ಮಂಗಳೂರು/ಚೆನ್ನೈ : ಇತ್ತೀಚೆಗೆ ರವಿಚಂದ್ರನ್ ಆಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿ ಕ್ರಿಕೆಟ್ ಜಗತ್ತನ್ನು ಮತ್ತು ಅವರ ಅಭಿಮಾನಿಗಳನ್ನು ದಿಗ್ಬ್ರಮೆಗೊಳಿಸಿದ್ದರು. ಇದೀಗ ಹಿಂದಿ ಭಾಷೆ ವಿಚಾರದಲ್ಲಿ ಮತ್ತೆ ಹೆಡ್ ಲೈನ್ ಆಗಿದ್ದಾರೆ.
ಏನಿದು ವಿವಾದ
ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಚೆನ್ನೈನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ್ದರು. ಪದವಿ ಪ್ರದಾನ ಸಮಾರಂಭ ಹಿನ್ನೆಲೆಯಲ್ಲಿ ಅಶ್ವಿನ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ವೇದಿಕೆಗೆ ಆಗಮಿಸಿದ್ದ ಅಶ್ವಿನ್, ಸಭಿಕರಲ್ಲಿ ಪ್ರಶ್ನೆಯನ್ನು ಕೇಳಿದರು.
‘ಇಲ್ಲಿ ಎಷ್ಟು ಜನ ಇಂಗ್ಲಿಷ್ ಮಾತನಾಡುತ್ತಾರೆ’ ಎಂದು ಮೊದಲ ಪ್ರಶ್ನೆ ಕೇಳಿದರು. ವೇದಿಕೆ ಮುಂಭಾಗದಲ್ಲಿದ್ದ ಸಭಿಕರು ಕೈ ಎತ್ತಿದ್ದಾರೆ. ಅದೇ ರೀತಿ ಎಷ್ಟು ಜನ ತಮಿಳು ಮಾತನಾಡುತ್ತಾರೆ ಎಂದು ಕೇಳಿದ್ದಾರೆ. ಆಗ ಇಡೀ ಸಭಾಂಗಣ ಪ್ರತಿಧ್ವನಿಸಿದೆ. ನಂತರ ‘ಎಷ್ಟು ಜನ ಹಿಂದಿ ಮಾತನಾಡುತ್ತಾರೆ’ ಎಂದಿದ್ದಾರೆ. ಆಗ ಸಭಾಂಗಣದಲ್ಲಿ ಮೌನ ಆವರಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಅಶ್ವಿನ್ ‘ಹಿಂದಿ ರಾಷ್ಟ್ರಭಾಷೆಯಲ್ಲ; ಅಧಿಕೃತ ಭಾಷೆ’ ಎಂದಿದ್ದಾರೆ. ಅಶ್ವಿನ್ ಅವರ ಈ ಹೇಳಿಕೆಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಸೇರಿದಂತೆ ಹಲವು ವಿರೋಧ ಪಕ್ಷಗಳು ಕೇಂದ್ರವು ರಾಜ್ಯಗಳ ಮೇಲೆ, ವಿಶೇಷವಾಗಿ ದಕ್ಷಿಣದಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಅಶ್ವಿನ್ ನೀಡಿರುವ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ನೀವು ಚಿಕ್ಕವರಾಗಿರಲಿ ಅಥವಾ ವಯಸ್ಸಾದವರಾಗಿರಲಿ ಸಿಹಿತಿಂಡಿ ಸೇವಿಸಿದ ನಂತರ ಹಲ್ಲುಗಳನ್ನ ಸ್ವಚ್ಛಗೊಳಿಸುವಲ್ಲಿನ ಅಜಾಗರೂಕತೆಯು ಹಲ್ಲುಗಳಿಗೆ ಸೋಂಕು ತಗುಲಿಸಬಹುದು. ಇದು ಇಡೀ ಹಲ್ಲನ್ನು ಹಾನಿಗೊಳಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ಜನರು ದಂತವೈದ್ಯರ ಬಳಿಗೆ ಹೋಗುತ್ತಾರೆ ಮತ್ತು ಆಗಾಗ್ಗೆ ಹಲ್ಲುಗಳನ್ನ ಕೀಳಬೇಕಾಗುತ್ತದೆ. ಯಾಕಂದ್ರೆ, ಇದು ಇತರ ಹಲ್ಲುಗಳಿಗೆ ಹಾನಿ ಮಾಡುವ ಅಪಾಯವನ್ನ ಹೆಚ್ಚಿಸುತ್ತದೆ.
ಇಂದಿಗೂ ಸಹ ನಾವು ನಮ್ಮ ಹಿರಿಯರ ಹಳೆಯ ಪರಿಹಾರಗಳನ್ನ ಅನುಸರಿಸುವ ಮೂಲಕ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು. ಇಂದು ನಾನು ನಿಮಗೆ ಅಂತಹ ಮನೆಮದ್ದನ್ನ ಹೇಳಲಿದ್ದೇನೆ, ಅದನ್ನು ಬಳಸಿಕೊಂಡು ನೀವು ದಂತವೈದ್ಯರ ಬಳಿಗೆ ಹೋಗದೆ ಹಲ್ಲಿನ ಹುಳುಗಳನ್ನ ತೊಡೆದು ಹಾಕಬಹುದು.
ಚಾಕೊಲೇಟ್ ತಿನ್ನುವುದರಿಂದ ಮಕ್ಕಳ ಹಲ್ಲುಗಳು ಹಾನಿಗೊಳಗಾಗುತ್ತವೆ. ಆಹಾರ ಅಥವಾ ಸಿಹಿತಿಂಡಿಗಳನ್ನು ಸೇವಿಸಿದ ನಂತರ ನಾವು ತೊಳೆಯುವುದಿಲ್ಲ. 10 ರಿಂದ 12 ವರ್ಷ ವಯಸ್ಸಿನಲ್ಲಿ, ಕುಳಿಗಳಿಂದಾಗಿ ಮಕ್ಕಳ ಹಲ್ಲುಗಳು ಕ್ಷೀಣಿಸಲು ಪ್ರಾರಂಭಿಸುತ್ತವೆ.
ಇದನ್ನು ತಡೆಗಟ್ಟಲು ಸುಲಭ ಮಾರ್ಗವಿದೆ. ಯಾರಿಗಾದರೂ ಹಲ್ಲಿನಲ್ಲಿ ಕುಳಿ ಇದ್ದರೆ, ನೀವು ಅದನ್ನು ಮನೆಯಲ್ಲಿಯೇ ತೆಗೆದುಹಾಕಬಹುದು. ಮೊದಲಿಗೆ, ಈರುಳ್ಳಿ ಬೀಜಗಳನ್ನ ಮಾರುಕಟ್ಟೆಯಿಂದ ತರಬೇಕು. ನಂತರ ಬೆಂಕಿಯನ್ನ ಹೊತ್ತಿಸಿ ಕೆಂಡದ ಮೇಲೆ ಈರುಳ್ಳಿ ಬೀಜಗಳನ್ನ ಹಾಕಿ ಬಂದ ಹೊಗೆಯನ್ನ ಬಾಯಿಯಲ್ಲಿ ಶೇಖರಿಸಿ ನಂತ್ರ ಮುಚ್ಚಿ. ಈ ಪ್ರಕ್ರಿಯೆಯನ್ನ ಎರಡರಿಂದ ಮೂರು ಬಾರಿ ಮಾಡಿ. ಈಗ ನಿಮ್ಮ ಬಾಯಿಯಲ್ಲಿ ನೀರು ಹಾಕಿಕೊಂಡು ಮುಕ್ಕಳಿಸಿ ಆ ಬಟ್ಟಲಿನಲ್ಲಿ ಉಗುಳಿ. ಈಗ ಆ ಬಟ್ಟಲಿನಲ್ಲಿರುವ ನೀರಿನಲ್ಲಿ ಎಲ್ಲಾ ಹುಳುಗಳು ಗೋಚರಿಸುತ್ತವೆ.