ಇತ್ತೀಚೆಗೆ ಕಿರುತೆರೆಯಲ್ಲಿ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದೆ. ನಟಿ ವೈಭವಿ ಉಪಾಧ್ಯಾಯ ನಿಧನರಾದ ಬೆನ್ನಲೆಯಲ್ಲೇ ಮತ್ತೋರ್ವ ಕಿರುತೆರೆ ನಟ ನಿತೇಶ್ ಪಾಂಡೆ ಮೃತಪಟ್ಟಿದ್ದಾರೆ.
ಮುಂಬೈ: ಇತ್ತೀಚೆಗೆ ಕಿರುತೆರೆಯಲ್ಲಿ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದೆ. ನಟಿ ವೈಭವಿ ಉಪಾಧ್ಯಾಯ ನಿಧನರಾದ ಬೆನ್ನಲೆಯಲ್ಲೇ ಮತ್ತೋರ್ವ ಕಿರುತೆರೆ ನಟ ನಿತೇಶ್ ಪಾಂಡೆ ಮೃತಪಟ್ಟಿದ್ದಾರೆ.
ಕಿರುತೆರೆಯಲ್ಲಿ ಜನಪ್ರಿಯತೆ ಪಡೆದಿರುವ ನಿತೇಶ್ ಪಾಂಡೆ (51) ಮೇ. 24 ರಂದು ಹೃದಯಘಾತದಿಂದ ನಿಧನ ಹೊಂದಿದರು.
ಉತ್ತರಾಖಂಡದ ಅಲ್ಮೋರಾ ಕುಮಾನ್ ಮೂಲದವರಾದ ಅವರು ಕಳೆದ 25 ವರ್ಷದಿಂದ ಕಿರುತೆರೆಯಲ್ಲಿ ಕೆಲಸ ಮಾಡಿಕೊಂಡಿದ್ದರು.
1990 ರಲ್ಲಿ ರಂಗಭೂಮಿಯಲ್ಲಿ ನಟಿಸುವ ಮೂಲಕ ನಟನಾ ಲೋಕಕ್ಕೆ ಕಾಲಿಟ್ಟವರು.
1995 ರಲ್ಲಿ ಬಂದ ʼತೇಜಸ್ʼ ಸಿನಿಮಾದಲ್ಲಿ ಪತ್ತೇದಾರಿ ಪಾತ್ರವೊಂದರಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.
ಬಳಿಕ ಕಿರುತೆರೆಯ ಧಾರಾವಾಹಿಗಳಲ್ಲೂ ನಟಿಸಿದರು.
ʼಮಂಜಿಲೀನ್ ಅಪ್ನಿ ಅಪ್ನಿʼ, ʼಅಸ್ತಿತ್ವ ಏಕ್ ಪ್ರೇಮ್ ಕಹಾನಿʼ, ʼಸಾಯಾ, ಜುಸ್ತಜೂʼ ದುರ್ಗೇಶ್ ನಂದಿನಿ ಮುಂತಾದ ಸೀರಿಯಲ್ ಗಳಲ್ಲಿ ನಟಿಸಿದ್ದಾರೆ.
ಇವರ ಅಗಲಿಕೆಗೆ ಸೆಲೆಬ್ರಿಟಿಗಳು ಸಂತಾಪ ಸೂಚಿದ್ದಾರೆ.