ಮಂಗಳೂರು/ಮುಂಬೈ : ತೆಲುಗು ಚಿತ್ರರಂಗದಲ್ಲಿ ವಿವಾದಗಳಿಗೆ ಕೇರಾಫ್ ಅಡ್ರೆಸ್ ರಾಮ್ ಗೋಪಾಲ್ ವರ್ಮಾ ಅಂದ್ರೆ ತಪ್ಪಾಗಲ್ಲ. ಹೆಚ್ಚಾಗಿ ಅಡಲ್ಟ್ ಸಿನಿಮಾಗಳನ್ನು ಮಾಡಿ ಯುವಜನತೆ ಗಮನಸೆಳೆದಿದ್ದರು. ಮೇಲಾಗಿ ಇವರ ಚಿತ್ರಗಳ ಮೂಲಕ ಹಲವು ನಾಯಕಿಯರು ಸ್ಟಾರ್ ಗಿರಿ ಪಡೆದಿದ್ದಾರೆ ಎನ್ನಬಹುದು. ವರ್ಮಾ ನಿರ್ದೇಶನದ ಒಂದೇ ಒಂದು ಚಿತ್ರ ಅವರ ವೃತ್ತಿಜೀವನವನ್ನು ಬದಲಾಯಿಸುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
ಆರು ವರ್ಷಗಳ ಹಿಂದೆ ನಡೆದ ಘಟನೆಯೊಂದು ಇದೀಗ ರಾಮ್ ಗೋಪಾಲ್ ವರ್ಮಾರ ಕೊರಳಿಗೆ ಸುತ್ತಿಕೊಂಡಿದೆ. ಮುಂಬೈನ ಅಟಾರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಇತ್ತೀಚೆಗೆ ಈ ಪ್ರಕರಣದಲ್ಲಿ ಸಂಚಲನಕಾರಿ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರ್‌ಜಿವಿ ತಪ್ಪಿತಸ್ಥರಾಗಿದ್ದು, ಮೂರು ತಿಂಗಳ ಜೈಲು ಶಿಕ್ಷೆಯ ನೀಡಿದೆ. ಮಂಗಳವಾರ (ಜ.21) ತೀರ್ಪು ಪ್ರಕಟವಾಗಿದೆ. ರಾಮ್‌ಗೋಪಾಲ್ ವರ್ಮಾ ಕೋರ್ಟ್‌ಗೆ ಹಾಜರಾಗಬೇಕಿತ್ತು ಆದರೆ ವರ್ಮಾ ಕೋರ್ಟ್‌ಗೆ ಹಾಜರಾಗಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.
ಈ ಪ್ರಕರಣ ಕಳೆದ ಏಳು ವರ್ಷಗಳಿಂದ ನಡೆಯುತ್ತಿತ್ತು. ಆದರೆ ಆರ್‌ಜಿವಿಗೆ ನೋಟಿಸ್ ನೀಡಿದರೂ ಕೋರ್ಟ್‌ಗೆ ಹಾಜರಾಗಿಲ್ಲ. ಮುಂದಿನ ಮೂರು ತಿಂಗಳಲ್ಲಿ ದೂರುದಾರರಿಗೆ ಆರ್‌ಜಿವಿ ರೂ.3.72 ಲಕ್ಷ ಪರಿಹಾರ ನೀಡಲು ಕೋರ್ಟ್ ಆದೇಶ ನೀಡಿದೆ. ಪಾವತಿಸಲು ವಿಫಲವಾದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದೆ.
ಮಂಗಳೂರು/ಮುಂಬೈ : ಬಿಗ್ ಬಿ ಅಮಿತಾಬ್ ಬಚ್ಚನ್ ಮುಂಬೈನ ಓಶಿವಾರಾದಲ್ಲಿರುವ ತಮ್ಮ ಡುಪ್ಲೆಕ್ಸ್ ಅಪಾರ್ಟ್ಮೆಂಟ್ ಅನ್ನು ಮಾರಾಟ ಮಾಡಿದ್ದಾರೆ. ಭಾರೀ ಮೊತ್ತಕ್ಕೆ ಅಪಾರ್ಟ್ಮೆಂಟ್ ಮಾರಾಟವಾಗಿದೆ. ಹೌದು, 31 ಕೋಟಿ ಕೊಟ್ಟು ಅಪಾರ್ಟ್ಮೆಂಟ್ ಖರೀದಿಸಿದ್ದ ಬಿಗ್ ಬಿ ಈಗ ಲಾಭ ಪಡೆದಿದ್ದಾರೆ.
ಓಶಿವಾರಾದಲ್ಲಿ ಕ್ರಿಸ್ಟಲ್ ಗ್ರೂಪ್‌ನ ವಸತಿ ಸಮುಚ್ಚಯವಾದ ‘ದಿ ಅಟ್ಲಾಂಟಿಸ್’ನಲ್ಲಿ ಅಮಿತಾಬ್ ಅಪಾರ್ಟ್ಮೆಂಟ್ ಇದೆ. 2021ರ ಎಪ್ರಿಲ್‌ನಲ್ಲಿ ಈ ಅಪಾರ್ಟ್ಮೆಂಟ್ ಅನ್ನು ಅಮಿತಾಬ್ ಖರೀದಿಸಿದ್ದರು. ಅವರು 31 ಕೋಟಿ ಕೊಟ್ಟಿದ್ದರು. ಅದೇ ವರ್ಷ ನವೆಂಬರ್‌ನಲ್ಲಿ ನಟಿ ಕೃತಿ ಸನೋನ್‌ಗೆ ಭದ್ರತಾ ಠೇವಣಿ 60 ಲಕ್ಷ ಮತ್ತು ಮಾಸಿಕ 10 ಲಕ್ಷ ರೂ. ಬಾಡಿಗೆಗೆ ನೀಡಿದ್ದರು ಎನ್ನಲಾಗಿದೆ.
ಈಗ ಈ ಅಪಾರ್ಟ್ಮೆಂಟ್‌ನ್ನು ಅಮಿತಾಬ್ ಬಚ್ಚನ್ 83 ಕೋಟಿಗೆ ಮಾರಾಟ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ. ನೋಂದಣಿ ಮಹಾಪರಿವೀಕ್ಷಕ ಹಾಗೂ ಮುದ್ರಾಂಕ ಆಯುಕ್ತರ(ಐಜಿಆರ್) ಪ್ರಕಾರ, ಈ ಅಪಾರ್ಟ್ಮೆಂಟ್ ಅನ್ನು 83 ಕೋಟಿ ರೂ. ಗೆ ಮಾರಾಟ ಮಾಡಲಾಗಿದೆ. ಈ ಮೂಲಕ ಅವರು ಶೇ.168ರಷ್ಟು ಲಾಭ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಅಂದ್ಹಾಗೆ ಮುಂಬೈನ ಓಶಿವಾರಾವು ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಪ್ರದೇಶ. ಆಧುನಿಕ ಜೀವನಶೈಲಿಗೆ ತಕ್ಕ ಜಾಗ. ಉತ್ತಮ ರಸ್ತೆಗಳು, ಮೆಟ್ರೋ ಸಂಪರ್ಕಗಳನ್ನು ಹೊಂದಿದೆ.
ಮಂಗಳೂರು/ಮುಂಬೈ : ಬಾಲಿವುಡ್ ನಟ ಸೈಫ್ ಆಲಿ ಖಾನ್ ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಚೂರಿ ಇ*ರಿತಕ್ಕೊಳಗಾಗಿ ಗಂ*ಭೀರವಾಗಿ ಗಾ*ಯಗೊಂಡ ಸೈಫ್ ಆಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೈಫ್ ಆಲಿ ಖಾನ್‌ಗೆ 2 ಸರ್ಜರಿ ಮಾಡಲಾಗಿದೆ. ಚಿಕಿತ್ಸೆಯಿಂದ ಚೇತರಿಸಿಕೊಂಡಿರುವ ಸೈಫ್ ಆಲಿ ಖಾನ್ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೈಫ್ ಪತ್ನಿ ಕರೀನಾ ಕಪೂರ್ ಖಾನ್, ತಾಯಿ ಶರ್ಮಿಳಾ ಠಾಗೂರ್ ಜೊತೆ ಬಾಂದ್ರಾ ಮನೆಗೆ ಮರಳಿದ್ದಾರೆ ಎಂದು ತಿಳಿದುಬಂದಿದೆ. ಸೈಫ್‌ಗೆ ಕೆಲ ತಿಂಗಳುಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎನ್ನಲಾಗಿದೆ.
ಗಾ*ಯ ಗುಣವಾಗಲು ಹಾಗೂ ಸೈಫ್ ಸಂಪೂರ್ಣ ಚೇತರಿಸಿಕೊಳ್ಳಲು ಕೆಲವು ಸಮಯ ಹಿಡಿಯಲಿದೆ. ಹೀಗಾಗಿ ವಿಶ್ರಾಂತಿ ಅಗತ್ಯವಿದೆ. ಇನ್ಫೆಕ್ಷನ್ ಆಗದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ಮುಂಬೈನ ಲೀಲಾವತಿ ಆಸ್ಪತ್ರೆ ಬಳಿ ಭಾರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು. ಅಲ್ಲದೇ, ಸೈಫ್ ಆಲಿ ಖಾನ್ ಮನೆ ಬಳಿಯೂ ಪೊಲೀಸರನ್ನು ನಿಯೋಜಿಸಲಾಗಿದೆ.
ಬೆಂಗಳೂರು/ಮಂಗಳೂರು : ಚಂದನವನದ ಯಶಸ್ವಿ ಚಿತ್ರ ಕಾಂತಾರದ ಪ್ರೀಕ್ವೆಲ್‌ಗಾಗಿ ಸಿನಿರಸಿಕರು ಕಾಯುತ್ತಿರೋದು ಸುಳ್ಳಲ್ಲ. ಚಿತ್ರದ ಶೂಟಿಂಗ್ ಏನೋ ಭರದಿಂದ ಸಾಗುತ್ತಿದೆ. ಈ ನಡುವೆ ಚಿತ್ರತಂಡದ ಎಡವಟ್ಟಿಗೆ ದಂಡ ತೆರುವಂತಾಗಿದೆ.
ಚಿತ್ರೀಕರಣದ ವೇಳೆ ಸಕಲೇಶಪುರ ಅರಣ್ಯದಲ್ಲಿ ಅಕ್ರಮವಾಗಿ ಶೂಟಿಂಗ್ ಸೆಟ್ ವಸ್ತುಗಳನ್ನು ಸುರಿದಿದ್ದಕ್ಕಾಗಿ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಗೆ ಅರಣ್ಯ ಇಲಾಖೆ ಅಧಿಕಾರಿಗಳು 50,000 ರೂ. ದಂಡ ವಿಧಿಸಿದ್ದಾರೆ.
ಸಕಲೇಶಪುರ ಅರಣ್ಯದ ಸರ್ವೇ ಸಂಖ್ಯೆ 131 ರ ಡೀಮ್ಡ್ ಫಾರೆಸ್ಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಜನವರಿ 2 ರಿಂದ ಪ್ರೀಕ್ವೆಲ್‌ನ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡ, ಶೂಟಿಂಗ್ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು, ಚಿತ್ರತಂಡದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಗ್ರಾಮಸ್ಥರ ಆರೋಪದ ಬೆನ್ನಲ್ಲೇ ಅರಣ್ಯ ಇಲಾಖೆ ಚಿತ್ರತಂಡದ ವಿರುದ್ಧ ಕ್ರಮ ಕೈಗೊಂಡಿದೆ.