Sunday, November 27, 2022

ಜಿಮ್‌ನಲ್ಲಿ ಕುಸಿದು ಬಿದ್ದು ಕಿರುತೆರೆ ನಟ ಸಿದ್ದಾಂತ್ ವೀರ್ ಸೂರ್ಯವಂಶಿ ದಾರುಣ ಮೃತ್ಯು..!

ಮುಂಬೈ: ‘ಕುಸುಮ್’ ಮತ್ತು ‘ಕಸೌಟಿ ಜಿಂದಗಿ ಕೇ’ ನಂತಹ ಶೋಗಳಲ್ಲಿನ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ಖ್ಯಾತ ಕಿರುತೆರೆ ನಟ ಸಿದ್ಧಾಂತ್ ವೀರ್ ಸೂರ್ಯವಂಶಿ ಮುಂಬೈಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

46 ವಯಸ್ಸಿನ ಸೂರ್ಯವಂಶಿ ಜಿಮ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ವ್ಯಾಯಾಮ ಮಾಡುವಾಗ ಕುಸಿದ್ದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಅವರು ಪತ್ನಿ ಅಲೆಸಿಯಾ ರಾವುತ್ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಆನಂದ್ ಸೂರ್ಯವಂಶಿ ಎಂದೂ ಕರೆಯಲ್ಪಡುವ ಸಿದ್ದಾಂತ್ ವೀರ್ ಸೂರ್ಯವಂಶಿ ಕಿರುತೆರೆ ಜಗತ್ತಿನಲ್ಲಿ ಜನಪ್ರಿಯ ಮುಖವಾಗಿದ್ದರು.

ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ‘ಕುಸುಮ್’ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದರು.

ಅವರು ‘ಕಸೌಟಿ ಜಿಂದಗಿ ಕೇ’, ‘ಸುಫಿಯಾನಾ ಇಷ್ಕ್ ಮೇರಾ’, ‘ಜಿದ್ದಿ ದಿಲ್ ಮಾನೆ ನಾ’ ಮತ್ತು ‘ವಾರಿಸ್’ ಸೇರಿದಂತೆ ಹಲವಾರು ಇತರ ಟಿವಿ ಕಾರ್ಯಕ್ರಮಗಳ ಭಾಗವಾಗಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...