ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈಯವರು ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿ,
ತನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ತಾಯಿ ಕಲ್ಲುರ್ಟಿಯು ಕಠಿಣ ಶಿಕ್ಷೆ ನೀಡುವಂತೆ ಪ್ರಾರ್ಥನೆ ಸಲ್ಲಿಸಿದರು.
ನಾಲ್ಕು ವರ್ಷಗಳ ಹಿಂದೆ ಬಂಟ್ವಾಳದಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಿಸಿ,
ನಿಜವಾದ ಹಂತಕರನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಮತ್ತೆ ನನ್ನ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಸುಳ್ಳು ಆರೋಪ.
ಈ ಹಿನ್ನೆಲೆಯಲ್ಲಿ ಬಿ.ರಮಾನಾಥ ರೈಯವರು ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ಮಾಡಿ ಕ್ಷೇತ್ರದ ಅಮ್ಮನವರಲ್ಲಿ ಹರಿಕೆ ಮಾಡಿ ಬಂಟ್ವಾಳದಲ್ಲಿ ನಡೆದ ಹತ್ಯೆಯಲ್ಲಿ ನನ್ನ ಕೈವಾಡ ಇದ್ದರೆ ನನಗೆ ಶಿಕ್ಷೆಯಾಗಬೇಕು.
ಇಲ್ಲದಿದ್ದರೆ ಯಾರು ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಾರೆ ಅವರಿಗೆ ಕ್ಷೇತ್ರದ ತಾಯಿ ಕಠಿಣ ಶಿಕ್ಷೆ ನೀಡುವಂತೆ ಪ್ರಾರ್ಥಿಸಿದರು.
ಈ ಹಿಂದೆ ಇದೇ ಪ್ರಕರಣದಲ್ಲಿ ರೈ ಕಾನತ್ತೂರು ಕ್ಷೇತ್ರದ ಮೊರೆ ಹೋಗಿದ್ದರು.