ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಾಣಿಯ ಬುಡೋಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫಾರೂಕ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮಾಣಿಯ ಬುಡೋಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫಾರೂಕ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬುಡೋಳಿಯ ಪಾಟ್ರಕೋಡು ನಿವಾಸಿಯಾಗಿರುವ 35 ವರ್ಷದ ಫಾರೂಕ್ ಗೆ 10ವರ್ಷಗಳ ಹಿಂದೆ ವಿವಾಹವಾಗಿತ್ತು, ಆದ್ರೆ ಮೊನ್ನೆಯಷ್ಠೇ ಅವರ ಪತ್ನಿಗೆ ಹೆರಿಗೆಯಾಗಿತ್ತು.
ಈ ನಿಟ್ಟಿನಲ್ಲಿ ಫಾರೂಕ್ ಅವರು ಮಗುವನ್ನು ನೋಡಲು ದೇರಳಕಟ್ಟೆಯ ಆಸ್ಪತ್ರೆಗೆ ತೆರಳುವಾಗ ಆಸ್ಪತ್ರೆಯ ಬಳಿಯೇ ಅಪಘಾತ ಸಂಭವಿಸಿತ್ತು.
ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.