ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳನ್ನು ಪರಿಗಣಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಮೂರೂ ವಿವಾದಾತ್ಮಕ ಕಾನೂನುಗಳು ಜಾರಿಗೆ ಬಂದು ಒಂದು ವರ್ಷ ಕಳೆದಿದೆ. ಕಾಯ್ದೆಗಳನ್ನು ವಿರೋಧಿಸಿ ಸಾವಿರಾರು ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು ನವೆಂಬರ್ 2020ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
‘ಕೇಂದ್ರ ಸರ್ಕಾರವು ಅವರ ಬೇಡಿಕೆಗಳನ್ನು ಪರಿಗಣಿಸಬೇಕು. ರೈತರೂ ನಮ್ಮ ದೇಶದ ಜನರಾಗಿರುವುದರಿಂದ ಅವರ ಬೇಡಿಕೆ ಈಡೇರಿಸಿದರೆ ಯಾರ ಮುಂದೆಯೂ ತಲೆಬಾಗಿದಂತೆ ಆಗುವುದಿಲ್ಲ’ ಎಂದು ಕೇಜ್ರಿವಾಲ್ ಹೇಳಿದರು.
ರೈತರು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪದೇ ಪದೇ ಭಾರತ್ ಬಂದ್‌ಗೆ ಕರೆ ನೀಡುತ್ತಿದ್ದಾರೆ. ಅವರ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಕೇಂದ್ರವು ಅವುಗಳನ್ನು ಪರಿಗಣಿಸಬೇಕು ಎಂದು ಅವರು ಹೇಳಿದರು.