಟಿಕ್ಸ್‌: ಮಹಾರಾಷ್ಟ್ರದ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ಆಯ್ಕೆ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ನರ್ವೇಕರ್‌ ಆಯ್ಕೆಯಾಗಿದ್ದಾರೆ.ಬಿಜೆಪಿಯ ಅಭ್ಯರ್ಥಿ ರಾಹುಲ್‌ 164 ಮತಗಳನ್ನು ಪಡೆದು ಸ್ಪೀಕರ್‌ ಆಗಿ ಆಯ್ಕೆಯಾದರು.ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಶಿವಸೇನಾದ ಶಾಸಕ ರಾಜನ್‌...

ಮಂಗಳೂರು: ಎಕ್ಕೂರಿನಲ್ಲಿ ಲೈಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಮೂವರಿಗೆ ಗಾಯ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ಮಧ್ಯರಾತ್ರಿ...