Connect with us

    DAKSHINA KANNADA

    ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾ*ತ; ಸವಾರ ಸಾ*ವು

    Published

    on

    ಪುತ್ತೂರು : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾ*ತ ಸಂಭವಿಸಿ ಆಕ್ಟಿವಾ ಸವಾರ ಮೃ*ತಪಟ್ಟಿರುವ ಘಟನೆ ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದಿದೆ.

    ಇಂದಿರಾ ನಗರ ನಿವಾಸಿ ಗಣೇಶ್ ಪ್ರಭು ಮೃ*ತಪಟ್ಟವರು. ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿ*ಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಣೇಶ್ ಆಕ್ಟಿವಾ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು, ಗಂ*ಭೀರ ಗಾ*ಯಗೊಂಡಿದ್ದರು.

    ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ. ಮೃ*ತ ಗಣೇಶ್ ಹೋಳಿಗೆ ವ್ಯಾಪಾರಿಯಾಗಿದ್ದರು ಎಂದು ತಿಳಿದುಬಂದಿದೆ.

    DAKSHINA KANNADA

    ಮೂಡುಬಿದಿರೆ : ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಕಳ್ಳರ ಬಂಧನ

    Published

    on

    ಮೂಡುಬಿದಿರೆ : ಆತ ಒಬ್ಬ ಖತರ್ನಾಕ್‌ ಕ್ರಿಮಿನಲ್‌ ಆಗಿದ್ದು, ಆತನ ಮೇಲೆ ಹಲವು ಪೊಲೀಸ್ ಠಾಣೆಯಲ್ಲಿ 42 ಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿತ್ತು. ಹಲವು ಪೊಲೀಸ್ ಠಾಣೆಯಲ್ಲಿ ಈತನ ಮೇಲೆ ವಾರೆಂಟ್ ಇದ್ರೂ ಆತ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್‌ ಆಗ್ತಾನೆ ಇದ್ದ. ಇತ್ತೀಚೆಗೆ ಆಗಸ್ಟ್‌ ತಿಂಗಳಲ್ಲಿ ಮೂಡುಬಿದ್ರೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆತ ವೃದ್ಧ ಮಹಿಳೆಯರನ್ನು ಗುರಿಯಾಗಿಸಿ ಅವರ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದ.

    ಮೂಡಬಿದ್ರೆಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ನಿರ್ಮಲಾ ಪಂಡಿತ್ ಎಂಬ 70 ವರ್ಷದ ವೃದ್ದೆಯ 24 ಗ್ರಾಂ ಚಿನ್ನದ ಸರ ಹಾಗೂ ಸೆಪ್ಟಂಬರ್ ತಿಂಗಳಲ್ಲಿ ಮಾರ್ನಾಡು ಗ್ರಾಮದ ಬಸದಿ ಬಳಿ 82 ವರ್ಷ ಪ್ರಾಯದ ಪ್ರೇಮಾ ಎಂಬ ವೃದ್ಧೆಯ 24 ಗ್ರಾಂ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ. ಈ ಎರಡೂ ಪ್ರಕರಣದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಈ ಕೃತ್ಯ ನಡೆಸಿದ ವಿಚಾರ ಪೊಲೀಸರ ಗಮನಕ್ಕೆ ಬಂದಿತ್ತು.

    ಇದನ್ನೂ ಓದಿ :ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾ*ತ; ಸವಾರ ಸಾ*ವು

    ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಕೊನೆಗೂ ಆರೋಪಿಯನ್ನು ಪತ್ತೆ ಹಚ್ಚಿದಾಗ ಇದು ಖತರ್ನಾಕ್‌ ಖದೀಮ ಚೆಂಬುಗುಡ್ಡೆಯ ಹಬೀಬ್‌ ಹಸನ್‌ ಕೃತ್ಯ ಎಂಬುದು ಗೊತ್ತಾಗಿದೆ. ಈತನ ಮೇಲೆ ವಿವಿಧ ಠಾಣೆಯಲ್ಲಿ 15 ಕ್ಕೂ ಹೆಚ್ಚು ಬಂಧನದ ವಾರೆಂಟ್ ಇದ್ರೂ ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳುತ್ತಿದ್ದ. ಇದೀಗ ಮೂಡುಬಿದ್ರೆಯಲ್ಲಿ ಕೊ*ಲೆ ಆರೋಪಿ ಬಂಟ್ವಾಳದ ಉಮ್ಮರ್ ಸಿಯಾಫ್ ಎಂಬಾತನ ಜೊತೆ ಸೇರಿ ಸರ ಕಳ್ಳತನಕ್ಕೆ ಇಳಿದಿದ್ದ. ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಆರೋಪಿಗಳಿಂದ 2.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃ*ತ್ಯಕ್ಕೆ ಬಳಿಸಿದ್ದ ಸ್ಕೂಟರ್ ವಶಕ್ಕೆ ಪಡೆದಿದ್ದಾರೆ.

    Continue Reading

    DAKSHINA KANNADA

    ಸೌದಿ ಅರೇಬಿಯಾದಲ್ಲಿ ಭೀಕರ ಕಾರು ಅ*ಪಘಾತ; ಉಳ್ಳಾಲದ ತಾಯಿ – ಮಗು ಮೃ*ತ್ಯು

    Published

    on

    ಉಳ್ಳಾಲ: ಸೌದಿ ಅರೇಬಿಯಾದ ಧಮಾಮ್ ಬಳಿ ಶುಕ್ರವಾರ(ಸೆ.20) ನಡೆದ ಭೀಕರ ರಸ್ತೆ ಅಪ*ಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತಾಯಿ, ಮಗು ಸಾ*ವನ್ನಪ್ಪಿದ್ದಾರೆ.


    ಹೈದರ್ ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಎರಡೂವರೆ ವರ್ಷದ ಮೊಮ್ಮಗ ಮೃತ ದು*ರ್ದೈವಿಗಳು. ಶುಕ್ರವಾರ ಸಂಜೆ ವೇಳೆ ಮದೀನದಿಂದ ಕಾರಿನಲ್ಲಿ ಸಫಾ ಫಾತಿಮಾ ತನ್ನ ಪತಿ ಮಲಪುರಂ ಆರಿಕೋಡ್ನ ಸುಹೈಲ್ (35) ಮತ್ತು ಸಹೋದರ ಮುಹವಿಯ(23) ಜೊತೆಗೆ ದಮಾಮ್ ನಲ್ಲಿರುವ ಹೈದರ್ ಉಳ್ಳಾಲ್ ಅವರ ಮನೆಗೆ ತೆರಳುತ್ತಿದ್ದರು.
    ಈ ವೇಳೆ ಕಾರು ಅ*ಪಘಾತವಾಗಿದ್ದು, ಕಾರಿನಲ್ಲಿದ್ದ ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6) ಹಾಗೂ ಅಹ್ಮದ್ (5) ತೀವ್ರ ಗಾ*ಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ

    Continue Reading

    DAKSHINA KANNADA

    ಹಳ್ಳ ಹಿಡಿದ ಸ್ಮಾರ್ಟ್‌ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್

    Published

    on

    ಮಂಗಳೂರು: ಮಂಗಳೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್‌ ಪಾಸ್‌ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್‌ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.

    ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್‌ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.

    ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ; ಓರ್ವ ಬಂಧನ

    ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.

    Continue Reading

    LATEST NEWS

    Trending