Connect with us

LATEST NEWS

ಖ್ಯಾತ ಹಾಸ್ಯ ನಟಿ ಭಾರತಿ ಸಿಂಗನ್ನೂ ಬೆಂಬಿಡದ ಡ್ರಗ್ ಮಾಫಿಯಾ: ಪತಿ ಹರ್ಷ್ ಲಿಂಬಾಚಿಯನ್ನೂ ಬಂಧಿಸಿದ ಎನ್ ಸಿ ಬಿ

Published

on

   ಡ್ರಗ್ ಮಾಫಿಯಾ: ಖ್ಯಾತ ಹಾಸ್ಯ ನಟಿ ಭಾರತಿ ಸಿಂಗ್ ಪತಿ  ಹರ್ಷ್ ಲಿಂಬಾಚಿಯಾ ಬಂಧನ 

ಮುಂಬೈ:   ಅನೇಕ ಖ್ಯಾತನಾಮರ ಹೆಸರು ಡ್ರಗ್ಸ್ ಮಾಫಿಯಾದಲ್ಲಿ ಥಳುಕು ಹಾಕಿಕೊಂಡಿದ್ದು, ಜೈಲು  ಸೇರಿ್ದ್ದಾರೆ. ಇದೀಗ    ಹಿಂದಿ ಭಾಷೆಯ ಜನಪ್ರಿಯ ಹಾಸ್ಯ ಕಲಾವಿದೆ ಭಾರತಿ ಸಿಂಗ್‌ ಹಾಗೂ ಅವರ ಪತಿ ಹರ್ಷ ಲಿಂಬಾಚಿಯಾ ಅವರನ್ನು ಮಾದಕದ್ರವ್ಯ ನಿಯಂತ್ರಣಾ ಘಟಕ (ಎನ್‌ಸಿಬಿ) ಶನಿವಾರ ಬಂಧಿಸಿದೆ.15 ಗಂಟೆಗಳ ಕಾಲ ತನಿಖೆ ಮಾಡಿದ ನಂತರದಲ್ಲಿ ಹರ್ಷ್ ಲಿಂಬಾಚಿಯಾ ಅವರನ್ನು ಬಂಧಿಸಲಾಗಿದೆ. ಶೋಧ ಕಾರ್ಯಾಚರಣೆ ವೇಳೆ ಕಲಾವಿದೆಯ ಮುಂಬಯಿ ನಿವಾಸದಲ್ಲಿ ಅಕ್ರಮ ಮಾದಕ ದ್ರವ್ಯ ಪತ್ತೆಯಾದ ಹಿನ್ನೆಲೆ ಈ ಬಂಧನ ನಡೆದಿದೆ.

ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣದ ನಂತರ ಬಾಲಿವುಡ್‌ನಲ್ಲಿ ಬೀಸಿದ ಮಾದಕ ದ್ರವ್ಯ ಬಿರುಗಾಳಿಯು ಇದುವರೆಗೆ ಅನೇಕ ನಟ-ನಟಿಯರ ಬೆವರಿಳಿಸಿದೆ.

ಭಾರತಿ ಅವರಿಗೆ ಮಾದಕ ದ್ರವ್ಯ ಜಾಲದ ಸಂಪರ್ಕ ಇದೆ ಎನ್ನುವ ಸುಳಿವು ಲಭಿಸಿದ ಹಿನ್ನೆಲೆಯಲ್ಲಿ ಎನ್‌ಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ ಅವರ ನಿವಾಸವನ್ನು ಜಾಲಾಡಿದೆ. ಈ ವೇಳೆ ದೊರೆತ ಮಾದಕ ದ್ರವ್ಯಕ್ಕೆ ಸಂಬಂಧಿಸಿದಂತೆ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು, ನಂತರ ಭಾರತಿಯನ್ನು ಬಂಧಿಸಿದರು. ಇನ್ನು ಡ್ರಗ್ ಸೇವನೆ ಮಾಡಿದ್ದಾಗಿ ತನಿಖೆ ವೇಳೆ ಈ ದಂಪತಿ ಒಪ್ಪಿಕೊಂಡಿದ್ದಾರೆ..

ಭಾರತಿ ನಿವಾಸದಲ್ಲಿ 86.5 ಗ್ರಾಂ ಗಾಂಜಾ ಪತ್ತೆಯಾಗಿದೆ. ಅದನ್ನು ಸಂಗ್ರಹಿಸಿದ ಮೂಲ ಯಾವುದು ಎನ್ನುವುದರ ಕುರಿತು ಅಧಿಕಾರಿಗಳು ಜಾಲಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎನ್‌ಡಿಪಿಎಸ್ 1986 ಆಕ್ಟ್ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇನ್ನು ಭಾರತಿ ಮನೆಯಲ್ಲಿ ಸಿಕ್ಕಿರುವ ಗಾಂಜಾ ಸಣ್ಣ ಪ್ರಮಾಣದ್ದಾದರೂ ಕೂಡ 10 ವರ್ಷ ಜೈಲು ಶಿಕ್ಷೆ ಆಗುವ ಸಾಧ್ಯತೆಗಳು ಇದೆ ಎನ್ನಲಾಗಿದೆ.

ಈ ಮೊದಲು ಡ್ರಗ್ಸ್‌ ಜಾಲದ ಜತೆ ಸಂಪರ್ಕ ಹೊಂದಿದ ಆರೋಪದಡಿ ಸುಶಾಂತ್‌ ಸಿಂಗ್‌ ಮಾಜಿ ಗೆಳತಿ ರಿಯಾ ಚಕ್ರವರ್ತಿ ಮತ್ತು ಅವರ ಸೋದರ ಶೋವಿಕ್‌ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು. ಬಾಲಿವುಡ್‌ನ ಅನೇಕ ಖ್ಯಾತನಾಮರು ಕೂಡ ಇದರ ಸುಳಿಗೆ ಸಿಲುಕಿ ಬಂಧನಕ್ಕೊಳಗಾಗಿದ್ದಾರೆ.

Click to comment

Leave a Reply

Your email address will not be published. Required fields are marked *

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

Trending