Friday, August 12, 2022

ಡಿಸಿಪಿ ಹರಿರಾಂ ಶಂಕರ್‌ಗೆ ಮಂಗಳೂರು ನಗರ ಪೊಲೀಸರ ಹೃದಯಸ್ಪರ್ಶಿ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್‌ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್‌, ಮಂಗಳೂರಿನಲ್ಲಿ ವಿವಿಧ ಹಾಗೂ ವಿರೋಧಿ ಸಂಘಟನೆಗಳನ್ನು ಸಮತೂಗಿಸಿಕೊಂಡು ಕರ್ತವ್ಯ ನಿರ್ವಹಿಸುವುದು ಸವಾಲಿನ ವಿಚಾರ.

ಈವರೆಗೆ ನನಗೆ ಇಲಾಖೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಉತ್ತಮ ಸಹಕಾರ ನೀಡಿದ್ದಾರೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಂದ ನಾಯಕತ್ವದಿಂದ ಬಹಳಷ್ಟು ಕಲಿತಿದ್ದೇನೆ ಎಂದರು.


ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ನಗರದಲ್ಲಿ ಕಳೆದ ಎರಡು ವರ್ಷಗಳಲ್ಲಿ ಬಗೆಹರಿಸಲಾಗಿರುವ ಎಲ್ಲಾ ಪ್ರಕರಣಗಳಲ್ಲೂ ಡಿಸಿಪಿಯಾಗಿ ಹರಿರಾಂ ಶಂಕರ್ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿದ್ದಾರೆ ಎಂದರು.


ಈ ಸಂದರ್ಭ ಡಿಸಿಪಿ ದಿನೇಶ್ ಕುಮಾರ್ ಸೇರಿ ಹಲವು ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ: ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಕಿಂಡರ್‌ ಗಾರ್ಡನ್‌ ಶಿಕ್ಷಕಿಯ ಡೆಡ್‌ಬಾಡಿ ಬಾವಿಯಲ್ಲಿ ಪತ್ತೆ

ಮಂಗಳೂರು: ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಲಿಟಲ್ ಕಿಂಡರ್ ಗಾರ್ಡನಿನ ಶಿಕ್ಷಕಿ ಮೃತದೇಹ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ.ಮೃತರನ್ನು ಹರಿಣಾಕ್ಷಿ(50) ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ ಹರಿಣಾಕ್ಷಿ ಮನೆಯಲ್ಲಿ...

“ಸ್ವಾತಂತ್ರ್ಯ ಬಂದು 75 ವರ್ಷವಾದರೂ ಲೋಕಾಯುಕ್ತ ಬೆಂಬಲಿಸುವ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ”

ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.ಬೆಂಗಳೂರು ವಕೀಲರ...

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...