Wednesday, January 27, 2021

ರಂಗಸ್ಥಳದಲ್ಲೇ ಕಾಲನ ಕರೆಗೆ ಓಗೊಟ್ಟ ಬಡಗು ತಿಟ್ಟಿನ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ..!

ರಂಗಸ್ಥಳದಲ್ಲೇ ಕಾಲನ ಕರೆಗೆ ಓಗೊಟ್ಟ ಬಡಗು ತಿಟ್ಟಿನ ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ..!

ಉಡುಪಿ: ಬಡಗು ತಿಟ್ಟು ಯಕ್ಷಗಾನ ರಂಗದ  ಕಲಾವಿದರೊಬ್ಬರು ಹೃದಯಾಘಾತದಿಂದ  ರಂಗಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ,ಉಡುಪಿ ಶಿರಿಯಾರ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎನ್ನುವಲ್ಲಿ ನಡೆದಿದೆ.ಮಂದಾರ್ತಿ ಮೇಳದ ಪ್ರಧಾನ ವೇಷಧಾರಿ  58 ರ ಹರೆಯ ಸಾಧು ಕೊಠಾರಿ ರಂಗಸ್ಥಳದಲ್ಲೇ ಸಾವನ್ನಪ್ಪಿದ ಕಲಾವಿದರಾಗಿದ್ದಾರೆ. ಮೇಳದ ಪ್ರಧಾನ ವೇಷಧಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಾದು ಕೊಠಾರಿಯವರು, ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ `ಮಹಾಕಲಿ ಮಗದೇಂದ್ರ’ ಪ್ರಸಂಗದಲ್ಲಿ ಮಾಗಧನಾಗಿ ಪ್ರದರ್ಶನ ನೀಡುತ್ತಿದ್ದ ವೇಳೆ  ಹೃದಯಘಾತವಾಗಿದೆ.

ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮೇಳದ ಮ್ಯಾನೇಜರ್ ತಕ್ಷಣ ಅವರ ವೇಷ ಕಳಚಿ  ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಆಸ್ಪತ್ರೆ ತಲುಪುವ ಮಾರ್ಗ ಮಧ್ಯದಲ್ಲೇ ಸದಾಶಿವ ಕೊಠಾರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಸ್ತುತ ಉಡುಪಿ ಬಾರಕೂರಿನಲ್ಲಿ ಕುಟುಂಬದೊಂದಿಗೆ ನೆಲೆಸಿದ್ದ ಸಾಧು ಕೊಠಾರಿಯವರು   ಸುಮಾರು 40 ವರ್ಷಕ್ಕೂ ಹೆಚ್ಚು ಕಾಲ ಯಕ್ಷ ತಿರುಗಾಟ ನಡೆಸಿ ಬಡಗುತಿಟ್ಟಿನ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

ಯಕ್ಷ ಕಲಾವಿದ ಕೊಠಾರಿ ನಿಧನಕ್ಕೆ ಯಕ್ಷಗಾನ ರಂಗ ಕಂಬನಿ ಮಿಡಿದಿದೆ..

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.