Home ಪ್ರಮುಖ ಸುದ್ದಿ ಮನೇಲಿ ಕೂತು ಏನು ಕೆಲ್ಸಾ ಇಲ್ಲಾ ನೋಡಿ.. ಅದಿಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹೀಗೊಂದು...

ಮನೇಲಿ ಕೂತು ಏನು ಕೆಲ್ಸಾ ಇಲ್ಲಾ ನೋಡಿ.. ಅದಿಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹೀಗೊಂದು ಸುಳ್ಳು ಸುದ್ದಿ

ಮನೇಲಿ ಕೂತು ಏನು ಕೆಲ್ಸಾ ಇಲ್ಲಾ ನೋಡಿ.. ಅದಿಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹೀಗೊಂದು ಸುಳ್ಳು ಸುದ್ದಿ

ಬೆಳ್ತಂಗಡಿ: ರಾಜ್ಯದಾದ್ಯಂತ ಕೊರೊನಾ ವೈರಸ್ ಸೋಂಕು ಮಿತಿ ಮೀರಿ ಹರಡುತ್ತಿದ್ದು, ಇಡೀ ದೇಶದ ಲಾಕ್ ಡೌನ್‌ನಿಂದ ಜನಸಾಮಾನ್ಯರು ಕಂಗೆಟ್ಟಿದ್ದಾರೆ.

ಆದರೆ, ಮನೆಲೀ ಸುಮ್ಮನೇ ಕುಳಿತಿರಲಾರದೇ ಮೊಬೈಲ್ ಕೈಗೆತ್ತಿಕೊಂಡು ಬೇಕಾಬಿಟ್ಟಿ ಸುಳ್ಳು ಸುದ್ದಿಗಳನ್ನು ವಾಟ್ಸಾಪ್ ಮೂಲಕ ಕಿಡಿಗೇಡಿಗಳು ಹರಿಬಿಡುತ್ತಿದ್ದಾರೆ.

ಮೊನ್ನೆ-ಮೊನ್ನೆ ಕಾಪು ಮಾರಿಯಮ್ಮ ದೇವರ ಆದೇಶ ಅಂತ ಸುಳ್ಳು-ಪುಳ್ಳೆ ಸುದ್ದಿ ಹಬ್ಬಿದ ಬೆನ್ನಲ್ಲೇ ಇದೀಗ ಜಿಲ್ಲೆಯ ಖ್ಯಾತ ಕ್ಷೇತ್ರ ಧರ್ಮಸ್ಥಳದ ಸರದಿ.

ಹೌದು.. ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಗೆ ಬೆಳಗಿರುವ ನಂದಾದೀಪ ಆರಿ ಹೋಗಿದೆ ಎಂಬ ವದಂತಿ ಎಲ್ಲೆಲ್ಲೂ ವ್ಯಾಪಕವಾಗಿ ಹರಡಿದೆ.

ನಂದಾದೀಪ ನಂದಿದರೆ ರಾಜ್ಯಕ್ಕೆ ಕೇಡುಗಾಲ. ಹೀಗಾಗಿ ಎಲ್ಲರೂ ತಮ್ಮ ಮನೆಯ ಮುಂಭಾಗ ಮುಂಜಾನೆ ಸೂರ್ಯ ಉದಯಿಸುವ ಮೊದಲೇ ದೀಪ ಹಚ್ಚಿ ಇಡಬೇಕು ಎಂಬ ಸುಳ್ಳು ಸುದ್ದಿ ಒಬ್ಬರಿಂದ ಒಬ್ಬರಿಗೆ ಹಬ್ಬಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ವದಂತಿ ಹಬ್ಬಿರುವುದು ಗಮನಕ್ಕೆ ಬಂದಿದ್ದು, ದೀಪ ನಂದಿದ ಸುದ್ದಿ ಸುಳ್ಳು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಸ್ಪಷ್ಟನೆ ನೀಡಿದ್ದರೂ, ವದಂತಿ ನಿಲ್ಲುತ್ತಿಲ್ಲ. ಕೆಲವರು ವಾಟ್ಸ್ಯಾಪ್ ಮತ್ತು ಜಾಲತಾಣಗಳಲ್ಲಿ ಶೇರ್ ಮಾಡುತ್ತಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಸ್ಪಷ್ಟನೆ:

ಇದೀಗ ಈ ವದಂತಿ ಬಗ್ಗೆ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದೇವಳವೇ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.

ನಂದಾದೀಪ ನಂದಿರುವ ಬಗ್ಗೆ ಸುಳ್ಳು ಸುದ್ದಿ. ಇಂತಹ ಸನ್ನಿವೇಶ ಉದ್ಬವಿಸಿಲ್ಲ. ರಾತ್ರಿ 8 ಗಂಟೆಗೆ ದೇವಸ್ಥಾನದ ಬಾಗಿಲು ಹಾಕಿದ್ರೆ ಬೆಳಗ್ಗೆಯೇ ತೆರೆಯುವುದು.

ಈ ನಡುವೆ ದೇವಾಲಯದ ಒಳಹೊಕ್ಕು ನೋಡಿದವರ್ಯಾರು ಅಂತ ದೇವಸ್ಥಾನದ ಮುಖ್ಯಸ್ಥರು ಸ್ಪಷ್ಟನೆ ನೀಡಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...