Connect with us

    BANTWAL

    ಬಂಟ್ವಾಳ: ರಾಜಕೀಯದ ಗಣ್ಯ ವ್ಯಕ್ತಿಗಳ ಬಗ್ಗೆ ಸುಳ್ಳು ಸುದ್ದಿ ಪೋಸ್ಟ್-ಯುವಕ ಅರೆಸ್ಟ್

    Published

    on

    ಬಂಟ್ವಾಳ: ರಾಜಕೀಯ ರಂಗದಲ್ಲಿ ಇರುವ ಕೆಲವು ಪ್ರಭಾವಿ ಗಣ್ಯ ವ್ಯಕ್ತಿಗಳ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿ ಸುದ್ದಿ ಹಬ್ಬಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

    ಪದ್ಮನಾಭ ಸಾಮಾಂತ ಬಂಧಿತ ಯುವಕ.

    ರಾಜಕೀಯ ಗಣ್ಯ ವ್ಯಕ್ತಿಗಳ ಹೆಸರು ಬಳಕೆ ಮಾಡಿದ್ದಲ್ಲದೆ ವೈಯಕ್ತಿಕ ಹಾಗೂ ಇತರ ರಾಜಕೀಯ ದುರುದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಪೋಟೋ ಸಹಿತ ಸುಳ್ಳು ಬರವಣಿಗೆ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಬಂಟ್ವಾಳ ತಹಶಿಲ್ದಾರ್ ಸ್ಮಿತಾರಾಮು ಅವರು ವಾಮದಪದವು ಪದ್ಮನಾಭ ಸಾಮಂತ ಎಂಬಾತನಿಗೆ ನ್ಯಾಯಾಂಗ ಬಂಧನದ ಅದೇಶ ನೀಡಿದ್ದಾರೆ.

    ಈತನ ಮೇಲೆ 5 ಕ್ಕೂ ಅಧಿಕ ಪ್ರಕರಣಗಳಿದ್ದು, ಮುಂಜಾಗೃತಾ ಕ್ರಮವಾಗಿ ಅಹಿತಕರ ಘಟನೆಗೆ ಈತನ ಕೃತ್ಯ ಕಾರಣವಾಗದಂತೆ ತಡೆಯಲು ಯಾವುದೇ ಪೋಸ್ಟ್ ಗಳನ್ನು ಹಾಕದಂತೆ ಗರಿಷ್ಠ ಮೊತ್ತದ ಮುಚ್ಚಳಿಕೆ ಬರೆಸುವಂತೆ ಕಳೆದ ಫೆಬ್ರವರಿ ತಿಂಗಳಲಿನಲ್ಲಿ ಪುಂಜಾಲಕಟ್ಟೆ ಎಸ್. ಐ.ಸುತೇಶ್ ತಹಶಿಲ್ದಾರ್ ಅವರಿಗೆ ಪಿ.ಎ.ಅರ್.ನೀಡಿದ್ದರು.

    ಆದರೆ ಆ ಬಳಿಕವೂ ಈತ ಇದೇ ಚಾಳಿಯನ್ನು ಮುಂದುವರಿಸಿದ್ದಲ್ಲದೆ, ತಹಶಿಲ್ದಾರ್ ಕೋರ್ಟುನಲ್ಲಿ 107 ಒಂದರ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಈತ ಮತ್ತೊಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ ಎಂಬ ದೂರಿನ ಹಿನ್ನೆಲೆಯಲ್ಲಿ ಈತನಿಗೆ ಮುಚ್ಚಳಿಕೆ ಕೇಳಿದ್ದರು.

    ಆದರೆ ಈತ ಮುಚ್ಚಳಿಕೆ ನೀಡಲು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ತಹಶಿಲ್ದಾರ್ ಅವರು ಈತನನ್ನು ಇಂದಿನಿಂದ 5 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡುವಂತೆ ಅದೇಶ ಹೊರಡಿಸಿದ್ದಾರೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending